ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಆರ್ 58 ರನ್‌ಗಳಿಂದ ಸೋಲು
GT Vs RR: ಐಪಿಎಲ್ 2025ರ ಆವೃತ್ತಿಯ 23ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 58 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಹಾಗಾದ್ರೆ ಯಾರೆಲ್ಲ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ಮಾಡಿದ ಗುಜರಾತ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ಬೃಹತ್ ರನ್‌ಗಳನ್ನು ಕಲೆಹಾಕುವ ಮೂಲಕ 218ರನ್‌ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ರಾಜಸ್ಥಾನ್ ರಾಯಲ್ಸ್ 19.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ಗಳನ್ನಷ್ಟೇ ಕಲೆಹಾಕಿ ಸೋಲನುಭವಿಸಿತು.

ಗುಜರಾತ್ ಟೈಟಾನ್ಸ್ ಪರ ಆರಂಭಿಕ ಬ್ಯಾಟ್ಸ್ಮನ್ ಸಾಯಿ ಸುದರ್ಶನ್ 82 ರನ್‌ಗಳನ್ನು ಸಿಡಿಸುವ ಮೂಲಕ ತಂಡಕ್ಕೆ ನೆರವಾದರು. ಜೋಸ್ ಬಟ್ಲರ್ 36 ಹಾಗೂ ಶಾರುಖ್ ಖಾನ್ 36 ರನ್‌ಗಳನ್ನು ಸಿಡಿಸುವ ಮೂಲಕ ಸುದರ್ಶನ್ಗೆ ಸಾಥ್ ನೀಡಿ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಇನ್ನು ನಾಯಕ ಶುಭ್ಮನ್ ಗಿಲ್ 2, ರಥರ್‌ಫೋರ್ಡ್ 7, ರಾಹುಲ್ ತಿವಾಟಿಯಾ 24, ರಶಿದ್ ಖಾನ್ 12 ರನ್ ಕಲೆಹಾಲಿದರು ಅಷ್ಟೇ. ಇನ್ನೂ ಬೌಲಿಂಗ್ ವಿಭಾಗಕ್ಕೆ ಬಂದರೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು 159 ರನ್‌ಗಳನ್ನು ಕಟ್ಟಿಹಾಕುವ ಮೂಲಕ ಗುಜರಾತ್ ಟೈಟಾನ್ಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಗುಜರಾತ್ ಪರ ಬೌಲಿಂಗ್ ಮಾಡಿದ ಪ್ರಸಿದ್ಧ್ ಕೃಷ್ಣ 3 ವಿಕೆಟ್, ರಶಿದ್ ಖಾನ್ ಹಾಗೂ ಸಾಯಿ ಕಿಶೋರ್ ತಲಾ 2, ಮೊಹಮ್ಮದ್ ಸಿರಾಜ್, ಅರ್ಷದ್ ಖಾನ್ ಹಾಗೂ ಕುಲ್ವಂತ್ ತಲಾ 1 ವಿಕೆಟ್ ಕಬಳಿಸುವ ಮೂಲಕ ಗುಜರಾಜ್ ತಂಡವನ್ನು 159 ರನ್‌ಗಳನ್ನು ಕಟ್ಟಿಹಾಕುವ ಮೂಲಕ ಗುಜರಾತ್ ಟೈಟಾನ್ಸ್ 58 ರನ್‌ಗಳಿಂದ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದರು.
ಗುಜರಾತ್ ನೀಡಿದ 218ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಲುಪುವಲ್ಲಿ ವಿಫಲವಾಯಿತು.
ಪವರ್ ಪ್ಲೇನಲ್ಲಿ ಯಶಸ್ವಿ ಜೈಸ್ವಾಲ್ 6, ನಿತೀಶ್ ರಾಣಾ 1 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿ ಪೆವಿಲಿಯನ್‌ನತ್ತ ತೆರಳಿದರು. ಇದರಿಂದ ಆರಂಭಿಕದಲ್ಲೇ ಆರ್‌ಆರ್ ಆಘಾತಕ್ಕೆ ಒಳಗಾಯಿತು. ನಂತರ ರಿಯಾನ್ ಪರಾಗ್ 14 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ಗಳ ಸಹಿತ 26ರನ್ಗಳಿಸಿದರು. ಆದರೆ 7ನೇ ಓವರ್ನಲ್ಲಿ ಖೆಜ್ರೋಲಿಯಾ ಬೌಲಿಂಗ್ನಲ್ಲಿ ಕ್ಯಾಚ್ ನೀಡಿ ಔಟಾದರು.
ಬಳಿಕ ಬಂದ ಧ್ರುವ್ ಜುರೆಲ್ ಕೇವಲ 5 ರನ್ಗಳಿಗೆ ಔಟ್ ಆಗಿ ಪೆವಲಿಯನ್ ಸೇರಿಕೊಂಡ್ರು. 68ಕ್ಕೆ 4 ವಿಕೆಟ್ ಕಳೆದುಕೊಂಡು 100 ರನ್ಗಳಿಸುವುದು ಅನುಮಾನ ಎನ್ನುವ ಹಂತಕ್ಕೆ ತಲುಪಿತ್ತು ಆರ್‌ಆರ್. ಆದರೆ, ನಾಯಕ ಸಂಜು ಸ್ಯಾಮ್ಸನ್ ಹಾಗೂ ಶಿಮ್ರೋನ್ ಹೆಟ್ಮೈರ್ 5ನೇ ವಿಕೆಟ್ಗೆ 48 ರನ್ ಸೇರಿಸಿದರು. ಸಂಜು ಸ್ಯಾಮ್ಸನ್ 28 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ 41 ರನ್‌ಗಳಿಸಿ ಔಟ್ ಆದರು. ಹೆಟ್ಮೈರ್ 32 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಿತ 52 ರನ್‌ಗಳಿಸಿ ಔಟ್ ಆದರು. ತೀಕ್ಷಣ 5, ಆರ್ಚರ್ 4, ತುಷಾರ್ ದೇಶಪಾಂಡೆ 3 ರನ್‌ಗಳಿಸಿ ತಂಡದ ಮೊತ್ತವನ್ನು 150 ಗಡಿ ದಾಟಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications