RCB Vs GT: ತವರು ಮೈದಾನದಲ್ಲೇ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಸೋಲು
RCB Vs GT: ಐಪಿಎಲ್ 2025ನೇ ಆವೃತ್ತಿ ಭರ್ಜರಿಯಾಗಿ ನಡೆಯುತ್ತಿದೆ. ಇಂದಿ (ಏಪ್ರಿಲ್ 2)ನ ಪಂದ್ಯದಲ್ಲಿ ಆರ್‌ಸಿಬಿಯು ತವರು ಮೈದಾನವಾದ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ.
ಗುಜರಾತ್ ಟೈಟಾನ್ಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಸಾಧಾರಣ 169 ರನ್‌ಗಳನ್ನು ಬಾರಿಸಿತು. ಈ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ಗುಜರಾತ್ 17.5 ಓವರ್‌ನಲ್ಲಿ 170 ರನ್‌ಗಳನ್ನು ಬಾರಿಸಿ ಗೆಲುವು ಸಾಧಿಸಿತು.

ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ್ದ ಆರ್‌ಸಿಬಿಯ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಇಂದು ಗುಜರಾತ್ ವಿರುದ್ಧ ಸೋಲನುಭವಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಕೈತಪ್ಪಿದಂತಾಗಿದೆ.
ಗುಜರಾತ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿ ಅರ್ಧಶತಕ ಸಿಡಿಸಿದರು. ಈ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿದ ಗುಜರಾತ್ ಟೈಟಾನ್ಸ್ 4.4 ಓವರ್‌ಗಳಲ್ಲಿ 32 ರನ್ ಗಳಿಸಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಈ ವೇಳೆ 2ನೇ ವಿಕೆಟ್‌ಗೆ ಜೊತೆಗೂಡಿದ ಸಾಯಿ ಸುದರ್ಶನ್ ಹಾಗೂ ಜೋಸ್ ಬಟ್ಲರ್ ಉತ್ತಮ ಬ್ಯಾಟಿಂಗ್ ಪ್ರದರ್ಶನ್ ಮಾಡಿದರು.
2ನೇ ವಿಕೆಟ್‌ಗೆ ಈ ಜೋಡಿ 47 ಎಸೆತಗಳಲ್ಲಿ 75 ರನ್‌ಗಳ ಜೊತೆಯಾಟ ಆಡಿತು. ನಂತ 3ನೇ ವಿಕೆಟ್‌ಗೆ ಬಟ್ಲರ್ 73 ರನ್ ಗಳಿಸಿ ಔಟಾಗದೇ ಉಳಿದರು.
ರುದರ್ಫೋರ್ಡ್ 36 ರನ್ (32 ಎಸೆತ) ಜೊತೆಯಾಟದಿಂದ ಟೈಟಾನ್ಸ್ ಪಡೆ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿ ಆಯಿತು.
ಕಳೆದ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಜೋಸ್ ಬಟ್ಲರ್ 3ನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಆರ್ಭಟಿಸಿದರು. 39 ಎಸೆತಗಳಲ್ಲಿ 73 ರನ್ (6 ಸಿಕ್ಸ್, 5 ಬೌಂಡರಿ) ಚಚ್ಚಿ ಅಜೇಯರಾಗಿ ಉಳಿದರು. ಜೊತೆಗೆ ಆರಂಭಿಕ ಆಟಗಾರ ಸಾಯಿ ಸುದರ್ಶನ್ 49 ರನ್ (36 ಎಸೆತ, 7 ಬೌಂಡರಿ, 1 ಸಿಕ್ಸರ್), ಇನ್ನು ಶೆರ್ಫೇನ್ ರುದರ್ಫೋರ್ಡ್ 18 ಎಸೆತಗಳಲ್ಲಿ 30 ರನ್ (3 ಸಿಕ್ಸರ್, 1 ಬೌಂಡರಿ), ನಾಯಕ ಶುಭಮನ್ ಗಿಲ್ 14 ರನ್ ಕೊಡುಗೆ ಚಚ್ಚಿದರು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ಗಳನ್ನು ಬಾರಿಸುವ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕಿಳಿಸಿದ್ದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ ಸ್ಫೋಟಕ ಪ್ರದರ್ಶನ ನೀಡಲು ವಿಫಲರಾದರು.
ಹೀಗೆ ಆರ್‌ಸಿಬಿಯು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಪವರ್ ಪ್ಲೇನಲ್ಲೇ ವೇಗಿ ಮೊಹಮ್ಮದ್ ಸಿರಾಜ್ ಫಿಲ್ ಸಾಲ್ಟ್ ಹಾಗೂ ದೇವದತ್ ಪಡಿಕಲ್ ವಿಕೆಟ್ ತೆಗೆದರು. ಇದರಿಂದ ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತು.
ನಂತರದ ಕ್ರಮಾಂಕದಲ್ಲಿ ಬಂದ ಲಿಯಾಮ್ ಲಿವಿಂಗ್‌ಸ್ಟೋನ್ ತಾಳ್ಮೆಯ ಆಟ ಆಡಿ ಆಕರ್ಷಕ ಅರ್ಧಶತಕ ಸಿಡಿಸಿದರು. 40 ಎಸೆತಗಳಲ್ಲಿ 54 ರನ್ (5 ಸಿಕ್ಸರ್, 1 ಬೌಂಡರಿ) ಚಚ್ಚಿದ್ದರು. ಇವರಿಗೆ ಸಾಥ್ ನೀಡಿದ ಜಿತೇಶ್ ಶರ್ಮಾ 1 ಸಿಕ್ಸರ್, 5 ಬೌಂಡರಿಗಳ ಸಹಿತ 33 ರನ್ ಚಚ್ಚಿ ಔಟಾಗಿ ಪೆವಿಲಿಯನ್‌ನತ್ತ ತೆರಳಿದರು. ಇನ್ನು ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟಿಂ ಡೇವಿಡ್ 16 ರನ್ ಕಲೆಹಾಕುವ ಮೂಲಕ ತಂಡದ ಮೊತ್ತವನ್ನು 170 ಸಮೀಪಕ್ಕೆ ತರುವಲ್ಲಿ ಯಶಸ್ವಿಯಾದರು.
ಮತ್ತೊಂದೆಡೆ ಗುಜರಾತ್ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದರೆ, ಸಾಯಿ ಕಿಶೋರ್ 2 ವಿಕೆಟ್, ಪ್ರಸಿದ್ ಕೃಷ್ಣ, ಅರ್ಷದ್ ಖಾನ್ ಮತ್ತು ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
-
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್‌ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications