IPL 2025 RCB Vs MI: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ?
RCB Vs MI: ಐಪಿಎಲ್ 2025ನೇ ಆವೃತ್ತಿಯಲ್ಲಿ ಇದುವರೆಗೂ ಆಡಿರುವ 3 ಪಂದ್ಯಗಳ ಪೈಕಿ ಆರ್‌ಸಿಬಿ ಎರಡರಲ್ಲಿ ಗೆಲುವು ಸಾಧಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿರುವ ತಂಡ ಏಪ್ರಿಲ್ 7ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲಲ್ಲೇಬೇಕೆನ್ನುವ ಪಣ ತೊಟ್ಟಿದೆ. ಹಾಗಾದ್ರೆ ಆರ್‌ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ಆರ್‌ಸಿಬಿ ಕೆಕೆಆರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನು ಗೆದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವುಸಿದೆ. ಆದ್ದರಿಂದ ಏಪ್ರಿಲ್ 7ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯಕ್ಕಾಗಿ ಭರ್ಜರಿ ಸಿದ್ಧತೆ ನಡೆಸಿದೆ.

ಮತ್ತೊಂದೆಡೆ ನಾಳಿನ ಪಂದ್ಯದಲ್ಲಿ ಗೆಲುವು ಮುಂಬೈ ಇಂಡಿಯನ್ಸ್ ತಂಡಕ್ಕೂ ಅನಿವಾರ್ಯವಾಗಿದೆ. ಯಾಕಂದರೆ ಇಡುವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದು ಒತ್ತಡದಲ್ಲಿ ಸಿಲುಕಿದೆ. ಆದ್ದರಿಂದ ಮುಂಬೈ ತಂಡಕ್ಕೂ ಇದು ದೊಡ್ಡ ಸವಾಲಿನ ಪಂದ್ಯವಾಗಿದೆ.
ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಗಾಯದಿಂದಾಗಿ ರೋಹಿತ್ ಶರ್ಮಾ ಹಾಗೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ ಇರಲಿಲ್ಲ. ಇವರಿಬ್ಬರು ಇದ್ದರೆ, ಮುಂಬೈ ತಂಡಕ್ಕೆ ಆನೆ ಬಲವಿದ್ದಂತೆ. ಇನ್ನು ಇವರಿಬ್ಬರು ಆರ್‌ಸಿಬಿ ವಿರುದ್ಧ ಆಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇದುವರೆಗೂ ಈ ಎರಡೂ ತಂಡಗಳು 33 ಬಾರಿ ಮುಖಾಮುಖಿ ಆಗಿದ್ದು, ಮುಂಬೈ 19 ಮತ್ತು ಆರ್‌ಸಿಬಿ 14 ಗೆಲುವು ಸಾಧಿಸಿವೆ. ಇನ್ನು ಇದೀಗ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇದೀಗ ನಾಳಿನ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಭಾರೀ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆರ್‌ಸಿಬಿಯು ಕೂಡ ಕಳೆದ ಪಂದ್ಯದಲ್ಲಿ ಗುಜರಾತ್ ವಿರುದ್ಧ ಎಡವಿದೆ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಭಾರೀ ಕಳಪೆ ಪ್ರದರ್ಶನ ಕಂಡುಬಂದಿತ್ತು. ಆದ್ದರಿಂದ ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಮುಂಬೈ ವಿರುದ್ಧದ ಪಂದ್ಯದಲ್ಲಿ ಉತ್ತಮ ಆರಂಭ ನೀಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಬೌಲಿಂಗ್, ಬ್ಯಾಟಿಂಗ್ ವಿಭಾಗದ ವಿವರ: ಮೊದಲು ಆಡಿದ ಎರಡು ಪಂದ್ಯಗಳಲ್ಲಿ ಈ ಜೋಡಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ್ ಮಾಡಿದ್ದರು. ಆದರೂ, ಗುಜರಾತ್ ವಿರುದ್ಧ ಉತ್ತಮ ಪ್ರದರ್ಶನ ತೋರುವಲ್ಲಿ ಸಂಪೂರ್ಣ ವಿಫಲರಾದರು. ಮುಂಬೈ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ್ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಮತ್ತು ಕೃನಾಲ್ ಪಾಂಡ್ಯ ಆಡಲಿದ್ದಾರೆ.
ಆರ್‌ಸಿಬಿಗೆ ಇದೀಗ ಟಿಮ್ ಡೇವಿಡ್, ಲಿಯಾಮ್ ಲಿವಿಂಗ್‌ಸ್ಟೋನ್ ಪಾರ್ಮ್‌ನಲ್ಲಿ ಇರುವುದು ಪ್ಲಸ್ ಪಾಯಿಂಡ್ ಆಗಿದೆ ಎಂದರೆ ತಪ್ಪಾಗಲಾರದು. ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಇವರ ಕೊಡುಗೆ ತುಂಬಾ ಅಗತ್ಯವಿದೆ.
ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್ ಮತ್ತು ಭುವನೇಶ್ವರ್ ಕುಮಾರ್ ವೇಗಿ ದಾಳಿಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸ್ಪಿನ್ ವಿಭಾಗದಲ್ಲಿ ರಸಿಕ್ ದಾರ್ ಸಲಾಮ್ ಬದಲಿಗೆ ಸುಯಾಶ್ ಶರ್ಮಾರನ್ನು ಆಡಿಸುವ ಸಾಧ್ಯತೆಯಿದೆ. ಯಾಕೆಂದರೆ ಕಳೆದ ಪಂದ್ಯದಲ್ಲಿ ರಸಿಕ್ ದಾರ್ ಅವರ ಬೌಲಿಂಗ್ ಪ್ರದರ್ಶನ ಅಷ್ಟೇನು ಕಂಡುಬರಲಿಲ್ಲ. ಆದ್ದರಿಂದ ಇವರ ಬದಲಿಗೆ ಸುಯಾಶ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆರ್‌ಸಿಬಿ ಸಂಭಾವ್ಯ ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).












Click it and Unblock the Notifications