IPL 2025: ಐಪಿಎಲ್‌ ಟ್ರೋಫಿ ಗೆದ್ದ ತಂಡಗಳ ಪಟ್ಟಿ: ಅಗ್ರ ಸ್ಥಾನದಲ್ಲಿರುವ ಟೀಂ ಯಾವುದು?

IPL 2025: ವಿಶ್ವದಲ್ಲೇ ಅತ್ಯಂತ ಶ್ರೀಮಂಗ ಕ್ರಿಕೆಟ್‌ ಲೀಗ್‌ ಐಪಿಎಲ್‌. 2025ರ ಐಪಿಎಲ್‌ 18ನೇ ಸೀಸನ್‌ ಮೊಲದ ಪಂದ್ಯ ನಾಳೆ ಅಂದರೆ ಮಾರ್ಚ್ 22ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಇದುವರೆಗೂ ನಡೆದಿರುವ ಸೀಸನ್‌ಗಳ ಬಗ್ಗೆ ಮೆಲುಕು ಹಾಕಲೇಬೇಕಾಗುತ್ತದೆ. ಈ ಲೀಗ್‌ 2008ರಿಂದ ಆರಂಭವಾಗಿದ್ದು, 2024ರ ವರೆಗೂ 17 ಸೀಸನ್‌ಗಳು ನಡೆದಿವೆ. ಹಾಗಾದ್ರೆ ಯಾವಾಗ ಯಾವ ತಂಡ ಟ್ರೋಫಿ ಗೆದ್ದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಯಾವಾಗ ಯಾವ ತಂಡಕ್ಕೆ ಗೆಲುವು?

2008ರಲ್ಲಿ ರಾಜಸ್ಥಾನ್ ರಾಯಲ್‌ ಗೆಲುವು: 2008ರಲ್ಲಿ ಐಪಿಎಲ್‌ ಆರಂಭವಾಗಿದ್ದು, ಈ ವೇಳೆ ರಾಜಸ್ಥಾನ ರಾಯಲ್ಸ್‌ ಟ್ರೋಫಿ ಗೆದ್ದಿತ್ತು. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಗೆದ್ದು ಈ ಸೀಸನ್‌ ಟ್ರೋಫಿಯನ್ನು ಆರ್‌ಆರ್‌ ತನ್ನದಾಗಿಸಿಕೊಂಡಿತ್ತು.

IPL 2025 List of IPL Trophy Winning Teams Know year wise details

2009ರಲ್ಲಿ ಡೆಕ್ಕನ್ ಚಾರ್ಜರ್ಸ್ ಗೆಲುವು: 2009ರಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ಹಿನ್ನೆಲೆ ಐಪಿಎಲ್ ಅನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಿಸಲಾಯಿತು. ಈ ವೇಳೆ ಆಡಮ್ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು. ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ವಿರುದ್ಧ ಜಯ ಸಾಧಿಸಿತ್ತು.

2010ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು: 2010 ರಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸಿಎಸ್‌ಕೆ ಗೆಲುವು ಸಾಧಿಸಿ ಕಪ್‌ ಗೆದ್ದು ಬೀಗಿತು.

2011ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು: 2011ರಲ್ಲಿರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದ ಮೊದಲ ತಂಡವಾಯಿತು. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ಸಾಧಿಸಿ ಕಪ್‌ ತನ್ನದಾಗಿಸಿಕೊಂಡಿತು.

2012ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್: 2011ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್‌ ಟ್ರೋಫಿ ಗೆದ್ದಿತು. ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಫೈನಲ್‌ನಲ್ಲಿ ಕೆಕೆಆರ್ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಗೆದ್ದು ಬೀಗುವ ಮೂಲಕ ಟ್ರೋಫಿ ತನ್ನದಾಗಿಸಿಕೊಂಡಿತು.

2013ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು: ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 2013ರಲ್ಲಿ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಮುಂಬೈ ಇಂಡಿಯನ್ಸ್‌ ಮೊದಲ ಗೆಲುವು ಸಾಧಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು: 2014ರಲ್ಲಿ ಮತ್ತೊಮ್ಮೆ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್‌ ಟ್ರೋಫಿ ಗೆದ್ದುಕೊಂಡಿತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್‌ನ ವಿರುದ್ಧ ಫೈನಲ್ಲಿ ಗೆಲ್ಲುವ ಮೂಲಕ ಕೆಕೆಆರ್‌ ಎರಡನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿತು.

2015ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು: 2015ರಲ್ಲಿ ಮುಂಬೈ ಇಂಡಿಯನ್ಸ್ ಎರಡನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಗೆದ್ದು ಟ್ರೋಫಿ ತನ್ನ ಮುಡಿಗೇರಿಸಿಕೊಂಡಿತು.

2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಗೆಲುವು: 2016ರಲ್ಲಿ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್‌ ಟ್ರೋಫಿ ಗೆದ್ದುಕೊಂಡಿತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಎಸ್‌ಆರ್‌ಎಚ್‌ ಟ್ರೋಫಿ ತನ್ನದಾಗಿಸಿಕೊಂಡಿತು.

2017ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು: 2017ರಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು. ಈ ಮೂಲಕ ಮೂರು ಟ್ರೋಫಿ ಗೆದ್ದ ಪಟ್ಟವನ್ನು ತನ್ನದಾಗಿಸಿಕೊಂಡಿತು. ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ವಿರುದ್ಧ ಮುಂಬೈ ಜಯಗಳಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು.

2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು: ಎರಡು ವರ್ಷಗಳ ನಂತರ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2018ರಲ್ಲಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು. ಎಂಎಸ್ ಧೋನಿ ನೇತೃತ್ವದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗೆಲ್ಲುವ ಮೂಲಕ, ಮೂರನೇ ಐಪಿಎಲ್ ಪ್ರಶಸ್ತಿಯನ್ನು ಪಡೆದ ತಂಡವಾಗಿ ಹೊರಹೊಮ್ಮಿತು.

2019ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು: ಮತ್ತೆ 2019ರಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು. ಇದು ಮುಂಬೈ ಗೆದ್ದ ನಾಲ್ಕನೇ ಟ್ರೋಫಿ ಆಗಿದೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಬೀಗುವ ಮೂಲಕ ಹೆಚ್ಚು ಟ್ರೋಫಿ ಗೆಲುವಿನ ಪಟ್ಟಿಯನ್ನು ಅಗ್ರ ಸ್ಥಾನಕ್ಕೇರಿತು.

2020ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು: ಸಾಂಕ್ರಾಮಿಕ ರೋಗದ ಕಾರಣ 2020ರಲ್ಲಿ ಐಪಿಎಲ್‌ ಅನ್ನು ಯುಎಇಯಲ್ಲಿ ಆಡಿಸಲಾಯಿತು. ಈ ವೇಳೆಯೂ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಟ್ರೋಫಿ ಗೆದ್ದುಕೊಂಡಿತು. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಬೀಗುವ ಮೂಲಕ, ಐದನೇ ಐಪಿಎಲ್ ಪ್ರಶಸ್ತಿಯನ್ನು ತನ್ನಾದಾಗಿಸಿಕೊಂಡಿತು.

2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು: 2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮತ್ತೆ ಐಪಿಎಲ್‌ ಟ್ರೋಫಿ ಗೆದ್ದುಕೊಂಡಿತು. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಫೈನಲ್‌ನಲ್ಲಿ ಸಿಎಸ್‌ಕೆ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಐಪಿಎಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

2022ರಲ್ಲಿ ಗುಜರಾತ್ ಟೈಟಾನ್ಸ್ ಗೆಲುವು: 2022ರ ಸೀಸನ್‌ನಲ್ಲಿ ಹೊಸ ತಂಡ ಗುಜರಾತ್ ಟೈಟಾನ್ಸ್ ತನ್ನ ಮೊದಲ ಸೀಸನ್‌ನಲ್ಲಿಯೇ ಪ್ರಶಸ್ತಿ ಗೆದ್ದು ಬೀಗಿತು. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗೆದ್ದು ಗುಜರಾತ್ ಟೈಟಾನ್ಸ್ ಟ್ರೋಫಿ ತನ್ನದಾಗಿಸಿಕೊಂಡಿತು.

2023ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು: ಚೆನ್ನೈ ಸೂಪರ್ ಕಿಂಗ್ಸ್ ತಂಡವು 2023ರಲ್ಲಿ ಐದನೇ ಐಪಿಎಲ್‌ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸರಿಗಟ್ಟಿತು. ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸಿಎಸ್‌ಕೆ ತಂಡ ಗೆಲುವು ಸಾಧಿಸುವ ಮೂಲಕ ಟ್ರೋಫಿ ತನ್ನಾದಾಗಿಸಿಕೊಂಡಿತು.

2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್: ಕಳೆದ ಸೀಸನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024ರ ಐಪಿಎಲ್‌ ಟ್ರೋಫಿಯನ್ನು ಗೆದ್ದುಕೊಂಡಿತು. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೆಕೆಆರ್‌ ಗೆಲುವು ಸಾಧಿಸುವ ಮೂಲಕ, ಮೂರು ಬಾರಿ ಐಪಿಎಲ್‌ ಟ್ರೋಫಿ ತನ್ನದಾಗಿಸಿಕೊಂಡಿದೆ. ಇನ್ನೂ ಈ ಬಾರಿ ಅಂದರೆ 2025ರ ಸೀಸನ್‌ನಲ್ಲಿ ಯಾರು ಟ್ರೋಫಿ ಗೆಲ್ಲಲಿದ್ದಾರೆ ಎಂದು ಕಾದುನೋಡಬೇಕಿದೆ. ಆರಂಭಿಕ ಪಂದ್ಯ ನಾಳೆ ಅಂದರೆ ಮಾರ್ಚ್ 22ರಂದು ಕೆಕೆಆರ್‌ ಮತ್ತು ಆರ್‌ಸಿಬಿ ನಡುವೆ ನಡೆಯಲಿದೆ.

ಟ್ರೋಫಿ ಗೆದ್ದ ತಂಡಗಳು

* 2008 - ರಾಜಸ್ಥಾನ ರಾಯಲ್ಸ್‌
* 2009 - ಡೆಕ್ಕನ್ ಚಾರ್ಜರ್ಸ್
* 2010 - ಚೆನ್ನೈ ಸೂಪರ್ ಕಿಂಗ್ಸ್
* 2011 - ಚೆನ್ನೈ ಸೂಪರ್ ಕಿಂಗ್ಸ್
* 2012 - ಕೋಲ್ಕತ್ತಾ ನೈಟ್ ರೈಡರ್ಸ್
* 2013 - ಮುಂಬೈ ಇಂಡಿಯನ್ಸ್
* 2014 - ಕೋಲ್ಕತ್ತಾ ನೈಟ್ ರೈಡರ್ಸ್
* 2015 - ಮುಂಬೈ ಇಂಡಿಯನ್ಸ್
* 2016 - ಸನ್‌ರೈಸರ್ಸ್ ಹೈದರಾಬಾದ್
* 2017 - ಮುಂಬೈ ಇಂಡಿಯನ್ಸ್
* 2018 - ಚೆನ್ನೈ ಸೂಪರ್ ಕಿಂಗ್ಸ್
* 2019 - ಮುಂಬೈ ಇಂಡಿಯನ್ಸ್
* 2020 - ಮುಂಬೈ ಇಂಡಿಯನ್ಸ್
* 2021 - ಚೆನ್ನೈ ಸೂಪರ್ ಕಿಂಗ್ಸ್
* 2022 - ಗುಜರಾತ್ ಟೈಟಾನ್ಸ್
* 2023 - ಚೆನ್ನೈ ಸೂಪರ್ ಕಿಂಗ್ಸ್
* 2024 - ಕೋಲ್ಕತ್ತಾ ನೈಟ್ ರೈಡರ್ಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+