Get Updates
Get notified of breaking news, exclusive insights, and must-see stories!

IPL 2025 MI Vs vs KKR: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು

MI Vs vs KKR: ಐಪಿಎಲ್‌ 2025ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡರಲ್ಲಿ ಸೋತಿರುವ ಮುಂಬೈ ತಂಡ ಮೂರನೇ ಪಂದ್ಯದಲ್ಲಿ ಮೊದಲ ಗೆಲುವು ಕಂಡಿದೆ.

ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025ರ 12ನೇ ಪಂದ್ಯ ಮುಂಬೈನ ವಾಂಖೆಡೆಯಲ್ಲಿ ಕ್ರೀಂಡಾಂಗಣದಲ್ಲಿ ನಡೆಯಿತು. ಟಾಸ್ ಗೆದ್ದ ಮುಂಬೈ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ ತಂಡ ಕೇವಲ 116 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮುಂಬೈ ತಂಡಕ್ಕೆ 117 ಸುಲಭದ ರನ್‌ಗಳ ಗುರಿಯನ್ನು ನೀಡಿತು.

IPL 2025 Mumbai Indians won by 8 Wickets against KKR

ಇನ್ನು ಈ ಗುರಿಯನ್ನು ಬೆನ್ನತ್ತಿದ್ದ ಮುಂಬೈ ಕೇವಲ 12.5 ಓವರ್‌ಗಳಲ್ಲಿ 121 ರನ್‌ಗಳಿಸಿ 8 ವಿಕೆಟ್‌ಗಳಿಂದ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮುಂಬೈ ತಂಡದ ಈ ಗೆಲುವಿನಲ್ಲಿ ವೇಗಿ ಅಶ್ವನಿ ಕುಮಾರ್ ಮತ್ತು ಆರಂಭಿಕ ಆಟಗಾರ ರಯಾನ್ ರಿಕಲ್ಟನ್ ಪ್ರಮುಖ ಪಾತ್ರವಹಿಸಿದರು.

ಇನ್ನು ಈ ಗುರಿಯನ್ನು ಬೆನ್ನತ್ತಿದ್ದ ಮುಂಬೈ ಕೇವಲ 12.5 ಓವರ್‌ಗಳಲ್ಲಿ 121 ರನ್‌ಗಳಿಸಿ 8 ವಿಕೆಟ್‌ಗಳಿಂದ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮುಂಬೈ ತಂಡದ ಈ ಗೆಲುವಿನಲ್ಲಿ ವೇಗಿ ಅಶ್ವನಿ ಕುಮಾರ್ ಮತ್ತು ಆರಂಭಿಕ ಆಟಗಾರ ರಯಾನ್ ರಿಕಲ್ಟನ್ ಪ್ರಮುಖ ಪಾತ್ರವಹಿಸಿದರು.

ಇಂದಿನ ಪಂದ್ಯದ ಗೆಲವು ಎರಡೂ ತಂಡಗಳಿಗೂ ಅವಶ್ಯವಾಗಿತ್ತು. ಆದರೆ ಇಂದು ತನ್ನ ತವರು ವಾಂಖೆಡೆಯಲ್ಲಿ ಮೊದಲ ಪಂದ್ಯವನ್ನು ಆಡಿದ ಮುಂಬೈ ಇಂಡಿಯನ್ಸ್‌ ತಂಡವು ಕೆಕೆಆರ್ ಅನ್ನೂ ಹೀನಾಯವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ ತನ್ನಲ್ಲಾ 10 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 116 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಸಾಧಾರಣ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ಕೇವಲ 12.5 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 121 ರನ್ ಗಳಿಸಿ 8 ವಿಕೆಟ್‌ಗಳ ಅಂತರದಿಂದ ಪಂದ್ಯವನ್ನು ತನ್ನದಾಗಿಸಿಕೊಂಡಿತು. ಈಗಾಗಲೇ ಆಡಿದ ಎರಡು ಪಂದ್ಯಗಳಲ್ಲಿ ಸೋತಿದ್ದ ಮುಂಬೈ ಇಂದು ಮೂರನೇ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಗೆದ್ದು ಬೀಗಿದೆ.

ಮುಂಬೈ ತಂಡವು ಆರಂಭದಲ್ಲೇ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ಮಾಡಿತು. ಮೊದಲ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ 13 ರನ್‌ಗೆ ಔಟ್ ಆದರು. ನಂತರ ಬಂದ ವಿಲ್ ಜಾಕ್ಸ್ 16 ಸಿಡಿಸಿ ಔಟ್ ಆದರು. ಆದರೆ ಆರಂಭಿಕ ಬ್ಯಾಟರ್ ರಿಕಲ್ಟನ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಸಿಡಿಸಿ ಕೆಕೆಆರ್ ಬೌಲರ್‌ಗಳಿಗೆ ನಡುಕ ಹುಟ್ಟಿಸಿದರು. ಅಲ್ಲದೆ, ಕೊನೆಗೆ ಅಬ್ಬರಿಸಿದ ಸೂರ್ಯಕುಮಾರ್ ಯಾದವ್ ಕೇವಲ 9 ಎಸೆತಗಳಲ್ಲಿ 27 ರನ್ ಸಿಡಿಸಿ ಗಮನ ಸೆಳೆದರು.

ಮುಂಬೈ ಇಂಡಿಯನ್ಸ್: ರಯಾನ್ ರಿಕಲ್ಟನ್, ವಿಲ್ ಜ್ಯಾಕ್ಸ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಅಶ್ವಿನಿ ಕುಮಾರ್, ವಿಘ್ನೇಶ್ ಪುತ್ತೂರ್.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಅಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+