IPL 2025 Opening Ceremony: ಐಪಿಎಲ್‌ ಉದ್ಘಾಟನಾ ಸಮಾರಂಭದ ದಿನಾಂಕ, ಸಮಯ, ಸ್ಥಳ ಹಾಗೂ ವೀಕ್ಷಣೆ ವಿವರ

IPL 2025 Opening Ceremony: ಐಪಿಎಲ್‌ 2025ರ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯ ಆರ್‌ಸಿಬಿ ಮತ್ತು ಕೆಕೆಆರ್ ನಡುವೆ ನಡೆಯಲಿದೆ. ಹಾಗಾದ್ರೆ ಉದ್ಘಾಟನೆ ಸಮಾರಂಭದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಹಾಗೂ ದಿನಾಂಕ, ಸಮಯ, ಎಲ್ಲಿ ವೀಕ್ಷಣೆ ಮಾಡಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಐಪಿಎಲ್‌ ಸೀಸನ್‌ 18ರ ಹಬ್ಬದ ಆರಂಭಕ್ಕೆ ಕ್ಷಣಗಣನೆ ಶುರು ಆಗಿದೆ. ಮಾರ್ಚ್‌ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಐಪಿಎಲ್‌ 2025ರ ಆವೃತ್ತಿಗೆ ಚಾಲನೆ ದೊರೆಯಲಿದೆ. ಮೊದಲ ಪಂದ್ಯ ಆರ್‌ಸಿಬಿ ಹಾಗೂ ಕೆಕೆಆರ್‌ ತಂಡಗಳ ನಡುವೆ ನಡೆಯಲಿದೆ. ಅದಕ್ಕೂ ಮುನ್ನ ಅದ್ಧೂರಿ ಉದ್ಘಾಟನಾ ಸಮಾರಂಭ ಇರಲಿದ್ದು, ತಾರೆಗಳ ಸಮಾಗಮ ಆಗಲಿದೆ. ಬಾಲಿವುಡ್ ಐಕಾನ್‌ಗಳಾದ ಶಾರುಖ್ ಖಾನ್, ಸಲ್ಮಾನ್ ಖಾನ್, ವಿಕ್ಕಿ ಕೌಶಲ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಹಲವರು ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

IPL 2025 Opening Ceremony Know Performers List Time and date details

ಶ್ರೇಯಾ ಘೋಷಾಲ್, ದಿಶಾ ಪಟಾನಿ, ಕರಣ್ ಔಜ್ಲಾ, ಅರಿಜಿತ್ ಸಿಂಗ್, ಶ್ರದ್ಧಾ ಕಪೂರ್ ಮತ್ತು ವರುಣ್ ಧವನ್ ಪ್ರದರ್ಶನ ನೀಡಲಿದ್ದಾರೆ. ಅಷ್ಟೇ ಅಲ್ಲದೆ, ಇತ್ತೀಚೆಗೆ ಟೆಲ್ ಮಿ ಚಿತ್ರಕ್ಕಾಗಿ ಕರಣ್ ಔಜ್ಲಾ ಮತ್ತು ದಿಶಾ ಪಟಾನಿ ಅವರೊಂದಿಗೆ ಸಾಥ್‌ ನೀಡಿದ ಪಾಪ್ ಬ್ಯಾಂಡ್ ಒನ್ ರಿಪಬ್ಲಿಕ್ ಅವರನ್ನು ಕೂಡಾ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನಕ್ಕಾಗಿ ಸಂಪರ್ಕಿಸಲಾಗಿದೆ ಎಂದು ತಿಳಿದುಬಂದಿದೆ.

ಐಪಿಎಲ್ 2025 ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಕತ್ರಿನಾ ಕೈಫ್, ಪ್ರಿಯಾಂಕಾ ಚೋಪ್ರಾ, ಅನನ್ಯಾ ಪಾಂಡೆ, ಮಾಧುರಿ ದೀಕ್ಷಿತ್, ಜಾನ್ವಿ ಕಪೂರ್, ಊರ್ವಶಿ ರೌಟೆಲಾ, ಪೂಜಾ ಹೆಗ್ಡೆ, ಕರೀನಾ ಕಪೂರ್, ಆಯುಷ್ಮಾನ್ ಖುರಾನಾ ಮತ್ತು ಸಾರಾ ಅಲಿ ಖಾನ್ ಭಾಗಿಯಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಐಪಿಎಲ್ 2025 ಉದ್ಘಾಟನಾ ಸಮಾರಂಭದದಲಲ್ಲಿ ಶ್ರದ್ಧಾ ಕಪೂರ್, ವರುಣ್ ಧವನ್, ದಿಶಾ ಪಟಾನಿ, ಶ್ರೇಯಾ ಘೋಷಾಲ್, ಅರಿಜಿತ್ ಸಿಂಗ್, ಕರಣ್ ಔಜ್ಲಾ ಭಾಗಿಯಾಗಿ ಪ್ರದರ್ಶನ ತೋರಲಿದ್ದಾರೆ ಎಂದು ತಿಳಿದುಬಂದಿದೆ. ಐಪಿಎಲ್‌ 2025 ಉದ್ಘಾಟನಾ ಸಮಾರಂಭವು ಮಾರ್ಚ್‌ 22ರ ಸಂಜೆ 6:00 ಗಂಟೆಗೆ ಪ್ರಾರಂಭ ಆಗಲಿದೆ.

ಉದ್ಘಾಟನಾ ಸಮಾರಂಭವನ್ನು ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವನ್ನು ವೀಕ್ಷಣೆ ಮಾಡಬಹುದು. ಅಲ್ಲದೆ, ಜಿಯೋ ಆಸ್ಟಾರ್‌ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ವೀಕ್ಷಣೆ ಮಾಡಬಹುದು. ಈ ಬಾರಿ ಐಪಿಎಲ್‌ ಪಂದ್ಯಗಳು ಮತ್ತು ಉದ್ಘಾಟನಾ ಸಮಾರಂಭವನ್ನು ಮೊಬೈಲ್‌ ಮೂಲಕ ವೀಕ್ಷಣೆ ಮಾಡಲು ಹಣ ಪಾವತಿಸಿ ಚಂದಾದಾರಿಕೆ ಪಡೆಯಬೇಕಾಗಿದೆ.

ಇನ್ನು ಈ ವರ್ಷದ ಉದ್ಘಾಟನಾ ಸಮಾರಂಭವು ಕೇವಲ ಒಂದು ದಿನಕ್ಕೆ ಸೀಮಿತ ಆಗಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಐಪಿಎಲ್ ಪಂದ್ಯಗಳು ನಡೆಯುವ ಎಲ್ಲಾ 13 ಸ್ಥಳಗಳಲ್ಲಿ ಉದ್ಘಾಟನಾ ಸಮಾರಂಭಗಳನ್ನು ನಡೆಸಲು ಯೋಜಿಸಿದೆ. ಇದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಡೆಯಲಿದೆ. ಈ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯ ಮೇ 25ರಂದು ನಡೆಯಲಿದೆ. ಎರಡು ತಿಂಗಳುಗಳ ಕಾಲ 13 ಸ್ಥಳಗಳಲ್ಲಿ ನಡೆಯುವ ಟೂರ್ನಿಯು 74 ಪಂದ್ಯಗಳನ್ನೊಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+