IPL 2025 RCB Vs PBKS: ಆರ್‌ಸಿಬಿಗೆ ಸಾಧಾರಣ ರನ್‌ಗಳ ಗುರಿ ನೀಡಿದ ಪಂಜಾಬ್ ಕಿಂಗ್ಸ್
RCB Vs PBKS: ಐಪಿಎಲ್ 2025ರ ಆವೃತ್ತಿಯ 37ನೇ ಪಂದ್ಯ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಇಂದು (ಏಪ್ರಿಲ್ 20) ನಡೆಯುತ್ತಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಜ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 158 ಸಾಧಾರಣ ಮೊತ್ತದ ರನ್‌ಗಳ ಗುರಿ ನೀಡಿದೆ.
ಚಂಡಿಗಡದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 157 ಸಾಧಾರಣ ರನ್‌ಗಳನ್ನು ಕಲೆಹಾಕಿತು.

ಪಂಜಾಬ್ ಕಿಂಗ್ಸ್ ಪರ ಪ್ರಿಯಾನ್ಸ್ ಆರ್ಯ 22, ಪ್ರಭ್ ಸಿಮ್ರಾನ್ 33, ಶ್ರೇಯಸ್ ಅಯ್ಯರ್ 6, ಜೋಶ್ ಇಂಗ್ಲಿಸ್ 29, ನೆಹಾಲ್ ವಧೇರಾ 5, ಶಶಾಂಕ್ ಸಿಂಗ್ 31, ಸ್ಟೋಯ್ನಿಸ್ 1, ಮಾರ್ಕೋ ಜಾನ್ಸನ್ 25 ರನ್ ಕಲೆಹಾಕಿ ನಾಟ್ ಆಗಿ ಉಳಿದರು. ಈ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬೌಲಿಂಗ್ ಮಾಡಿದ ಕೃನಾಲ್ ಪಾಂಡೆ ಹಾಗೂ ಸುಯೇಶ್ ಶರ್ಮಾ ತಲಾ 2 ವಿಕೆಟ್ ಕಬಳಿಸಿದರೆ, ಶೆಫರ್ಡ್ 1 ವಿಕೆಟ್ ತೆಗೆದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡದ 6 ವಿಕೆಟ್ ಕಿತ್ತು 157 ರನ್‌ಗಳಿಗೆ ಕಟ್ಟಿಹಾಕಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಿತೇಶ್ ಶರ್ಮಾ (ವಿ.ಕೀ), ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.
ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ , ಪ್ರಿಯಾಂಶ್ ಆರ್ಯ, ನೇಹಾಲ್ ವಧೇರಾ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಜೋಶ್ ಇಂಗ್ಲಿಸ್ (ವಿ.ಕೀ), ಮಾರ್ಕಸ್ ಸ್ಟೋನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ: ಐಪಿಎಲ್ 2025ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹಾದಿಯನ್ನು ಹಿಡಿಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೇಲೇರುತ್ತಲಿದೆ. ಶುಕ್ರವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿತ್ತು. ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಜ್ ತಂಡವು ಆರ್‌ಸಿಬಿ ರಜತ್ ಪಟಿದಾರ್ ನಾಯತ್ವದ ಆರ್‌ಸಿಬಿ ತಂಡವನ್ನು ತಂಡವನ್ನು 95/9 ರನ್‌ಗೆ ಕಟ್ಟಿಹಾಕಿತು.
ಆಸ್ಟ್ರೇಲಿಯನ್ ಕ್ರಿಕೆಟರ್ ಟೀಂ ಡೆವಿಡ್ ಅವರು ಕೊನೆಯ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್‌ಸಿಬಿ ತಂಡದ ಮೊತ್ತವನ್ನು 95ಕ್ಕೆ ಕೊಂಡೊಯ್ದರು. ಈ ಮೂಲಕ ಆರ್‌ಸಿಬಿ 96 ರನ್‌ಗಳ ಗುರಿ ನೀಡಿದ್ದು, ಇದನ್ನು ಸುಲಭವಾಗಿ ತಲುಪುವ ಮೂಲಕ ಪಂಜಾಬ್ ಕಿಂಗ್ಸ್ ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ 7ರಲ್ಲಿ 5 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 2ನೇ ಸ್ಥಾನಕ್ಕೆ ಏರಿತು.
ಆದರೆ, ಆರ್‌ಸಿಬಿ 7 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿಯು ತವರಿನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿದ್ದು, ಬೇರೆ ರಾಜ್ಯಗಳಲ್ಲಿ ನಾಲ್ಕು ಗೆಲವು ಸಾಧಿಸಿದೆ. ಇನ್ನು ಇಂದು (ಏಪ್ರಿಲ್ 20) ಮತ್ತೆ ಪಂಜಾಬ್ ಹಾಗೂ ಆರ್‌ಸಿಬಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಆರ್‌ಸಿಬಿ ಸೋಲಿನ ಸೇಡು ತೀರಿಸಿಕೊಂಡು ಗೆಲುವು ಸಾಧಿಸುವ ಹಠ ತೊಟ್ಟಿದೆ.












Click it and Unblock the Notifications