ಐಪಿಎಲ್ 2025 ಪಾಯಿಂಟ್ಸ್ ಟೇಬಲ್: ಮೇ 19ರಂದು ಯಾವ್ಯಾವ ತಂಡಗಳ ಸ್ಥಾನ ಏನು? ಆರೆಂಜ್ ಮತ್ತು ಪರ್ಪಲ್ ಕ್ಯಾಪ್..
IPL 2025 Points Table: ಭಾರತ-ಪಾಕ್ ನಡುವೆ ಪರಿಸ್ಥಿತಿ ಉಗ್ವಿಗ್ನಗೊಂಡ ಕಾರಣ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದಪಡಿಸಿ ಮುಂದೂಡಲಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಮತ್ತೆ ಟೂರ್ನಿ ಮುಂದುವರೆಸಲಾಗಿದೆ.
ಹಾಗಾದ್ರೆ ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ್ಯಾವ ತಂಡಗಳು ಯಾವ ಸ್ಥಾನ ಹಾಗೂ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

1. ಇದುವರೆದೂ ಆಡಿರುವ 12 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 3ರಲ್ಲಿ ಸೋತು ಉಳಿದ 9 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 18 ಅಂಕಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾ ಅಲಂಕರಿಸಿದೆ.
2. ಆಡಿರುವ 12 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರರಲ್ಲಿ ಸೋತು ಉಳಿದ 8 ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯ ರದ್ದಿನೊಂದಿದೆ ಪಾಯಿಂಟ್ಸ್ ಟೇಬಲ್‌ನಲ್ಲಿ 17 ಅಂಕಗಳನ್ನು ಪಡೆಯುವ ಮೂಲಕ 2ನೇ ಸ್ಥಾನದಲ್ಲಿದೆ.
3. ಆಡಿರುವ 12 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3ಲ್ಲಿ ಸೋತು 8 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 17 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನದಲ್ಲಿದೆ.
4. ಆಡಿರುವ 12 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 5ರಲ್ಲಿ ಸೋತು ಉಳಿದ 7 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 14 ಅಂಕಗಳನ್ನು ಪಡೆಯುವ ಮೂಲಕ 4ನೇ ಸ್ಥಾನದಲ್ಲಿದೆ.
5. ಇದುವರೆದೂ ಆಡಿರುವ 11 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಟ್ ತಂಡವು 5ರಲ್ಲಿ ಸೋತು ಉಳಿದ 6ರಲ್ಲಿ ಗೆದ್ದು 13 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 5ನೇ ಸ್ಥಾನದಲ್ಲಿದೆ.
6. ಆಡಿರುವ 13 ಪಂದ್ಯಗಳಲ್ಲಿ ಕೊಲ್ಕಾತ್ತಾ ನೈಟ್ ರೈಡರ್ಸ್ ತಂಡವು 5ಲ್ಲಿ ಸೋತು ಉಳಿದ 6 ಪಂದ್ಯಗಳಲ್ಲಿ ಗೆದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ 12 ಅಂಕಗಳನ್ನು ಪಡೆಯುವ 6ನೇ ಸ್ಥಾನದಲ್ಲಿದೆ.
7. ಆಡಿರುವ 11 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 6ರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 10 ಅಂಕಗಳನ್ನು ಪಡೆಯುವ ಮೂಲಕ 7ನೇ ಸ್ಥಾನದಲ್ಲಿದೆ.
8. ಆಡಿರುವ 11 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 7ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 7 ಅಂಕಗಳನ್ನು ಪಡೆಯುವ ಮೂಲಕ 8ನೇ ಸ್ಥಾನದಲ್ಲಿದೆ.
9. ಆಡಿರುವ 13 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 10ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ ಮೂಲಕ 9ನೇ ಸ್ಥಾನದಲ್ಲಿದೆ.
10. ಆಡಿರುವ 12 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ ಕೊನೇ ಸ್ಥಾನವನ್ನು ಅಂದರೆ ಕಳಗಿನಿಂದ ಒಂದನೇ ಸ್ಥಾನ ಅಲಂಕರಿಸಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ ತಂಡ ಎಷ್ಟನೇ ಸ್ಥಾನ?
1. ಗುಜರಾತ್ ಟೈಟಾನ್ಸ್
2. ರಾಯಲ್ ಚಾಲೆಂಜರ್ಸ್ ಬೆಂಗಳೂರು
3. ಪಂಜಾಬ್ ಕಿಂಗ್ಸ್
4. ಮುಂಬೈ ಇಂಡಿಯನ್ಸ್
5. ಡೆಲ್ಲಿ ಕ್ಯಾಪಿಟಲ್ಸ್
6. ಕೊಲ್ಕತ್ತಾ ನೈಟ್ ರೈಡರ್ಸ್
7. ಲಕ್ನೋ ಸೂಪರ್ ಜೈಂಟ್ಸ್
8. ಸನ್ ರೈಸರ್ಸ್ ಹೈದರಾಬಾದ್
9. ರಾಜಸ್ಥಾನ್ ರಾಯಲ್ಸ್
10. ಚೆನ್ನೈ ಸೂಪರ್ ಕಿಂಗ್ಸ್
ಇನ್ನು ಐಪಿಎಲ್ 2025ರಲ್ಲಿ ಆರ್‌ಸಿಬಿ ತಂಡವು ಗೆಲುವಿನ ಹಾದಿಯನ್ನು ಹಿಡಿದಿದ್ದು, ಟ್ರೋಫಿ ಗೆಲ್ಲುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ. ಯಾಕಂದ್ರೆ ಇದುವರೆಗೂ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದೆ.
ಆರ್‌ಸಿಬಿಯು ತವರಿನಲ್ಲಿ ಮೂರು ಪಂದ್ಯಗಳನ್ನು ಸೋತಿದ್ದು, ಬಿಟ್ಟರೆ ಉಳಿದ ಎಲ್ಲಾ ಪಂದ್ಯಗಳಲ್ಲೂ ಗೆದ್ದು ಬೀಗಿದೆ. ಎರಡು ತವರಿನಲ್ಲಿ ಗೆದ್ದರೆ, ಉಳಿದ ಆರು ಪಂದ್ಯಗಳನ್ನು ತವರಿನಂದಾಚೆ ಗೆದ್ದು ಬೀಗಿದೆ.
ಆರೆಂಜ್ ಕ್ಯಾಪ್ ಯಾರ ಬಳಿ ಇದೆ?: ಈ ಆವೃತ್ತಿಯಲ್ಲಿ ಇಲ್ಲಿಯವರೆಗೂ ಆಡಿದ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್ ಅಗ್ರ ಸ್ಥಾನದಲ್ಲಿದ್ದಾರೆ. ಅವರು 617 ರನ್ ಕಲೆ ಹಾಕಿದ್ದಾರೆ.
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಕೊಹ್ಲಿ
* ಗುಜರಾಜ್ ಟೈಟಾನ್ಸ್ ತಂಡದ ಎಸ್.ಸುದರ್ಶನ್: 617
* ಗುಜರಾಜ್ ಟೈಟಾನ್ಸ್ ತಂಡದ ಶುಭ್ಮನ್ ಗಿಲ್: 601
* ರಾಜಸ್ತಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್: 523
* ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್: 510
* ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ: 505
ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?: ಗುಜರಾತ್ ಟೈಟಾನ್ಸ್ ತಂಡದ ಪ್ರಸಿದ್ಧ್ ಕೃಷ್ಣ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಪರ್ಪಲ್ ಕ್ಯಾಪ್ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಅವರು 21 ವಿಕೆಟ್ ಪಡೆದಿದ್ದಾರೆ.
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಆರ್‌ಸಿಬಿ ಬೌಲರ್
* ಗುಜರಾತ್ ಟೈಟಾನ್ಸ್ ತಂಡದ ಪ್ರಸಿದ್ಧ್ ಕೃಷ್ಣ: 21 ವಿಕೆಟ್
* ಚೈನ್ನೈ ಸೂಪರ್ ಕಿಂಗ್ಸ್ ತಂಡದ ನೂರ್ ಅಹ್ಮದ್: 20 ವಿಕೆಟ್
* ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಜಲ್‌ವುಡ್: 18 ವಿಕೆಟ್
* ಮುಂಬೈ ಇಂಡಿಯನ್ಸ್ ತಂಡದ ಟ್ರೆಂಟ್ ಬೋಲ್ಟ್: 18 ವಿಕೆಟ್
* ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ: 17 ವಿಕೆಟ್
ಸಾಮಾನ್ಯವಾಗಿ ಐಪಿಎಲ್‌ನಲ್ಲಿ ಅತೀ ಹೆಚ್ಚು ರನ್ ಬಾರಿಸಿದವರಿಗೆ ಆರೆಂಜ್ ಕ್ಯಾಪ್ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದವರಿಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ.












Click it and Unblock the Notifications