IPL Points Table: ಪ್ರಸ್ತುತ ಐಪಿಎಲ್ ಪಾಯಿಂಟ್ಸ್ ಟೇಬಲ್‌ನಲ್ಲಿ ಆರ್‌ಸಿಬಿ ಸ್ಥಾನ ಏನು?: ಆರೆಂಜ್ ಹಾಗೂ ಪರ್ಪಲ್ ಕ್ಯಾಪ್..
IPL 2025 Points Table: ಐಪಿಎಲ್ 2025ರ ಆವೃತ್ತಿ ಅದ್ಧೂರಿಯಾಗಿ ನಡೆಯುತ್ತಿದೆ. ಹಾಗಾದ್ರೆ ಇದುವರೆಗೂ ಆರ್‌ಸಿಬಿ ಸೇರಿದಂತೆ ಉಳಿದ ತಂಡಗಳು ಎಷ್ಟು ಪಂದ್ಯಗಳನ್ನು ಆಡಿ ಎಷ್ಟು ಗೆದ್ದಿವೆ? ಪಾಯಿಂಟ್ಸ್ ಟೇಬಲ್‌ನಲ್ಲಿ ಸ್ಥಾನ ಏನು ಹಾಗೂ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿಶ್ವದಲ್ಲೇ ಅತ್ಯಂತ ದೊಡ್ಡ ಲೀಗ್ ಅಂದ್ರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್). ಈ ಬಾರಿ ಅಂದರೆ 18ನೇ ಆವೃತ್ತಿ ಭರ್ಜರಿಯಾಗಿ ನಡೆಯುತ್ತಿದ್ದು, 10 ತಂಡಗಳ ಪರ್ಫಾಮೆನ್ಸ್ ಹೇಗಿದೆ? ಅದರಲ್ಲೂ ಐಪಿಎಲ್‌ನಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡದ ಸ್ಥಾನ ಏನು ಎನ್ನುವ ಮಾಹಿತಿ ಇಲ್ಲಿದೆ.

1. ಇದುವರೆದೂ ಆಡಿರುವ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಟ್ ತಂಡವು ಕೇವಲ ಒಂದರಲ್ಲಿ ಸೋತು ಉಳಿದ 5ರಲ್ಲಿ ಗೆದ್ದು 10 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೊದಲನೇ ಸ್ಥಾನವನ್ನು ಅಲಂಕರಿಸಿದೆ.
2. ಆಡಿರುವ 7 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು ಎರಡರಲ್ಲಿ ಸೋತು ಉಳಿದ 5 ಪಂದ್ಯಗಳಲ್ಲಿ ಗೆದ್ದು 10 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿದೆ.
3. ಇದುವರೆದೂ ಆಡಿರುವ 6 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು ಎರಡರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನದಲ್ಲಿದೆ.
4. ಆಡಿರುವ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 8 ಅಂಕಗಳನ್ನು ಪಡೆಯುವ ಮೂಲಕ 4ನೇ ಸ್ಥಾನದಲ್ಲಿದೆ.
5. ಆಡಿರುವ 7 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೂರರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 5ನೇ ಸ್ಥಾನದಲ್ಲಿದೆ.
6. ಆಡಿರುವ 7 ಪಂದ್ಯಗಳಲ್ಲಿ ಕೊಲ್ಕಾತ್ತಾ ನೈಟ್ ರೈಡರ್ಸ್ ತಂಡವು 4ಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ 6ನೇ ಸ್ಥಾನದಲ್ಲಿದೆ.
7. ಆಡಿರುವ 7 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 4ರಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ ಮೂಲಕ 7ನೇ ಸ್ಥಾನದಲ್ಲಿದೆ.
8. ಆಡಿರುವ 7 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 5ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 8ನೇ ಸ್ಥಾನದಲ್ಲಿದೆ.
9. ಆಡಿರುವ 7 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 5ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 9ನೇ ಸ್ಥಾನದಲ್ಲಿದೆ.
10. ಆಡಿರುವ 7 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ ಕೊನೇ ಸ್ಥಾನವನ್ನು ಅಂದರೆ ಕಳಗಿನಿಂದ ಒಂದನೇ ಸ್ಥಾನ ಅಲಂಕರಿಸಿದೆ. ಪ್ರತಿ ಬಾರಿಯೂ ಪಾಯಿಂಟ್ಸ್ ಟೇಬಲ್‌ನಲ್ಲ ಮೇಲೆ ಇರುತ್ತಿದ್ದ ತಂಡಗಳೇ ಈ ಬಾರಿ ಕೆಳಗಿಳಿದಿರುವುದೇ ಆಶ್ಚರ್ಯಕರ ಸಂಗತಿಯಾಗಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ?
1. ಡೆಲ್ಲಿ ಕ್ಯಾಪಿಟಲ್ಟ್
2. ಪಂಜಾಬ್ ಕಿಂಗ್ಸ್
3. ಗುಜರಾತ್ ಟೈಟಾನ್ಸ್
4. ರಾಯಲ್ ಚಾಲೆಂಜರ್ಸ್ ಬೆಂಗಳೂರು
5. ಲಕ್ನೋ ಸೂಪರ್ ಜೈಂಟ್ಸ್
6. ಕೊಲ್ಕತ್ತಾ ನೈಟ್ ರೈಡರ್ಸ್
7. ಮುಂಬೈ ಇಂಡಿಯನ್ಸ್
8. ರಾಜಸ್ಥಾನ್ ರಾಯಲ್ಸ್
9. ಸನ್ ರೈಸರ್ಸ್ ಹೈದರಾಬಾದ್
10. ಚೆನ್ನೂ ಸೂಪರ್ ಕಿಂಗ್ಸ್
ಐಪಿಎಲ್ 2025ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹಾದಿಯನ್ನು ಹಿಡಿಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೇಲೇರುತ್ತಲಿದೆ. ಶುಕ್ರವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಜ್ ತಂಡವು ಆರ್‌ಸಿಬಿ ರಜತ್ ಪಟಿದಾರ್ ನಾಯತ್ವದ ಆರ್‌ಸಿಬಿ ತಂಡವನ್ನು ತಂಡವನ್ನು 95/9 ರನ್‌ಗೆ ಕಟ್ಟಿಹಾಕಿತು.
ಆಸ್ಟ್ರೇಲಿಯನ್ ಕ್ರಿಕೆಟರ್ ಟೀಂ ಡೆವಿಡ್ ಅವರು ಕೊನೆಯ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್‌ಸಿಬಿ ತಂಡದ ಮೊತ್ತವನ್ನು 95ಕ್ಕೆ ಕೊಂಡೊಯ್ದರು. ಈ ಮೂಲಕ ಆರ್‌ಸಿಬಿ 96 ರನ್‌ಗಳ ಗುರಿ ನೀಡಿದ್ದು, ಇದನ್ನು ಸುಲಭವಾಗಿ ತಲುಪುವ ಮೂಲಕ ಪಂಜಾಬ್ ಕಿಂಗ್ಸ್ ಜಯಭೇರಿ ಬಾರಿಸಿತು.
ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ 7ರಲ್ಲಿ 5 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 2ನೇ ಸ್ಥಾನಕ್ಕೆ ಏರಿತು. ಆದರೆ, ಆರ್‌ಸಿಬಿ 7 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ 4ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿಯು ತವರಿನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿದ್ದು, ಬೇರೆ ರಾಜ್ಯಗಳಲ್ಲಿ ನಾಲ್ಕು ಗೆಲವು ಸಾಧಿಸಿದೆ.
ಆರೆಂಜ್ ಕ್ಯಾಪ್ ಯಾರಿಗೆ?: ಈ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ನ ನಿಕೋಲಸ್ ಪೂರನ್ ಇಲ್ಲಿಯವರೆಗೆ ಅತೀ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತಮ್ಮಲ್ಲಿಯೇ ಇರಿಸಿಕೊಂಡಿದ್ದಾರೆ. ಅವರು 7 ಪಂದ್ಯಗಳಲ್ಲಿ 357 ರನ್ ಗಳಿಸಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ಸಾಯಿ ಸುದರ್ಶನ್ ಮತ್ತು ಲಕ್ನೋ ಸೂಪರ್ ಜೈಂಟ್ಸ್‌ನ ಮಿಚೆಲ್ ಮಾರ್ಷ್ ಕ್ರಮವಾಗಿ 329 ಮತ್ತು 295 ರನ್ ಗಳಿಸಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿದ್ದಾರೆ.
ಆರ್‌ಸಿಬಿಯ ವಿರಾಟ್ ಕೊಹ್ಲಿ ಅವರು 7 ಪಂದ್ಯಗಳಲ್ಲಿ 249 ರನ್ ಗಳಿಸುವ ಮೂಲಕ ಪ್ರಸ್ತುತ ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಅವರು ಮುಂದಿನ ಪಂದ್ಯಗಳಲ್ಲಿ ಸತತವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದರೆ ಆರೆಂಜ್ ಕ್ಯಾಪ್ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಅತೀ ಹೆಚ್ಚು ರನ್ ಬಾರಿಸಿದವರು
* ಲಕ್ನೋ ಸೂಪರ್ ಜೈಂಟ್ಸ್ ತಂಡದ ನಿಕೋಲಸ್ ಪೂರನ್: 357
* ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್: 329
* ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಿಚೆಲ್ ಮಾರ್ಷ್: 295
ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಫ್ಘಾನ್ ಸ್ಪಿನ್ನರ್ ನೂರ್ ಅಹ್ಮದ್ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಪರ್ಪಲ್ ಕ್ಯಾಪ್ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಅವರು 7 ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ ಮೂರು ವಿಕೆಟ್ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗಿ ಜೋಶ್ ಹ್ಯಾಜಲ್‌ವುಡ್ ಸಹ 12 ವಿಕೆಟ್‌ಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್ ಯಾದವ್ 6 ಪಂದ್ಯಗಳಲ್ಲಿ 11 ವಿಕೆಟ್ ಪಡೆದು ನಂತರದ ಸ್ಥಾನದಲ್ಲಿದ್ದಾರೆ.
ಅತೀ ಹೆಚ್ಚು ವಿಕೆಟ್ ಪಡೆದವರು
* ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್: 12 ವಿಕೆಟ್
* ಆರ್‌ಸಿಬಿ ತಂಡದ ವೇಗಿ ಜೋಶ್ ಹ್ಯಾಜಲ್‌ವುಡ್: 12 ವಿಕೆಟ್
* ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್ ಯಾದವ್: 11 ವಿಕೆಟ್












Click it and Unblock the Notifications