IPL 2025 Points Table: ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೆ ಮುನ್ನ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ
ಐಪಿಎಲ್ 2025ರ ಆವೃತ್ತಿಯಲ್ಲಿ ಈಗಾಗಲೇ 7 ಪಂದ್ಯಗಳು ನಡೆದಿವೆ. ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್, ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಈವರೆಗೆ ತಲಾ ಎರಡು ಪಂದ್ಯಗಳನ್ನು ಆಡಿದ್ದರೆ ಉಳಿದ ತಂಡಗಳು ಕೇವಲ ಒಂದು ಪಂದ್ಯ ಆಡಿವೆ. ಸನ್‌ರೈಸರ್ಸ್ ಹೈದರಾಬದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದೆ.
ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 44 ರನ್‌ಗಳಿಂದ ಗೆದಿದ್ದು ಸನ್‌ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿತ್ತು. ಆದರೆ ಗುರುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತ ಬಳಿಕ ನೆಟ್ ರನ್ ರೇಟ್ ಮೇಲೆ ಪರಿಣಾಮ ಬೀರಿದ್ದು 6ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಅಗ್ರಸ್ಥಾನಕ್ಕೇರಿದ ಆರ್‌ಸಿಬಿ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆಲುವು ಸಾಧಸಿದಿ ಬಳಿಕ ಅಂಕಪಟ್ಟಿಯಲ್ಲಿ ಆರ್‌ಸಿಬಿ ಅಗ್ರಸ್ಥಾನಕ್ಕೇರಿದೆ. 2025ರ ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ 175 ರನ್‌ಗಳನ್ನು 16.2 ಓವರ್ ಗಳಲ್ಲೇ ಬೆನ್ನಟ್ಟುವ ಮೂಲಕ 2.137 ರನ್‌ರೇಟ್‌ನೊಂದಿಗೆ ಮೊದಲ ಸ್ಥಾನಕ್ಕೇರಿದೆ. ಸನ್‌ರೈಸರ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ 2 ಅಂಕಗಳು, 0.963 ರನ್‌ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಕ್ರಮವಾಗಿ 3, 4, 5 ಮತ್ತು 6ನೇ ಸ್ಥಾನದಲ್ಲಿವೆ. ಕೆಕೆಆರ್ 7ನೇ ಸ್ಥಾನದಲ್ಲಿದ್ದು ಮುಂಬೈ ಇಂಡಿಯನ್ಸ್ 8ನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ 9 ಹಾಗೂ 10ನೇ ಸ್ಥಾನದಲ್ಲಿವೆ. ಮುಂಬೈ ಇಂಡಿಯನ್ಸ್, ಗುಜರಾತ್ ಆಡಿದ ಮೊದಲ ಪಂದ್ಯ ಸೋತಿದ್ದರೆ, ರಾಜಸ್ಥಾನ ರಾಯಲ್ಸ್ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ.
ಶುಕ್ರವಾರ ನಡೆಯುವ ಬಹು ನಿರೀಕ್ಷಿತ ಪಂದ್ಯದಲ್ಲಿ ಆರ್ ಸಿಬಿ ಸಿಎಸ್‌ಕೆ ವಿರುದ್ಧ ಚೆನ್ನೈನಲ್ಲಿ ಸೆಣೆಸಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೊದಲ ಸ್ಥಾನಕ್ಕೇರುವುದು ಖಚಿತವಾಗಿದೆ, ಆರ್ ಸಿಬಿ ಮೊದಲ ಸ್ಥಾನದಲ್ಲಿ ಉಳಿಯಬೇಕು ಎಂದರು ಸಿಎಸ್‌ಕೆ ವಿರುದ್ಧ ಗೆಲ್ಲಬೇಕಾಗಿದೆ.












Click it and Unblock the Notifications