IPL 2025 RCB Vs GT: ಗುಜರಾತ್ ಟೈಟಾನ್ಸ್‌ಗೆ ಸಾಧಾರಣ ರನ್‌ಗಳ ಗುರಿ ನೀಡಿದ ಆರ್‌ಸಿಬಿ
RCB Vs GT: ಐಪಿಎಲ್ 2025ರ ಆವೃತ್ತಿಯ 8ನೇ ಪಂದ್ಯ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು (ಏಪ್ರಿಲ್ 2) ನಡೆಯುತ್ತಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಸಾಧಾರಣ ರನ್‌ಗಳನ್ನು ಕಲೆಹಾಕಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ಗಳನ್ನು ಬಾರಿಸುವ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು.

ಬಳಿಕ ಕಣಕ್ಕಿಳಿದು ತಾಳ್ಮೆಯ ಆಟ ಆಡಿದ ಲಿಯಾಮ್ ಲಿವಿಂಗ್‌ಸ್ಟೋನ್ ಆಕರ್ಷಕ ಅರ್ಧಶತಕ ಸಿಡಿಸಿದರು. 40 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 54 ರನ್‌ಗಳನ್ನು ಚಚ್ಚಿದ್ದರು. ಇವರಿಗೆ ಉತ್ತಮ ಸಾಥ್ ನೀಡಿದ ಜಿತೇಶ್ ಶರ್ಮಾ 33 ರನ್ ಗಳಿಸಿ ಔಟಾಗಿ ಪೆವಿಲಿಯನ್‌ನತ್ತ ಯತೆರಳಿದರು. ಇನ್ನು ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಟಿಮ್ ಡೇವಿಡ್ 32 ರನ್ ಕಲೆಹಾಕಿದರು.
ಮತ್ತೊಂದೆಡೆ ಗುಜರಾತ್ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದರೆ, ಸಾಯಿ ಕಿಶೋರ್ 2 ವಿಕೆಟ್, ಪ್ರಸಿದ್ ಕೃಷ್ಣ, ಅರ್ಷದ್ ಖಾನ್ ಮತ್ತು ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 2ನೇ ಓವರ್ನಲ್ಲಿ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಇಂದೂ ಸಹ ಕೇವಲ 5 ರನ್ ಗಳಿಸಿ ಅರ್ಷದ್ ಖಾನ್ ಬೌಲಿಂಗ್‌ನಲ್ಲಿ ಪ್ರಸಿಧ್ ಕೃಷ್ಣಗೆ ಕ್ಯಾಚ್ ನೀಡಿ ಔಟ್ ಆದರು.
ದೇವದತ್ ಪಡಿಕ್ಕಲ್ 4 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಮತ್ತೆ ಸಿರಾಜ್ ಬೌಲಿಂಗ್‌ನಲ್ಲಿ ಸಾಲ್ಟ್ 14 ರನ್ ಗಳಿಸಿ ಔಟ್ ಆದರು. ನಾಯಕ ರಜತ್ ಪಟಿದಾರ್ 12 ರನ್ ಗಳಿಸಿದ್ದಾಗ ಇಶಾಂತ್ ಶರ್ಮಾ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಔಟ್ ಆದರು. 21 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 33 ರನ್ಗಳಿಸಿದ್ದ ಜಿತೇಶ್ ಶರ್ಮಾ ಸ್ಪಿನ್ನರ್ ಸಾಯಿ ಕಿಶೋರ್ ಬೌಲಿಂಗ್‌ನಲ್ಲಿ ತೆವಾಟಿಯಾಗೆ ಕ್ಯಾಚ್ ನೀಡಿ ಔಟಾದರು.
ಕೊನೆಯಲ್ಲಿ ಅಬ್ಬರಿಸಿದ ಲಿವಿಂಗ್‌ಸ್ಟೋನ್ ಆರಂಭದಲ್ಲಿ ರನ್ಗಳಿಸಲು ಪರದಾಡಿದರು. ಆದರೂ ಕೊನೆಯಲ್ಲಿ ಆಕ್ರಮಣಕಾರಿ ಆಟ ಆಡಿ 40 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ಗಳ ನೆರವಿನಿಂದ 54 ರನ್ಗಳಿಸಿದರೆ, ಟಿಮ್ ಡೇವಿಡ್ ಕೊನೆಯ ಓವರ್ನಲ್ಲಿ 16 ಸೇರಿದಂತೆ 18 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸೇರಿ 32 ರನ್ಗಳಿಸಿ 170ರ ಗುರಿ ನೀಡಲು ನೆರವಾದರು.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್.ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.












Click it and Unblock the Notifications