RCB vs KKR: ಮೊದಲ ಪಂದ್ಯಕ್ಕೆ ಅಡ್ಡಿಯಾಗುತ್ತಾ ಮಳೆ: ಹೇಗಿರುತ್ತೆ ಆರ್‌ಸಿಬಿ ಬಲಿಷ್ಠ ಪ್ಲೇಯಿಂಗ್ 11

ಐಪಿಎಲ್ 2025ರ ಆರಂಭಕ್ಕೆ ಇನ್ನು ಎರಡು ದಿನ ಬಾಕಿ ಇದೆ. ಎರಡು ತಿಂಗಳು ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ಬಡಿಸಲು 10 ತಂಡಗಳು ಸಜ್ಜಾಗಿವೆ. ಮಾರ್ಚ್ 22ರಂದು ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಸೆಣೆಸಲು ಆರ್ ಸಿಬಿ ಸಜ್ಜಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.

ಬೆಂಗಳೂರಿನಲ್ಲಿ ಅಭ್ಯಾಸ ನಡೆಸಿರುವ ಆರ್ ಸಿಬಿ ಬುಧವಾರ ಕೋಲ್ಕತಾಗೆ ಪ್ರಯಾಣಿಸಿದ್ದು ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ಅಭ್ಯಾಸ ಆರಂಭಿಸಿದೆ. 2025ರ ಐಪಿಎಲ್‌ನಲ್ಲಿ ಹೊಸ ತಂಡವನ್ನೇ ಕಟ್ಟಿರುವ ಆರ್ ಸಿಬಿ ಮೊದಲ ಪಂದ್ಯಕ್ಕೆ ಯಾವ ಪ್ಲೇಯಿಂಗ್ ಇಲೆವೆನ್ ಕಣಕ್ಕಿಳಿಸುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.

ipl 2025 rcb strong playing xi against kkr picth weather reoprt

ಹೊಸ ನಾಯಕನ ಮೇಲೆ ನಿರೀಕ್ಷೆ

ಐಪಿಎಲ್ 2025ರ ಮೆಗಾ ಹರಾಜಿಗೆ ಮುನ್ನ ರಜತ್ ಪಟಿದಾರ್, ವಿರಾಟ್ ಕೊಹ್ಲಿ ಮತ್ತು ಯಶ್ ದಯಾಳ್‌ರನ್ನು ಮಾತ್ರ ಉಳಿಸಿಕೊಂಡಿದ್ದ ಆರ್ ಸಿಬಿ ಉಳಿದ ಆಟಗಾರರನ್ನು ಬಿಡುಗಡೆ ಮಾಡಿತ್ತು. 2024ರ ಆವೃತ್ತಿಯ ಆರ್ ಸಿಬಿ ತಂಡದಲ್ಲಿದ್ದ ಸ್ವಪ್ನಿಲ್ ಸಿಂಗ್‌ರನ್ನು ಮಾತ್ರ ಹರಾಜಿನಲ್ಲಿ ಖರೀದಿ ಮಾಡಿದ್ದು ಬಿಟ್ಟರೆ ಉಳಿದ ಯಾವ ಆಟಗಾರರನ್ನು ಖರೀದಿ ಮಾಡಲಿಲ್ಲ. ಎಲ್ಲ ಹೊಸ ಆಟಗಾರರಿಗೆ ಮಣೆ ಹಾಕಿತು. ಫಾಫ್ ಡುಪ್ಲೆಸಿಸ್‌ರನ್ನು ಕೈಬಿಟ್ಟ ಬಳಿಕ ರಜತ್ ಪಟಿದಾರ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿದೆ. ವಿರಾಟ್ ಕೊಹ್ಲಿ ಕೂಡ ಪಟಿದಾರ್ ಉತ್ತಮ ನಾಯಕನಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ತಂಡದಲ್ಲಿ ಬ್ಯಾಟಿಂಗ್‌ನಷ್ಟೇ ಬೌಲಿಂಗ್ ಕೂಡ ಉತ್ತಮವಾಗಿ ಕಾಣುತ್ತಿದೆ. ಸ್ಪಿನ್ನರ್ ಕೊರತೆ ಇದ್ದರೂ, ವೇಗದ ಬೌಲಿಂಗ್ ವಿಭಾಗದಲ್ಲಿ ಆರ್ ಸಿಬಿ ಬಲಿಷ್ಠವಾಗಿದೆ. ಆದರೆ ಮೊದಲ ಪಂದ್ಯದಲ್ಲಿ ಯಾವ ಪ್ಲೇಯಿಂಗ್ ಇಲೆವೆನ್ ಜೊತೆ ಆಡಲಿದೆ ಎನ್ನುವುದು ಮುಖ್ಯವಾಗುತ್ತದೆ.

ಆರ್ ಸಿಬಿ ಸಂಭಾವ್ಯ ಆಡುವ ಬಳಗ

ಫಿಲ್ ಸಾಲ್ಟ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್.

ಇಂಪ್ಯಾಕ್ಟ್ ಸಬ್‌: ಸುಯಶ್ ಶರ್ಮಾ, ರಸಿಕ್ ದಾರ್, ಸ್ವಪ್ನಿಲ್ ಸಿಂಗ್‌.

ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿದರೆ ದೇವದತ್ ಪಡಿಕ್ಕಲ್ ಅವಕಾಶ ಪಡೆಯುವ ಸಾಧ್ಯತೆ ಇದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಅಥವಾ ಸ್ವಪ್ನಿಲ್ ಸಿಂಗ್ ಆಡುವ ಸಾಧ್ಯತೆ ಇದೆ.

ಮಾರ್ಚ್ 22ರಂದು ಕೋಲ್ಕತಾ ಸೇರಿದಂತೆ ಪಶ್ಚಿಮ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಆದರೆ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ತೀರಾ ಕಡಿಮೆ ಇದ್ದು, ಅಭಿಮಾನಿಗಳು ಉದ್ಘಾಟನಾ ಪಂದ್ಯವನ್ನು ಕಣ್ತುಂಬಿಕೊಳ್ಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+