RCB Vs GT: ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ?

RCB Vs GT: ಐಪಿಎಲ್‌ 2025ರ ಆವೃತ್ತಿಯಲ್ಲಿ ಇದುವರೆಗೂ ಆಡಿರುವ ಎರಡೂ ಪಂದ್ಯಗಳಲ್ಲೂ ಆರ್‌ಸಿಬಿ ಗೆದ್ದು ಬೀಗಿದೆ. ಇನ್ನೂ ಇಂದು (ಏಪ್ರಿಲ್‌ 2) ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್‌ ವಿರುದ್ಧ ಕಾದಾಡಲಿದೆ. ಈ ಮೂಲಕ ಆರ್‌ಸಿಬಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದೆ. ಹಾಗಾದ್ರೆ ಎರಡು ತಂಡಗಳಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈಗಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಉದ್ಘಾಟನಾ ಪಂದ್ಯವನ್ನು ಕೆಕೆಆರ್ ವಿರುದ್ಧ ರಾಯಲ್‌ ಆಗಿಯೇ ಗೆದ್ದು ಬೀಗಿದೆ. ಬಳಿಕ ಎರಡನೇ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಇತಿಹಾಸವನ್ನೇ ನಿರ್ಮಿಸಿದೆ. ಇನ್ನು ಇಂದಿನ ಪಂದ್ಯವನ್ನು ತನ್ನದಾಗಿಸಿಕೊಂಡು ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದೆ.

IPL 2025 RCB vs GT Predicted Playing 11 Know Two teams Players list

ಇಂದು ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೆಣಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಭರ್ಜರಿ ಸಿದ್ಧತೆ ತಯಾರಿ ನಡೆಸಿದೆ. ಅಲ್ಲದೆ, ಹ್ಯಾಟ್ರಿಕ್‌ ಗೆಲುವಿನ ಮೂಲಕ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ ಇದೆ.

ಟೂರ್ನಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿತ್ತು. ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡೂ ವಿಭಾಗದಲ್ಲೂ ಉತ್ತಮ ಹಿಡಿತ ಸಾಧಿಸಿರುವ ರಜತ್‌ ಪಾಟೀದಾರ್‌ ಪಡೆ ಕೆಕೆಆರ್‌ ವಿರುದ್ಧ ಗೆದ್ದು ಬೀಗಿತ್ತು. ಈ ಮೂಲಕ ತವರಲ್ಲೇ ಕೆಕೆಆರ್‌ಗೆ ಪಾದಾರ್ಪಣೆ ಪಂದ್ಯದಲ್ಲಿ ಮಣ್ಣು ಮುಕ್ಕಿಸುವ ಕೆಲಸವನ್ನು ಮಾಡಿತ್ತು.

ಮತ್ತೊಂದೆಡೆ ಚೆಪಾಕ್‌ನಲ್ಲಿ ನಡೆದ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಜವಾಬ್ದಾರಿಯುತ ಆಡ ಆಡಿದ್ದರು. ಬೌಲಿಂಗ್‌ನಲ್ಲಿ ಜೋಶ್‌ ಹ್ಯಾಜಲ್‌ವುಡ್‌ ಸಹ ಮಿಂಚಿದ್ದರು. ಇದರಿಂದ ಸಿಎಸ್‌ಕೆ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು 17 ವರ್ಷಗಳ ಬಳಿಕ ಐತಿಹಾಸಿಕ ಗೆಲುವು ದಾಖಲಿಸಿತು. ಇದೀಗ ಬ್ಯಾಟಿಂಗ್‌ ವಿಭಾಗದಲ್ಲಿ ಫಿಲಿಪ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ಟೀಂ ಡೇವಿಡ್‌, ಪಡಿಕ್ಕಲ್, ನಾಯಕ ರಜತ್ ಪಾಟೀದರ್ ಉತ್ತಮ ಲಯದಲ್ಲಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ಕೃನಾಲ್‌ ಪಾಂಡೆ, ಭುವನೇಶ್ವರ್‌ ಕುಮಾರ್‌, ಹ್ಯಾಜಲ್‌ವುಡ್‌ ಬೌಲಿಂಗ್‌ನಲ್ಲಿ ಭರವಸೆ ಮೂಡಿಸಿದ್ದಾರೆ.

ಇನ್ನು ಗುಜರಾತ್‌ ತಂಡಕ್ಕೆ, ಶುಭಮನ್‌ ಗಿಲ್‌, ಜೋಸ್‌ ಬಟ್ಲರ್‌, ರಶೀದ್‌ ಖಾನ್‌ ಪ್ರಮುಖ ಪಾತ್ರರಾಗಿದ್ದಾರೆ. ಇವರು ಆರ್ಭಟಿಸಿದರೆ ಮಾತ್ರ ತಂಡಕ್ಕೆ ಗೆಲುವು ಸಾಧ್ಯ, ಇಲ್ಲದಿದ್ದರೆ ಸೋಲು ಖಚಿತ ಎಂಬಂತಾಗಿದೆ. ಆರ್‌ಸಿಬಿಯಿಂದ ಗುಜರಾತ್‌ಗೆ ಬಂದಿರುವ ಮೊಹಮ್ಮದ್‌ ಸಿರಾಜ್‌ ಸಹ ತಂಡದ ಬೌಲಿಂಗ್‌ನಲ್ಲಿ ಮಾರಕ ದಾಳಿ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಇದುವರೆಗೂ ಐಪಿಲ್‌ ಟೂರ್ನಿಯಲ್ಲಿ ಆರ್‌ಸಿಬಿ ಮತ್ತು ಗುಜರಾತ್‌ ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆರ್‌ಸಿಬಿ 3ರಲ್ಲಿ ಹಾಗೂ ಗುಜರಾತ್‌ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಆರ್‌ಸಿಬಿ ಸಂಭಾವ್ಯ ಆಟಗಾರರು: ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌, ದೇವದತ್‌ ಪಡಿಕ್ಕಲ್‌, ರಜತ್‌ ಪಾಟೀದಾರ್‌ (ನಾಯಕ), ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಿತೇಶ್‌ ಕುಮಾರ್‌, ಟಿಮ್‌ ಡೇವಿಡ್‌, ಕೃನಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜೋಶ್‌ ಹ್ಯಾಜಲ್‌ವುಡ್‌, ಯಶ್‌ ದಯಾಳ್‌, ಸುಯಶ್‌/ರಸಿತ್‌.

ಗುಜರಾತ್‌ ಸಂಭಾವ್ಯ ಆಟಗಾರರು: ಸಾಯಿ ಸುದರ್ಶನ್‌, ಅನುಜ್‌, ಶುಭಮನ್‌ ಗಿಲ್‌ (ನಾಯಕ), ಜೋಸ್‌ ಬಟ್ಲರ್‌, ರುಥರ್‌ಪೋರ್ಡ್‌, ಶಾರುಖ್‌, ತೆವಾಟಿಯಾ, ರಶೀದ್‌ ಖಾನ್‌, ರಬಾಡ, ಸಾಯಿ ಕಿಶೋರ್‌, ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್‌ ಕೃಷ್ಣ, ಇಶಾಂತ್‌ ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+