IPL 2025 RCB vs KKR: ಕೆಕೆಆರ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ಆರ್‌ಸಿಬಿ ಸಜ್ಜು: ಎಲ್ಲಿ, ಯಾವಾಗ ವೀಕ್ಷಿಸಬಹುದು?

IPL 2025 KKR vs RCB: 18ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭವಾಗಲಿದೆ. ಮೊದಲ ಉದ್ಘಾಟನಾ ಪಂದ್ಯ ಆರ್‌ಸಿಬಿ ಹಾಗೂ ಕೆಕೆಆರ್‌ ನಡುವೆ ನಡೆಯಲಿದೆ. ಹಾಗಾದ್ರೆ ಎಲ್ಲಿ ವೀಕ್ಷಣೆ ಮಾಡಬಹುದು ಹಾಗೂ ಎಷ್ಟು ಗಂಟೆಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಮಯ ಹಾಗೂ ಸ್ಥಳ: 2025ರ ಆವೃತ್ತಿಯ ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಉದ್ಘಾಟನಾ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಇಂದು (ಮಾರ್ಚ್‌ 22) ಸಂಜೆ ಸಂಜೆ 7 ಗಂಟೆಗೆ ಟಾಸ್ ನಡೆಯಲಿದ್ದು, 7:30ಕ್ಕೆ ಪ್ರಾರಂಭ ಆಗಲಿದೆ.

IPL 2025 RCB vs KKR When and Where to Watch Live Score

ಎಲ್ಲಿ ವೀಕ್ಷಣೆ ಮಾಡಬಹುದು?: ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೂ JioHotstar ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಕೆಕೆಆರ್ ಮತ್ತು ಆರ್‌ಸಿಬಿ ಎರಡೂ ತಂಡಗಳು ಐಪಿಎಲ್‌ನಲ್ಲಿ ಈವರೆಗೆ 35 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೋಲ್ಕತ್ತಾ 21 ಪಂದ್ಯಗಳಲ್ಲಿ ಗೆದ್ದಿದ್ದರೆ, ಬೆಂಗಳೂರು 14 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಆಡಿದ 4 ಪಂದ್ಯಗಳಲ್ಲೂ ಕೋಲ್ಕತ್ತಾ ತಂಡ, ಆರ್ಸಿಬಿ ತಂಡವನ್ನು ಸೋಲಿಸಿದೆ. ಆದ್ದರಿಂದ ರಜತ್ ಪಾಟಿದರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಆರ್ಸಿಬಿಯು ರಹಾನೆ ನಾಯಕತ್ವದ ಕೆಕೆಆರ್ ವಿರುದ್ಧದ ಸೋಲಿನ ಸರಣಿಗೆ ಬ್ರೇಕ್ ಹಾಕಲು ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

ತಂಡಗಳ ವಿವರ

ಆರ್‌ಸಿಬಿ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಖ್ ಸಲಾಮ್ ದಾರ್, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ಲುಂಗಿ ಎನ್‌ಗಿಡಿ, ಸ್ವಸ್ತಿಕ್ ಚಿಕ್ಕಾರ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಕೆಕೆಆರ್‌: ಅಜಿಂಕ್ಯ ರಹಾನೆ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಜ್, ಅನ್ರಿಚ್ ನೋಕಿಯಾ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಜಾನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+