RCB vs LSG: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಸ್ಫೋಟಕ ಆಲ್‌ರೌಂಡರ್, ಮಾರಕ ವೇಗಿ ಎಂಟ್ರಿ
ಐಪಿಎಲ್ 2025ರ ಆವೃತ್ತಿಯ ಕೊನೆಯ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದಿರುವ ಆರ್ ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕ್ವಾಲಿಫೈಯರ್ 1 ಪಂದ್ಯವನ್ನಾಡಲು ಮೊದಲ 2 ಸ್ಥಾನದಲ್ಲಿ ಒಂದು ಸ್ಥಾನ ಪಡೆಯಲು ಆರ್ ಸಿಬಿ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಪ್ಲೇಆಫ್ ತಲುಪಲು ವಿಫಲವಾಗಿರುವ ಎಲ್‌ಎಸ್‌ಜಿ ಈ ಪಂದ್ಯವನ್ನು ಗೆದ್ದು ಅಭಿಯಾನವನ್ನು ಕೊನೆಗೊಳಿಸುವ ಉತ್ಸಾಹದಲ್ಲಿದೆ.
ಪ್ಲೇಆಫ್ ಸನಿಹದಲ್ಲಿರುವಾಗಲೇ ಆರ್ ಸಿಬಿ ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿದೆ. ಜೇಕಬ್ ಬೆಥೆಲ್, ಲುಂಗಿ ಎಂಗಿಡಿ ತಮ್ಮ ರಾಷ್ಟ್ರೀಯ ತಂಡಗಳಿಗೆ ಆಡಲು ವಾಪಸಾಗಿದ್ದಾರೆ. ಟಿಮ್ ಡೇವಿಡ್ ಗಾಯಗೊಂಡಿದ್ದು ಅವರು ತಂಡದಿಂದ ಹೊರಗುಳಿದಿದ್ದಾರೆ. ಜೋಶ್ ಹೇಜಲ್‌ವುಡ್ ಕೂಡ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಜೋಶ್ ಹೇಜಲ್‌ವುಡ್, ಡೇವಿಡ್ ಅಲಭ್ಯ
ಟಾಸ್ ಗೆದ್ದ ಬಳಿಕ ಮಾತನಾಡಿದ ಆರ್ ಸಿಬಿ ನಾಯಕ ಜಿತೇಶ್ ಶರ್ಮಾ, ಟಿಮ್ ಡೇವಿಡ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದು ಅವರ ಬದಲಾಗಿ ಲಿಯಾಮ್ ಲಿವಿಂಗ್‌ಸ್ಟೋನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆದಿದ್ದಾರೆ. ಜೋಶ್ ಹೇಜಲ್‌ವುಡ್ ಇನ್ನೂ ಸಂಪೂರ್ಣವಾಗಿ ಫಿಟ್ ಆಗದ ಕಾರಣ ಶ್ರೀಲಂಕಾದ ವೇಗಿ ನುವಾನ್ ತುಷಾರ ಮೊದಲ ಬಾರಿ ಆರ್ ಸಿಬಿ ಪರವಾಗಿ ಕಣಕ್ಕಿಳಿಯಲಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ನಾಯಕ), ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ಸುಯಾಶ್ ಶರ್ಮಾ( ರಜತ್ ಪಟಿದಾರ್; ಬದಲೀ ಆಟಗಾರ).
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಹಿಮ್ಮತ್ ಸಿಂಗ್, ಅವೇಶ್ ಖಾನ್, ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ವಿಲಿಯಂ ಓ'ರೂರ್ಕ್. ( ಬದಲೀ ಆಟಗಾರ; ಆಕಾಶ್ ಸಿಂಗ್).












Click it and Unblock the Notifications