RCB Vs RR: ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11
IPL 2025 RCB Vs RR: ಐಪಿಎಲ್ 2025ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹಾಗಾದ್ರೆ ಎರಡು ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆರ್‌ಸಿಬಿ ಇದುವರೆಗೂ ಆಡಿರುವ 8ರಲ್ಲಿ 5 ಪಂದ್ಯ ಗೆದ್ದು, ಮೂರರಲ್ಲಿ ಸೋಲು ಕಂಡಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 10 ಅಂಕಗಳನ್ನು ಗಳಿಸುವ ಮೂಲಕ 4ನೇ ಸ್ಥಾನದಲ್ಲಿದೆ. ಅದರಲ್ಲೂ ಆರ್‌ಸಿಬಿ ಸೋತಿರುವ ಮೂರು ಪಂದ್ಯಗಳು ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ. ಇನ್ನು ಇಂದು ಕೂಡ ತವರಿನಲ್ಲಿದ್ದು, ಗೆದ್ದೇ ಗೆಲ್ಲುತ್ತದೆ ಎಂಬುದು ಅಭಿಮಾನಿಗಳ ಭರವಸೆಯಾಗಿದೆ.

ತವರಿನಾಂದಾಚೆ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿಗೆ ತವರಿನಲ್ಲಿ ಗೆಲ್ಲುವುದೇ ಒಂದು ಸವಾಲಾಗಿಬಿಟ್ಟಿದೆ. ಆದ್ದರಿಂದ ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಆರ್‌ಆರ್ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಆರ್‌ಸಿಬಿ ಪಣತೊಟ್ಟು ನಿಂತಿದೆ.
ರಾಜಸ್ಥಾನ್ ರಾಯಲ್ಸ್ ತಂಡದ ಇದುವರೆಗೂ ಆಡಿರುವ 8ರಲ್ಲಿ 2 ಪಂದ್ಯಗಳಲ್ಲಿ ಗೆದ್ದು, 6ರಲ್ಲಿ ಸೋಲು ಕಂಡಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಗಳಿಸುವ ಮೂಲಕ 8ನೇ ಸ್ಥಾನದಲ್ಲಿದೆ. ಆದ್ದರಿಂದ ಆರ್‌ಆರ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಅಲ್ಲದೆ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನ್ ರಾಯಲ್ಸ್‌ಗೆ ಮುಂದಿನ ಪ್ರತಿಯೊಂದು ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಕೇವಲ 4 ಅಂಕಗಳನ್ನು ಗಳಿಸಿರುವ ಆರ್‌ಆರ್ ಪ್ಲೇಆಫ್ ತಲುಪಲು ಏನಿಲ್ಲ ಅಂದರೂ 16 ಅಂಕಗಳ ಅಗತ್ಯವಿದೆ. ಅದು ರನ್ ರೇಟ್ ಇದ್ದು. ಒಂದು ವೇಳೆ ಇಂದಿನ ಪಂದ್ಯದಲ್ಲಿ ಸೋತರೆ ಈ ತಂಡ ಪ್ಲೇಆಫ್ ರೇಸ್‌ನಿಂದ ಹೊರಗುಳಿಯುವುವ ಸಾಧ್ಯತೆ ಹೆಚ್ಚಿದೆ.
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭಂ ದುಬೆ, ರಿಯಾನ್ ಪರಾಗ್ (ನಾಯಕ), ನಿತೀಶ್ ರಾಣಾ, ಧ್ರುವ್ ಜುರೆಲ್ (ವಿ.ಕೀ), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ/ಆಕಾಶ್ ಮಧ್ವಾಲ್.
ಆರ್ಸಿಬಿ ಸಂಭಾವ್ಯ 11: ಫಿಲಿಫ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೆವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.












Click it and Unblock the Notifications