IPL 2025 Jio Offer: ಐಪಿಎಲ್ ಕ್ರಿಕೆಟ್ ವೀಕ್ಷಕರಿಗೆ ಜಿಯೋ ಭರ್ಜರಿ ಆಫರ್
IPL 2025 Jio Offer: ಐಪಿಎಲ್ 18ನೇ ಸೀಸನ್ ಹಬ್ಬದ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯ ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ನಡೆಯಲಿದ್ದು, ಇದಕ್ಕೂ ಮುನ್ನವೇ ಜಿಯೋದಿಂದ ಐಪಿಎಲ್ ವೀಕ್ಷಣೆ ಮಾಡುವವರಿಗೆ ಭರ್ಜರಿ ಆಫರ್ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಮತ್ತೇಕೆ ತಡ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
2025ರ ಐಪಿಎಲ್ ಹಬ್ಬ ಮಾರ್ಚ್ 22ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ತನ್ನ ಅಸ್ತಿತ್ವದಲ್ಲಿರುವ ಹಾಗೂ ಹೊಸ ಗ್ರಾಹಕರಿಗೆ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಭರ್ಜರಿ ಆಫರ್‌ಗಳನ್ನು ಘೋಷಣೆ ಮಾಡಿದೆ.

ನಿಮ್ಮ ಮೊಬೈಲ್ ಮತ್ತು ಟಿವಿಯಲ್ಲಿ 4K ಗುಣಮಟ್ಟದಲ್ಲಿ ಉಚಿತ ಜಿಯೋ ಹಾಟ್‌ಸ್ಟಾರ್ ಪ್ರವೇಶ ಹಾಗೂ ವಿಶೇಷ ಜಿಯೋ ಏರ್‌ಫೈಬರ್ ಪ್ರವೇಶ, 100 ಲೈವ್ ಟಿವಿ ಚಾನೆಲ್‌ಗಳ ವೀಕ್ಷಣೆಗೆ ಅವಕಾಶ, ಹಲವು ಓಟಿಟಿ ಅಪ್ಲಿಕೇಶನ್‌ಗಳಿಗೆ ಉಚಿತ ಚಂದಾದಾರಿಕೆಯನ್ನು ನೀಡಲು ಮುಂದಾಗಿದೆ. ಜಿಯೋ ಘೋಷಿಸಿರುವ ಈ ಅನ್ಲಿಮಿಟೆಡ್ ಕೊಡುಗೆಗಳ ಪ್ರಯೋಜನವನ್ನು ಪಡೆಯಲು ಗ್ರಾಹಕರು 299 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಪ್ರಿಪೇಯ್ಡ್ ಯೋಜನೆಗಳನ್ನು ರಿಚಾರ್ಜ್ ಮಾಡಿಸಬೇಕು.
ಇದರಲ್ಲಿ 4K ಗುಣಮಟ್ಟದ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ (ಟಿವಿ ಹಾಗೂ ಮೊಬೈಲ್) 90 ದಿನಗಳವರೆಗೆ ಲಭ್ಯ ಇರುತ್ತದೆ. ಮನೆಯಲ್ಲಿ 50 ದಿನಗಳ ಉಚಿತ ಜಿಯೋ ಏರ್‌ಫೈಬರ್ ಸಂಪರ್ಕವೂ ಸಿಗಲಿದೆ. ಈ ಉಚಿತ ಕೊಡುಗೆಗಳ ಲಾಭವನ್ನು ಪಡೆಯಲು ಅಸ್ತಿತ್ವದಲ್ಲಿರುವ ಜಿಯೋ ಪ್ರಿಪೇಯ್ಡ್ ಗ್ರಾಹಕರು ಮಾರ್ಚ್ 17ರಿಂದ ಮಾರ್ಚ್ 31ರ ನಡುವೆ ರಿಚಾರ್ಜ್ ಮಾಡಿಸಬೇಕು.
ಹೊಸ ಗ್ರಾಹಕರು ಮಾರ್ಚ್ ತಿಂಗಳಾಂತ್ಯದ ಒಳಗೆ ಹೊಸ ಜಿಯೋ ಸಿಮ್ ಖರೀದಿಸಬೇಕು. ಇದರಲ್ಲಿ ಮಾರ್ಚ್ 22, 2025ರಿಂದ 90ದಿನಗಳವರೆಗೆ ಉಚಿತ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಸಕ್ರಿಯಗೊಳಿಸಲಾಗುತ್ತದೆ. ಜಿಯೋ ನೀಡುತ್ತಿರುವ ಈ ಕೊಡುಗೆಗಳು ಮತ್ತು ಪ್ರಯೋಜನಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಗ್ರಾಹಕಾರು 60008-60008ಗೆ ಮಿಸ್ಡ್ ಕಾಲ್ ನೀಡಬಹುದು ಅಥವಾ Jio.comಗೆ ಭೇಟಿ ನೀಡಬಹುದಾಗಿದೆ. ಮೊದಲ ಪಂದ್ಯ ಮಾರ್ಚ್ 22ರಂದು ಕೆಕೆಆರ್ ಹಾಗೂ ಆರ್‌ಸಿಬಿ ನಡುವೆ ನಡೆಯಲಿದೆ.
ಐಪಿಎಲ್ ಕ್ರಿಕೆಟ್ ವಿಶ್ವದಲ್ಲೇ ಅತೀ ದೊಡ್ಡ ಲೀಗ್ ಆಗಿದೆ. ಇದನ್ನು ವೀಕ್ಷಣೆ ಮಾಡಲು ಬರೀ ಭಾರತದ ಅಷ್ಟೇ ಅಲ್ಲದೆ, ಇಡೀ ವಿಶ್ವದಾದ್ಯಂತ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications