IPL 2026: ಐಪಿಎಲ್ 2026 ಆರಂಭಕ್ಕೂ ಮುನ್ನ ಕೆಕೆಆರ್‌ಗೆ ಬಿಸಿಸಿಐ ಖಡಕ್ ಸೂಚನೆ
IPL 2026: ಈಗಾಗಲೇ ಐಪಿಎಲ್ 2026ರ ಆವೃತ್ತಿಯ ಮಿನಿ ಹರಾಜು ಪ್ರಕ್ರಿಯೆ ಮುಗಿದಿದೆ. ಇದೀಗ ಎಲ್ಲಾ ತಂಡಗಳಲ್ಲಿ ಯಾರನ್ನು ಯಾವ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎನ್ನುವ ಪ್ಲ್ಯಾನ್‌ನಲ್ಲಿವೆ. ಈ ನಡುವೆಯೇ ಬಿಸಿಸಿಐ ಕೆಕೆಆರ್‌ಗೆ ಖಡಕ್ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಪಿಎಲ್ 2026ರ ಆವೃತ್ತಿಗಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜನವರಿ 3ರ ಶನಿವಾರ ಸೂಚನೆ ನೀಡಿದೆ.

ಮಂಡಳಿಯಾದ್ಯಂತ ಇತ್ತೀಚಿನ ಬೆಳವಣಿಗೆಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ದೇವಜಿತ್ ತಿಳಿಸಿದ್ದಾರೆ. ಈ ಕುರಿತು ಎಎನ್‌ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ ನೋಡಿ.
ಕಳೆದ ಕೆಲವು ತಿಂಗಳೂಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ಆಗುತ್ತಿವೆ. ಈ ವಿಚಾರ ದೊಟ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನೂ ಇದರಿಂದ ಭಾರತ ಮತ್ತು ಬಾಂಗ್ಲಾ ನಡುವಿನ ಸಂಬಂಧಕ್ಕೆ ಭಾರೀ ಬಿಕ್ಕಟ್ಟು ಉಂಟಾಗಿದೆ.
ಮುಸ್ತಾಫಿಜುರ್ ರೆಹಮಾನ್ ಕೈಬಿಡಲು ಸೂಚನೆ: ಬಾಂಗ್ಲಾದಲ್ಲಿ ಭಾರತ ವಿರೋಧಿ ಚುಟುವಟಿಕೆಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಬಾಂಗ್ಲಾದ ಆಟಗಾರರನ್ನು ಖರೀದಿ ಮಾಡಿರುವ ಕೆಕೆಆರ್ ತಂಡದ ಮಾಲೀಕ ಹಾಗೂ ನಟ ಶಾರುಖ್ ಖಾನ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೆಕೆಆರ್‌ಗೆ ಸೂಚನೆ ನೀಡಿದೆ.
ಮಿನಿ ಹಾರಾಜಿನಲ್ಲಿ ಖರೀದಿ: ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಡಿಸೆಂಬರ್ 16ರಂದು ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನ ವೇಳೆ ಕೆಕೆಆರ್ ಫ್ರಾಂಚೈಸಿ ಖರೀದಿಸಿತ್ತು. ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಗಿಲೆದ್ದಿದ್ದವು. ಇನ್ನೂ ಉತ್ತರ ಪ್ರದೇಶದ ವಿಧಾನಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಸಂಗೀತ್ ಸೋಮ್, ಶಾರುಖ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.
ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎನ್ನುವ ಗಂಭೀರ ಆರೋಪಗಳಿವೆ. ಈ ನಡುವೆಯೇ ಐಪಿಎಲ್‌ನಲ್ಲಿ ಬಾಂಗ್ಲಾ ಕ್ರಿಕೆಟಿಗರನ್ನು ಖರೀದಿಸಲಾಗುತ್ತಿದೆ. ದೇಶದ್ರೋಹಿ ಶಾರುಖ್ ಖಾನ್, ಬಾಂಗ್ಲಾದೇಶದ ಕ್ರಿಕೆಟಿಗ ರೆಹಮಾನ್ ಅವರನ್ನು 9.20 ಕೋಟಿ ರೂಪಾಯಿಗೆ ಖರೀದಿಸಿ ಮಾಡಿದ್ದಾರೆ. ಅಂತಹ ದೇಶದ್ರೋಹಿಗಳಿಗೆ ಈ ದೇಶದಲ್ಲಿ ವಾಸಿ ಮಾಡುವ ಹಕ್ಕಿಲ್ಲ ಎಂದು ಮೀರತ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೋಮ್ ಅವರು ವಾಗ್ದಾಳಿ ನಡೆಸಿದರು.
ನೀವು ಈ ಮಟ್ಟಕ್ಕೆ ಬೆಳೆಯಲು ಪ್ರಮುಖ ಕಾರಣ ನಮ್ಮ ಭಾರತದ ಜನರು. ನಿಮ್ಮನ್ನು ಉನ್ನತ ಸ್ಥಾನದಲ್ಲಿ ನೋಡುತ್ತಿದ್ಧಾರೆ. ಇದಕ್ಕೆ ಅವಮಾನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇವರು ಅಷ್ಟೇ ಅಲ್ಲದೆ, ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕೆ ಬಹುತೇಕ ಮಂದಿ ಕಡಿಕಾರಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಸಿಸಿಐ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಕೆಕೆಆರ್‌ಗೆ ಖಡಕ್ ಸೂಚನೆ ನೀಡಿದೆ.
#WATCH | Guwahati | BCCI secretary Devajit Saikia says, "Due to the recent developments that are going on all across, BCCI has instructed the franchise KKR to release one of their players, Mustafizur Rahman of Bangladesh, from their squad and BCCI has also said that if they ask… pic.twitter.com/53oxuRcmZp
— ANI (@ANI) January 3, 2026
ಐಪಿಎಲ್ 2026 ಆರಂಭಕ್ಕೂ ಮುನ್ನವೇ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಈ ನಿರ್ದಾರಕ್ಕೆ ಮೆಚ್ಚುಗೆಗಳು ವ್ಯಕ್ತವಾಗಿವೆ. ನೆಟ್ಟಿಗರು ಬಾಂಗ್ಲಾದೇಶದ ಆಟಗಾರರನ್ನು ಕೈಬಿಡಲು ಸೂಚಿಸಿರುವುದು ತುಂಬಾ ಸಂತಸದ ವಿಚಾರ. ಎರಡು ದೇಶದಗಳ ನಡುವೆ ಬಾಂಧವ್ಯ ಅಷ್ಟಕಷ್ಟೇ ಎಂಬಂತಾಗಿದೆ. ಆದ್ದರಿಂದ ಇದೀಗ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳುತ್ತಿದ್ದಾರೆ. ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈ ಹಿನ್ನೆಲೆ ಬಾಂಗ್ಲಾದೇಶದ ಕ್ರಿಕೆಟಿಗರನ್ನು ಐಪಿಎಲ್‌ನಲ್ಲಿ ಆಡಿಸುವಂತಿಲ್ಲ ಎಂಬ ಒತ್ತಾಯಗಳು ಕೇಳಿಬಂದಿದ್ದವು. ಇದಕ್ಕೆ ಮಣಿದ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
-
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Virat Kohli: ಘನತೆಗೆ ತಕ್ಕ ಆಟ ಇಲ್ಲ; ವಿರಾಟ್ ಕೊಹ್ಲಿ ಬದಲಿಗೆ ಬೆಥೆಲ್ ಆಡಿಸುವ ಸೂಚನೆ ನೀಡಿದ್ರಾ ಭಾರತದ ಮಾಜಿ ಕ್ರಿಕೆಟಿಗ? -
RCB Vs LSG: ಬೆಂಗಳೂರಿನಲ್ಲಿ ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
Praful Hinge: ಒಂದೇ ರಾತ್ರಿಯಲ್ಲಿ ಚೇಂಜ್ ಆಯ್ತು ಪ್ರಫುಲ್ ಲಕ್, 3 ಲಕ್ಷ ದಾಟಿದ ಇನ್ಸ್ಟಾಗ್ರಾಂ ಫಾಲೋವರ್ಸ್ -
ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್, ಪ್ರಫುಲ್ ಹಿಂಗೆ, ಸಾಕಿಬ್ ಹುಸೇನ್ ಮಾರಕ ಬೌಲಿಂಗ್ ದಾಳಿಗೆ ಮಣಿದ ಆರ್ಆರ್ -
ಮೈದಾನದಲ್ಲಿ ಲೆಜೆಂಡ್ ಬೌಲರ್ಗಳ ಮೇಲೆ ಸವಾರಿ, ಬಸ್ನಲ್ಲಿ ಸ್ವಿಚ್, ಲೈಟ್, ಎಸಿ ಜೊತೆ ಕಿಲಾಡಿ ಆಟ; ವೈಭವ್ ವಿಡಿಯೋ ಭಾರಿ ವೈರಲ್ -
IPL 2026: ಎಸ್ಆರ್ಎಚ್-ಆರ್ಆರ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications