IPL 2026 RCB: ಆರ್ಸಿಬಿ ಫ್ಯಾನ್ಸ್ಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ರೆ ಮೆಟ್ರೋ ಪ್ರಯಾಣ ಉಚಿತ? ವರದಿ
IPL 2026 RCB: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಹಬ್ಬ ಇನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಮತ್ತು ಆರ್ಸಿಬಿ ಮ್ಯಾನೇಜ್ಮೆಂಟ್ ನಡುವೆ ಮಹತ್ವದ ಮಾತುಕತೆ ನಡೆಯುತ್ತಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಮನಿಕಂಟ್ರೋಲ್ ವರದಿ ಮಾಡಿದೆ.
ಪಂದ್ಯದ ಟಿಕೆಟ್ ತೋರಿಸುವ ಮೂಲಕ ಅಭಿಮಾನಿಗಳು ಸ್ಟೇಡಿಯಂಗೆ ಹೋಗಲು ಮತ್ತು ಬರಲು ಮೆಟ್ರೋ ಬಳಸಬಹುದು. ಪಂದ್ಯದ ಟಿಕೆಟ್ನಲ್ಲೇ ಮೆಟ್ರೋ ಪ್ರಯಾಣದ ಶುಲ್ಕವನ್ನೂ ಸೇರಿಸುವ ಅಥವಾ ಟಿಕೆಟ್ ಅನ್ನೇ ಮೆಟ್ರೋ ಪಾಸ್ ಆಗಿ ಬಳಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಸ್ಟೇಡಿಯಂ ಸುತ್ತಮುತ್ತ ಉಂಟಾಗುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ತಿಳಿದುಬಂದಿದೆ.

ಐಪಿಎಲ್ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಸೇವೆ?
ಈ ಪ್ರಸ್ತಾವನೆ ಜಾರಿಗೆ ಬಂದರೆ, ಐಪಿಎಲ್ ಟಿಕೆಟ್ ಹೊಂದಿರುವವರು ಯಾವುದೇ ಮೆಟ್ರೋ ನಿಲ್ದಾಣದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದವರೆಗೆ (ಕ್ರೀಡಾಂಗಣಕ್ಕೆ ಅತಿ ಹತ್ತಿರದ ನಿಲ್ದಾಣ) ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪಂದ್ಯದ ಟಿಕೆಟ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ನಮ್ಮ ಮೆಟ್ರೋದ ಸ್ವಯಂಚಾಲಿತ ಟಿಕೆಟ್ ಸಂಗ್ರಹಣಾ ಗೇಟ್ಗಳಲ್ಲಿ ಸ್ಕ್ಯಾನ್ ಮಾಡುವ ಮೂಲಕ ನೀವು ನೇರವಾಗಿ ಪ್ರವೇಶ ಪಡೆಯಬಹುದು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಆರ್ಸಿಎಲ್, ಆರ್ಸಿಬಿ ಮ್ಯಾನೇಜ್ಮೆಂಟ್, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ನಡುವೆ ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. "ಆದರೆ, ಈ ಪ್ರಸ್ತಾವನೆಯು ಇನ್ನೂ ಚರ್ಚೆಯ ಹಂತದಲ್ಲಿದೆ. ಯೋಜನೆಗೆ ಸಂಬಂಧಿಸಿದಂತೆ ಇನ್ನಷ್ಟು ಸ್ಪಷ್ಟವಾದ ಚಿತ್ರಣ ಸಿಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು," ಎಂದು ಮೂಲಗಳು ತಿಳಿಸಿವೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.
ಇದು ಜಾರಿಗೆ ಬಂದರೆ, ಮಾನ್ಯವಾದ ಪಂದ್ಯ ಟಿಕೆಟ್ ಹೊಂದಿರುವ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಹೋಗಿ ಬರುವುದಕ್ಕಾಗಿ ಮೆಟ್ರೋ ಟೋಕನ್ ಖರೀದಿಸುವ ಅಗತ್ಯವಿಲ್ಲ ಅಥವಾ ಕಾರ್ಡ್ ಮೂಲಕ ಶುಲ್ಕ ಪಾವತಿಸುವ ಅವಶ್ಯಕತೆಯೂ ಇರದು. ಅವರು ತಮ್ಮ ಪಂದ್ಯದ ಟಿಕೆಟ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಮೆಟ್ರೋ ನಿಲ್ದಾಣದ ಸ್ವಯಂಚಾಲಿತ ಟಿಕೆಟ್ ಸಂಗ್ರಹಣಾ ಗೇಟ್ಗಳಲ್ಲಿ ಸ್ಕ್ಯಾನ್ ಮಾಡಿ ನೇರವಾಗಿ ಪ್ರಯಾಣಿಸಬಹುದಾಗಿದೆ.
ಮತ್ತೊಂದು ಮೂಲದ ಪ್ರಕಾರ, "ಈ ಯೋಜನೆಯಿಂದ ಕ್ರೀಡಾಂಗಣಕ್ಕೆ ಬರುವ ಸಾವಿರಾರು ಜನರು ತಮ್ಮ ಸ್ವಂತ ವಾಹನಗಳನ್ನು ಬಳಸುವ ಬದಲು ಮೆಟ್ರೋವನ್ನು ಅವಲಂಬಿಸುತ್ತಾರೆ. ಇದರಿಂದ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುತ್ತದೆ. ಜೊತೆಗೆ, ಬಿಎಂಆರ್ಸಿಎಲ್ಗೆ ಹೆಚ್ಚಿನ ಆದಾಯ ಹರಿದುಬರುವ ಸಾಧ್ಯತೆಯಿದೆ," ಎಂದು ವರದಿಯಾಗಿದೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ, ಬಿಎಂಆರ್ಸಿಎಲ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಅಂತಲೂ ವರದಿಯಾಗಿದೆ.
ಚೆನ್ನೈ ಮೆಟ್ರೋ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ 2023ರಿಂದಲೇ ಇದೇ ರೀತಿಯ ಒಪ್ಪಂದ ಜಾರಿಯಲ್ಲಿದೆ. ಅಲ್ಲಿ ಐಪಿಎಲ್ ಪಂದ್ಯದ ಟಿಕೆಟ್ ಹೊಂದಿರುವ ವೀಕ್ಷಕರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ
ಐಪಿಎಲ್ನ 19ನೇ ಆವೃತ್ತಿಯ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 28ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಮೆಟ್ರೋ, ಬಿಎಂಟಿಸಿ ಬಸ್ ಸೇವೆ ವಿಸ್ತರಣೆಗೆ ಪ್ಲ್ಯಾನ್
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವ ದಿನಗಳಂದು, ಮೆಟ್ರೋ ರೈಲು ಸೇವೆ ಸಮಯವನ್ನು ರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗುವುದು. ಇದು ಎಲ್ಲಾ ಆರು ಟರ್ಮಿನಲ್ ನಿಲ್ದಾಣಗಳಿಂದ ಅನ್ವಯವಾಗಲಿದೆ. ಅಲ್ಲದೆ, ಬಿಎಂಟಿಸಿ ಕೂಡ ಪಂದ್ಯದ ದಿನಗಳಲ್ಲಿ ಬಸ್ ಸಮಯವನ್ನು ವಿಸ್ತರಿಸುವುದಲ್ಲದೆ, ಕ್ರೀಡಾಂಗಣಕ್ಕೆ ಬರುವ ಮತ್ತು ಹೋಗುವ ಅಭಿಮಾನಿಗಳಿಗಾಗಿ ಹೆಚ್ಚಿನ ಸಂಖ್ಯೆಯ ವಿಶೇಷ ಬಸ್ಗಳನ್ನು ಓಡಿಸಲು ನಿರ್ಧರಿಸಿದೆ.
ಪಂದ್ಯದ ನಂತರ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಒಂದೇ ಬಾರಿಗೆ ಸೇರುವುದರಿಂದ, ಟೋಕನ್ ನೀಡಲು ಕಷ್ಟವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್ಸಿಎಲ್ ಹಿಂದಿನ ಪಂದ್ಯಗಳಂತೆಯೇ 'ರಿಟರ್ನ್ ಜರ್ನಿ ಪೇಪರ್ ಟಿಕೆಟ್'ಗಳನ್ನು ನೀಡುವ ಪದ್ಧತಿಯನ್ನು ಮುಂದುವರಿಸಲಿದೆ ಎಂದು ತಿಳಿದುಬಂದಿದೆ.
-
ಮುಂಬೈನಲ್ಲಿ ಬರೋಬ್ಬರಿ 20,00,00,000 ರೂಪಾಯಿ ಮೌಲ್ಯದ ಅಪಾರ್ಟ್ಮೆಂಟ್ ಖರೀದಿಸಿದ ಶುಭ್ಮನ್ ಗಿಲ್: ವರದಿ -
PBKS Vs GT: ಪಂಜಾಬ್ ಕಿಂಗ್ಸ್ ಪರ ಕೂಪರ್ ಕಾನೊಲಿ ಹರಿಸಿದ ರನ್ ಮಳೆಗೆ ಕೊಚ್ಚಿಹೋದ ಗುಜರಾತ್ ಟೈಟನ್ಸ್ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications