IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ
IPL 2026: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಆವೃತ್ತಿಯ ಎರಡನೇ ಹಂತದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು (ಮಾರ್ಚ್ 26) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಈ ಬಾರಿಯ ಟೂರ್ನಿಯ ಪೂರ್ಣ ಚಿತ್ರಣ ಸಿಕ್ಕಂತಾಗಿದೆ.
ಐಪಿಎಲ್ ನಡೆಯುವ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಎದುರಾಗಿರುವ ಕಾರಣ, ಭದ್ರತಾ ದೃಷ್ಟಿಯಿಂದ ಬಿಸಿಸಿಐ ವೇಳಾಪಟ್ಟಿಯನ್ನು ಎರಡು ಹಂತದಲ್ಲಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಮೊದಲು ಮಾರ್ಚ್ 28ರಿಂದ ಏಪ್ರಿಲ್ 12 ರವರೆಗೆ ಒಟ್ಟು 20 ಪಂದ್ಯಗಳ ವೇಳಾಪಟ್ಟೊಯನ್ನು ಪ್ರಕಟ ಮಾಡಿತ್ತು. ಇದೀಗ ಇಂದು ಎರಡನೇ ಹಂತದಲ್ಲಿ ಏಪ್ರಿಲ್ 13ರಿಂದ ಮೇ 24ರ ವರೆಗೆ ಬಾಕಿ ಉಳಿದಿರುವ 50 ಲೀಗ್ ಪಂದ್ಯಗಳು ಜರುಗಲಿವೆ ಎಂದು ತಿಳಿಸಿದೆ.

ಈ ಎಲ್ಲಾ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಡಬಲ್ ಹೆಡರ್ ಪಂದ್ಯ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಎರಡನೇ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ.
ಎಲ್ಲೆಲ್ಲಿ ಪಂದ್ಯಗಳು ನಡೆಯಲಿವೆ?
ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ ಮತ್ತು ನ್ಯೂ ಚಂಡೀಗಢದದಲ್ಲಿ ಪಂದ್ಯಗಳು ನಡೆಯಲಿವೆ. ಈ ಸೀಸನ್‌ನಲ್ಲಿ ಒಟ್ಟು 12 ಡಬಲ್ ಹೆಡರ್ (ಒಂದೇ ದಿನ ಎರಡು ಪಂದ್ಯ) ಪಂದ್ಯಗಳಿರಲಿವೆ. ಮಧ್ಯಾಹ್ನದ ಪಂದ್ಯಗಳು 3:30ಕ್ಕೆ ಹಾಗೂ ಸಂಜೆಯ ಪಂದ್ಯಗಳು 7:30ಕ್ಕೆ ಆರಂಭವಾಗಲಿವೆ.
ಐಪಿಎಲ್ 2026 ಸಂಪೂರ್ಣ ವೇಳಾಪಟ್ಟಿ
* ಮಾರ್ಚ್ 28: ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಮಾರ್ಚ್ 29: ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯವು ಮುಂಬೈನಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಮಾರ್ಚ್ 30: ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಗುವಾಹಟಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮಾರ್ಚ್ 31: ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ನ್ಯೂ ಚಂಡೀಗಢದಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಏಪ್ರಿಲ್ 1: ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ ನಡುವಿನ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 2: ಸನ್‌ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 3: ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 04: ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ದೆಹಲಿಯಲ್ಲಿ ಮಧ್ಯಾಹ್ನ 3:30ಕ್ಕೆ ನಡೆಯಲಿದೆ.
* ಏಪ್ರಿಲ್ 04: ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 05: ಲಕ್ನೋ ಸೂಪರ್‌ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 05: ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಬೆಂಗಳೂರಿನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 06: ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 07: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಗುವಾಹಟಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 08: ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಡೆಲ್ಲಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 09: ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 10: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ ಪಂದ್ಯ ಗುವಾಹಟಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 11: ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ ಪಂದ್ಯ ನ್ಯೂ ಚಂಡೀಗಢದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 11: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 12: ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 12: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಏಪ್ರಿಲ್ 13: ರಾಜಸ್ಥಾನ ರಾಯಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 14: ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 15: ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಬೆಂಗಳೂರು ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 16: ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 17: ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 18: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಬೆಂಗಳೂರಿನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 18: ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 19: ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 19: ಲಕ್ನೋ ಸೂಪರ್‌ಜೈಂಟ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯ ನ್ಯೂ ಚಂಡೀಗಢದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 20: ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 21: ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 22: ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 23: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 24: ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಬೆಂಗಳೂರಿನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 25: ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಡೆಲ್ಲಿಯಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 25: ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಜೈಪುರದಲ್ಲಿ ಸಂಜೆ 7:30ಕ್ಕೆ ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 26: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 26: ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ ಪಂದ್ಯ ದೆಹಲಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 28: ರಾಜಸ್ಥಾನ್ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯ ನ್ಯೂ ಚಂಡೀಗಢದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಏಪ್ರಿಲ್ 29: ಸನ್‌ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಏಪ್ರಿಲ್ 30: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 01: ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಜೈಪುರದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 02: ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.
* ಮೇ 03: ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಮೇ 03: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 04: ಲಕ್ನೋ ಸೂಪರ್‌ಜೈಂಟ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 05: ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ ಪಂದ್ಯ ದೆಹಲಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 06: ಪಂಜಾಬ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 07: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 08: ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ ಪಂದ್ಯ ದೆಹಲಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 09: ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಜೈಪುರದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 10: ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಮೇ 10: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ರಾಯ್ಪುರದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 11: ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯ ಧರ್ಮಶಾಲಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 12: ಸನ್‌ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 13: ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ರಾಯ್ಪುರದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 14: ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯ ಧರ್ಮಶಾಲಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 15: ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 16: ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 17: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯ ಧರ್ಮಶಾಲಾದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಮೇ 17: ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ ಪಂದ್ಯ ದೆಹಲಿಯಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 18: ಸನ್‌ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 19: ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯ ಜೈಪುರದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 20: ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 21: ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಚೆನ್ನೈನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 22: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ಹೈದರಾಬಾದ್‌ನಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 23: ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಲಕ್ನೋದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
* ಮೇ 24: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ ಮುಂಬೈನಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
* ಮೇ 24: ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಕೋಲ್ಕತ್ತಾದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ.
ಪ್ಲೇಆಫ್ ಮತ್ತು ಫೈನಲ್ ಯಾವಾಗ?
ಬಿಸಿಸಿಐ ಸಂಪ್ರದಾಯದಂತೆ, ಪ್ಲೇಆಫ್ ಹಂತದ ಪಂದ್ಯಗಳು ಮತ್ತು ಫೈನಲ್ ಪಂದ್ಯದ ದಿನಾಂಕ ಹಾಗೂ ಸ್ಥಳವನ್ನು ಲೀಗ್ ಹಂತದ ಅಂತಿಮ ವಾರದಲ್ಲಿ ಘೋಷಣೆ ಮಾಡಲಾಗುತ್ತದೆ. ಇನ್ನೂ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ತಂಡಗಳು ಮುಖಾಮುಖಿಯಾಗಲಿವೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
ವಾಂಖೆಡೆಯಲ್ಲಿ ಆರ್‌ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Vaibhav Suryavanshi: ನನ್ನ ಕನಸು ಕೊನೆಗೂ ನನಸಾಯಿತು; ವಿರಾಟ್ ಕೊಹ್ಲಿಗೆ ವಿಶೇಷ ಧನ್ಯವಾದ ಹೇಳಿದ ವೈಭವ್ ಸೂರ್ಯವಂಶಿ -
ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಒಲಿದ ಮೂರು ಮರೆಯಲಾಗದ ಗೌರವಗಳು; ಕಿಂಗ್ ಕೊಹ್ಲಿ ಸಂದೇಶ ಭಾರೀ ವೈರಲ್ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
PBKS VS SRH: ಹೈದರಾಬಾದ್ ಮಣಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡ ಪಂಜಾಬ್ ಕಿಂಗ್ಸ್ -
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್












Click it and Unblock the Notifications