IPL 2026 RCB Vs SRH: ಎಸ್ಆರ್ಎಚ್ನಿಂದ 13,00,00,000 ರೂಪಾಯಿ ಮೌಲ್ಯದ ಸ್ಟಾರ್ ಆಟಗಾರ ಔಟ್
RCB Vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 28) ನಡೆಯಲಿರುವ ಐಪಿಎಲ್ 2026ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಬೆನ್ನು ನೋವಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ನಾಯಕ ಪ್ಯಾಟ್ ಕಮಿನ್ಸ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ತಂಡವನ್ನು ಮುನ್ನಡೆಸಲಿದ್ದಾರೆ.
ಐಪಿಎಲ್ 2025ರ ಆವೃತ್ತಿಯಲ್ಲಿ ಎಸ್ಆರ್ಹೆಚ್ ಪಾಯಿಂಟ್ಸ್ ಟೇಬಲ್ನಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಬ್ಯಾಟಿಂಗ್ ಲೈನಪ್ ಉತ್ತಮವಾಗಿದ್ದರೂ ಸಹ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ತಂಡದ ಹಿನ್ನಡೆಗೆ ಕಾರಣವಾಗಿತ್ತು. ಅದರಲ್ಲೂ ವಿಶೇಷವಾಗಿ 'ಡೆತ್ ಓವರ್'ಗಳಲ್ಲಿ ಹೆಚ್ಚು ರನ್ ಬಿಟ್ಟುಕೊಟ್ಟಿದ್ದರಿಂದ ಹಲವು ಮಹತ್ವದ ಪಂದ್ಯಗಳಲ್ಲಿ ತಂಡವು ಸೋಲನುಭವಿಸಿತು.

ಅಭಿಷೇಕ್, ಟ್ರಾವಿಸ್ ಮೆಲೆ ಭರವಸೆಯಿಟ್ಟ ಎಸ್ಆರ್ಎಚ್
ಸನ್ರೈಸರ್ಸ್ ಹೈದರಾಬಾದ್ ತಂಡವು ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರ ಆರಂಭಿಕ ಜೋಡಿಯ ಮೇಲೆ ಹೆಚ್ಚಿನ ಭರವಸೆ ಇಟ್ಟಿದೆ. ಸರಣಿ ವೈಫಲ್ಯಗಳ ನಂತರ, ಅಭಿಷೇಕ್ ಶರ್ಮಾ ಅವರು 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಅರ್ಧಶತಕ ಸಿಡಿಸಿ ಭಾರತಕ್ಕೆ ಪ್ರಶಸ್ತಿ ಗೆಲ್ಲಿಸಿಕೊಡುವ ಮೂಲಕ ಉತ್ತಮ ಫಾರ್ಮ್ಗೆ ಮರಳಿದ್ದಾರೆ. ಇನ್ನೂ ಇಂದಿನ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಅವರೊಂದಿಗೆ ಸೇರಿ ಅಭಿಷೇಕ್ ಅವರು ಆರ್ಸಿಬಿ ವಿರುದ್ಧ ತಂಡಕ್ಕೆ ಭರ್ಜರಿ ಆರಂಭ ನೀಡಲು ಎದುರು ನೋಡುತ್ತಿದ್ದಾರೆ.
ಯಾರು ಯಾವ ಕ್ರಮಾಂದಲ್ಲಿ ಬ್ಯಾಟ್ ಬೀಸಲಿದ್ದಾರೆ?
ಅಭಿಷೇಕ್ ಶರ್ಮಾ ಅವರು ಇತ್ತೀಚೆಗಷ್ಟೇ ಟೀಂ ಇಂಡಿಯಾ ಪರ ಟಿ20 ವಿಶ್ವಕಪ್ನಲ್ಲಿ ತೋರಿದ ಅದ್ಭುತ ಪ್ರದರ್ಶನವು ಎಸ್ಆರ್ಹೆಚ್ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಮತ್ತೊಂದೆಡೆ, ಆರ್ಸಿಬಿ ಬೌಲರ್ಗಳು ಈ ಅಪಾಯಕಾರಿ ಜೋಡಿಯನ್ನು ಪವರ್ಪ್ಲೇನಲ್ಲೇ ಕಟ್ಟಿಹಾಕಲು ವಿಶೇಷ ತಂತ್ರ ರೂಪಿಸಿದ್ದಾರೆ.
ಇಶಾನ್ ಕಿಶನ್ 3ನೇ ಕ್ರಮಾಂಕದಲ್ಲಿ ಮತ್ತು ಹೆನ್ರಿಚ್ ಕ್ಲಾಸೆನ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ 5ನೇ ಕ್ರಮಾಂಕದಲ್ಲಿ ಆಡಲಿದ್ದು, ಲಿಯಾಮ್ ಲಿವಿಂಗ್ಸ್ಟೋನ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ನಿರೀಕ್ಷೆಯಿದೆ. ಜೊತೆಗೆ ಅವರು ಉತ್ತಮ ಸ್ಪಿನ್ ಬೌಲಿಂಗ್ ಅನ್ನು ಸಹ ಮಾಡಲಿದ್ದು, ತಂಡಕ್ಕೆ ನೆರವಾಗಲಿದ್ದಾರೆ.
ಹೀಗೆ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಎಸ್ಆರ್ಹೆಚ್ 13 ಕೋಟಿ ರೂಪಾಯಿಗೆ ಖರೀದಿಸಿದೆ. ಇಶಾನ್ ಕಿಶನ್ ಈ ಪಂದ್ಯದಲ್ಲಿ ನಾಯಕನಾಗಿ ಮಾತ್ರವಲ್ಲದೆ, ಮೂರನೇ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿಯೂ ತಂಡಕ್ಕೆ ಆಸರೆಯಾಗಲಿದ್ದಾರೆ. ಕೆಳಕ್ರಮಾಂಕದಲ್ಲಿ ಅನಿಕೇತ್ ವರ್ಮಾ ಅವರ ಸ್ಫೋಟಕ ಆಟವು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದೆ. ಇಂದಿನ ಪಂದ್ಯದಲ್ಲಿ ಅವರು ಆರ್ಸಿಬಿ ಬೌಲರ್ಗಳ ವಿರುದ್ಧ ಕೊನೆಯ ಓವರ್ಗಳಲ್ಲಿ ಹೇಗೆ ರನ್ ಗಳಿಸುತ್ತಾರೆ ಎಂದು ಕಾದುನೋಡಬೇಕಿದೆ.
ಬೌಲಿಂಗ್ ವಿಭಾಗದ ವಿವರ
ಬೌಲಿಂಗ್ ವಿಭಾಗಕ್ಕೆ ಬರುವುದಾದರೆ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್ ಮತ್ತು ಈಶಾನ್ ಮಾಲಿಂಗ ಅವರು ಪ್ರಮುಖ ವೇಗಿಗಳಾಗಿದ್ದಾರೆ. ಇನ್ನು ಹರ್ಷ್ ದುಬೆ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. 'ಇಂಪ್ಯಾಕ್ಟ್ ಪ್ಲೇಯರ್' ವಿಚಾರಕ್ಕೆ ಬಂದರೆ, ಪಿಚ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೀಶನ್ ಅನ್ಸಾರಿ ಅಥವಾ ಶಿವಂ ಮಾವಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ, ಹರ್ಷಲ್ ಪಟೇಲ್ ಅವರು ಈ ಹಿಂದೆ ಆರ್ಸಿಬಿ ತಂಡದ ಪರವಾಗಿ ಆಡಿದ್ದರಿಂದ, ಅವರಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬಗ್ಗೆ ಉತ್ತಮ ಅನುಭವವಿದೆ. ಇದು ಎಸ್ಆರ್ಹೆಚ್ ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಬಹುದು.
ಸನ್ರೈಸರ್ಸ್ ಹೈದರಾಬಾದ್ ಸಂಭಾವ್ಯ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ನಾಯಕ, ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಲಿಯಾಮ್ ಲಿವಿಂಗ್ಸ್ಟೋನ್, ಅನಿಕೇತ್ ವರ್ಮಾ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಹರ್ಷ್ ದುಬೆ, ಈಶಾನ್ ಮಾಲಿಂಗ.
-
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
ಮುಂಬೈನಲ್ಲಿ ಬರೋಬ್ಬರಿ 20,00,00,000 ರೂಪಾಯಿ ಮೌಲ್ಯದ ಅಪಾರ್ಟ್ಮೆಂಟ್ ಖರೀದಿಸಿದ ಶುಭ್ಮನ್ ಗಿಲ್: ವರದಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications