MI Vs KKR: 14 ವರ್ಷಗಳ ಬಳಿಕ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್; ಕೆಕೆಆರ್ ವಿರುದ್ಧ ಭರ್ಜರಿ ಜಯ
IPL 2026 MI Vs KKR: ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಇತಿಹಾಸದಲ್ಲಿ ತನ್ನ ಮೇಲಿದ್ದ 14 ವರ್ಷಗಳ ಹಳೆಯ ಅಪಶಕುನವನ್ನು ಕೊನೆಗೂ ತೊಡೆದುಹಾಕಿದೆ. ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್ಗಳಿಂದ ಜಯ ಸಾಧಿಸಿತು. ಈ ಮೂಲಕ 2012ರ ನಂತರ ಮೊದಲ ಬಾರಿಗೆ ಮುಂಬೈ ತಂಡವು ಸೀಸನ್ನ ತನ್ನ ಉದ್ಘಾಟನಾ ಪಂದ್ಯವನ್ನು ಗೆದ್ದುಕೊಂಡಿದೆ.
ಐಪಿಎಲ್ 2026ರ 2ನೇ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 220 ರನ್ಗಳನ್ನು ಕಲೆಹಾಕಿತು. ಈ ಮೂಲಕ ಮುಂಬೈಗೆ 221 ರನ್ಗಳ ಬೃಹತ್ ಗುರಿ ನೀಡಿತು.

ಕೆಕೆಆರ್ ವಿರುದ್ಧ ಎಂಐ ಭರ್ಜರಿ ಗೆಲುವು
ಕೆಕೆಆರ್ ನೀಡಿದ್ದ 221 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್, ತಂಡವು ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ (19.1 ಓವರ್ಗಳಲ್ಲಿ) ಗುರಿ ತಲುಪಿತು. ರಯಾನ್ ರಿಕೆಲ್ಟನ್ ಕೇವಲ 43 ಎಸೆತಗಳಲ್ಲಿ 4 ಬೌಂಡರಿ, 8 ಸಿಕ್ಸರ್ಗಳೊಂದಿಗೆ 81 ರನ್ ಸಿಡಿಸಿ ಗೆಲುವಿನ ರೂವಾರಿಯಾದರು. ಮತ್ತೆ ಹಳೆ ಲಯಕ್ಕೆ ಮರಳಿದ ಹಿಟ್ಮ್ಯಾನ್ ರೋಹಿತ್ ಶರ್ಮಾ ಕೇವಲ 38 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ಗಳೊಂದಿಗೆ ಬರೋಬ್ಬರಿ 78 ರನ್ ಚಚ್ಚಿ ತಂಡಕ್ಕೆ ಭದ್ರ ಬುನಾದಿ ಹಾಕಿದರು.
ಕೆಕೆಆರ್ ಪರ ಮಿಂಚಿದ ರಹಾನೆ
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಅವರು 40 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಿತ 67 ರನ್ ಕಲೆಹಾಕಿದರು. ಮತ್ತೊಂದೆಡೆ, ಪದಾರ್ಪಣೆ ಪಂದ್ಯದಲ್ಲೇ ಅಂಗ್ಕ್ರಿಶ್ ರಘುವಂಶಿ ಅವರು, 29 ಎಸೆತಗಳಲ್ಲಿ 51 ರನ್ ಸಿಡಿಸಿ ಮಿಂಚಿದರು. ರೋಹಿತ್ ಶರ್ಮಾ ಅವರು ರಘುವಂಶಿ 21 ರನ್ ಗಳಿಸಿದ್ದಾಗ ಕ್ಯಾಚ್ ಕೈಬಿಟ್ಟಿದ್ದು ಮುಂಬೈಗೆ ದುಬಾರಿಯಾಗಿ ಪರಿಣಮಿಸಿತ್ತು.
ಇನ್ನುಳಿದಂತೆ ಕೆಕೆಆರ್ ಪರ ಫಿನ್ ಅಲೆನ್ 37(17), ಕ್ಯಾಮರನ್ ಗ್ರೀನ್ 18(10), ರಿಂಕು ಸಿಂಗ್ ಅಜೇಯ 33, ರಮಣ್ದೀಪ್ ಸಿಂಗ್ ಅಜೇಯ 4 ರನ್ ಗಳಿಸಿ ತಂಡದ ಮೊತ್ತವನ್ನು 220ಕ್ಕೆ ತಲುಪಿಸಿದರು. ಆದರೆ, ಈ ಬೃಹತ್ ರನ್ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ 19.1 ಓವರ್ಗಳಲ್ಲಿ ಮುಟ್ಟುವ ಮೂಲಕ ಆರು ವಿಕೆಟ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು.
ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ದಾಳಿ
ಮುಂಬೈ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ ಅವರು ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಅವರು 39 ರನ್ ನೀಡಿ 3 ಪ್ರಮುಖ ವಿಕೆಟ್ಗಳನ್ನು ಕಬಳಿಸಿ ಕೆಕೆಆರ್ ರನ್ ವೇಗಕ್ಕೆ ಕಡಿವಾಣ ಹಾಕಿದರು. ಈ ಮೂಲಕ ಇವರು ಕೂಡ ಮುಂಬೈ ಇಂಡಿಯನ್ಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಉಳಿದಂತೆ ನಾಯಕ ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದರು.
ಕೆಕೆಆರ್ ಪ್ಲೇಯಿಂಗ್ 11: ಫಿನ್ ಅಲೆನ್, ಅಜಿಂಕ್ಯ ರಹಾನೆ (ನಾಯಕ), ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸಿಂಗ್ ಮುಜರಬಾನಿ.
ಮುಂಬೈನ ಪ್ಲೇಯಿಂಗ್ 11: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಶೆರ್ಫಾನೆ ರುದರ್ಫೋರ್ಡ್, ನಮನ್ ಧೀರ್, ಶಾರ್ದೂಲ್ ಠಾಕೂರ್, ಮಯಾಂಕ್ ಮಾರ್ಕಾಂಡೆ, ಅಲ್ಲಾ ಗಜನ್ಫರ್, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.
-
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
Virat Kohli: ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಬಳಿಕ ತನ್ನ ಆಟದ ಯಶಸ್ಸಿನ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಆರ್ಸಿಬಿ-ಎಸ್ಆರ್ಎಚ್ ಆಟಗಾರರಿಂದ ವಿಶೇಷ ಗೌರವ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್ಸಿಬಿ ವಿರುದ್ಧ ಎಸ್ಆರ್ಎಚ್ ಹೀನಾಯು ಸೋಲು -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ












Click it and Unblock the Notifications