IPL 2026 playoff: ಪ್ಲೇ-ಆಫ್‌ಗಾಗಿ 7 ತಂಡಗಳ ಭಾರಿ ಪೈಪೋಟಿ

IPL 2026 Playoffs Scenarios: ಐಪಿಎಲ್ 2026ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತದಲ್ಲಿವೆ. ಈಗಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪ್ಲೆಆಫ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ. ಹಾಗಾದ್ರೆ ಉಳಿದ ತಂಡ ಸ್ಥಿತಿಹಗತಿ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಐಪಿಎಲ್ 2026ರ ಪ್ಲೇ-ಆಫ್ ಹಾದಿಯು ಈಗ ರಂಗೇರಿದೆ. ನಾಕೌಟ್ ಹಂತದ ಉಳಿದ ಮೂರು ಸ್ಥಾನಗಳಿಗಾಗಿ 7 ತಂಡಗಳ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಭಾನುವಾರ (ಮೇ 17) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ನೀಡಿದ್ದ 194 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ಅಂತಿಮ ಓವರ್‌ನಲ್ಲಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ-ಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಜೀವಂತವಾಗಿರಿಸಿಕೊಂಡಿದೆ.

IPL 2026 Playoff Race 7 Teams Battle for Final 3 Spots After Royal Challengers Bengaluru Qualify

ಮೂರು ಸ್ಥಾನಗಳಿಗಾಗಿ 7 ತಂಡಗಳ ಪೈಪೋಟಿ

ಸದ್ಯದ ಅಂಕಪಟ್ಟಿಯ ಪರಿಸ್ಥಿತಿ ನೋಡಿದರೆ ಪ್ರತಿ ಪಂದ್ಯವೂ ಮಾಡು ಇಲ್ಲವೇ ಮಡಿ ಎಂಬಂತಾಗಿದ್ದು, ಮುಂದಿನ ದಿನಗಳಲ್ಲಿ ಪ್ಲೇ-ಆಫ್ ಲೆಕ್ಕಾಚಾರಗಳು ಮತ್ತಷ್ಟು ಕುತೂಹಲ ಕೆರಳಿಸಲಿವೆ. ಡೆಲ್ಲಿ ವಿರುದ್ಧದ ಸೋಲು ರಾಜಸ್ಥಾನ್ ರಾಯಲ್ಸ್ ತಂಡದ ಅರ್ಹತೆಯ ಹಾದಿಗೆ ಅಡ್ಡಿಯಾಗಿದ್ದು, ಇತರ ತಂಡಗಳು ಅವರನ್ನು ಹಿಂದಿಕ್ಕಿ ಮುಂದೆ ಹೋಗುವಂತಹ ಕರಿಣ ಸ್ಥಿತಿಗೆ ತಂದು ನಿಲ್ಲಿಸಿದೆ.

ಸತತ ಸೋಲುಗಳಿಂದಾಗಿ ರಾಜಸ್ಥಾನ್ ರಾಯಲ್ಸ್ ಈಗ ಅಂಕಪಟ್ಟಿಯಲ್ಲಿ ಇತರ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗುವ ಸ್ಥಿತಿಯಲ್ಲಿದೆ. ಈಗಾಗಲೇ ಪ್ಲೇ-ಆಫ್ ಸ್ಥಾನವನ್ನು ಅಧಿಕೃತವಾಗಿ ಭದ್ರಪಡಿಸಿಕೊಂಡ ಮೊದಲ ಮತ್ತು ಏಕೈಕ ತಂಡ ರಾಯಲ್ ಚಾಲೆಂಜರ್ಸ್‌ ಬೆಂಗಳೂರು. ಪ್ಲೇ-ಆಫ್‌ನ ಉಳಿದ ಮೂರು ಸ್ಥಾನಗಳಿಗಾಗಿ ಈಗ ಮಹಾ ಸಂಗ್ರಾಮವೇ ನಡೆಯುತ್ತಿದೆ.

ಐಪಿಎಲ್‌ನ ಕೊನೆಯ ಮೂರು ಸ್ಥಾನಗಳಿಗಾಗಿ ಇನ್ನೂ ಏಳು ತಂಡಗಳು ರೇಸ್‌ನಲ್ಲಿ ಉಳಿದಿವೆ. ಈ ಮಧ್ಯೆ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮಾತ್ರ ಅಧಿಕೃತವಾಗಿ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿವೆ. ಈ ಹೋರಾಟವು ಹಿಂದೆಂದಿಗಿಂತಲೂ ಹೆಚ್ಚು ಕುತೂಹಲ ಕೆಳಿಸಿದೆ.

ಪ್ಲೇ-ಆಫ್‌ ಸ್ಥಾನಕ್ಕಾಗಿ 7 ತಂಡಗಳ ಪೈಪೋಟಿ

* ಗುಜರಾತ್ ಟೈಟಾನ್ಸ್

* ಸನ್‌ರೈಸರ್ಸ್ ಹೈದರಾಬಾದ್

* ಪಂಜಾಬ್ ಕಿಂಗ್ಸ್‌

* ರಾಜಸ್ಥಾನ್ ರಾಯಲ್ಸ್

* ಚೆನ್ನೂ ಸೂಪರ್ ಕಿಂಗ್ಸ್‌

* ಡೆಲ್ಲಿ ಕ್ಯಾಪಿಟಲ್ಸ್

* ಕೊಲ್ಕತ್ತಾ ನೈಟ್‌ ರೈಡರ್ಸ್‌

ಗುಜರಾತ್ ಟೈಟಾನ್ಸ್: ಗುಜರಾತ್ ತಂಡವು ಈಗಾಗಲೇ 13 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 16 ಅಂಕಗಳನ್ನು ಗಳಿಸಿದ್ದು, ಪ್ಲೇ-ಆಫ್‌ನ ಹೊಸ್ತಿಲಲ್ಲಿದೆ. ತನ್ನ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ ನಾಕೌಟ್ ಹಂತಕ್ಕೆ ಅವರ ಪ್ರವೇಶ ಅಧಿಕೃತವಾಗಲಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನವನ್ನೂ ಕೂಡ ಪಡೆದುಕೊಳ್ಳುವ ಅವಕಾಶವೂ ಇದೆ.

ಒಂದು ವೇಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಜಿಟಿ ಸೋತರೆ, ಸಿಎಸ್‌ಕೆ, ಆರ್‌ಆರ್ ಮತ್ತು ಎಸ್‌ಆರ್‌ಎಚ್ ತಂಡಗಳಲ್ಲಿ ಕನಿಷ್ಠ ಒಂದು ತಂಡ 16 ಅಂಕ ಅಥವಾ ಅದಕ್ಕಿಂತ ಕಡಿಮೆ ಅಂಕದಲ್ಲೇ ಉಳಿಯಲಿ ಎಂದು ಪ್ರಾರ್ಥಿಸಬೇಕಾಗುತ್ತದೆ. ಮೇ 18ರಂದೇ ಗುಜರಾತ್ ಟೈಟಾನ್ಸ್ ಪ್ಲೇ-ಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಅವಕಾಶವೂ ಇದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಸಿಎಸ್‌ಕೆ ವಿರುದ್ಧ ಗೆದ್ದರೆ ಜಿಟಿ ತಂಡವು ಯಾವುದೇ ಲೆಕ್ಕಾಚಾರವಿಲ್ಲದೆ ನೇರವಾಗಿ ಪ್ಲೇ-ಆಫ್‌ಗೆ ಅರ್ಹತೆ ಪಡೆಯಲಿದೆ.

ಸನ್‌ರೈಸರ್ಸ್ ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು 12 ಪಂದ್ಯಗಳಲ್ಲಿ 7ರಲ್ಲಿ ಗೆದ್ದು 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಎಸ್‌ಆರ್‌ಎಚ್‌ ತಂಡವು ತನ್ನ ಉಳಿದ ಎರಡು ಲೀಗ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಎದುರಿಸಲಿದೆ. ಈ ಎರಡೂ ಪಂದ್ಯಗಳಲ್ಲಿ ಗೆದ್ದರೆ ತಂಡ ನೇರವಾಗಿ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ.

ಒಂದು ಪಂದ್ಯದಲ್ಲಿ ಗೆದ್ದರೂ ಸಹ ಇತರ ಪಂದ್ಯಗಳ ಫಲಿತಾಂಶಗಳು ಅನುಕೂಲಕರವಾಗಿದ್ದರೆ ಎಸ್‌ಆರ್‌ಎಚ್‌ ಮುಂದಿನ ಹಂತಕ್ಕೇರುವ ಅವಕಾಶ ಹೊಂದಿದೆ. ಆದರೆ ಉಳಿದ ಎರಡೂ ಪಂದ್ಯಗಳಲ್ಲಿ ಸೋತರೆ ಪ್ಲೇ-ಆಫ್ ಹಾದಿ ತುಂಬಾ ಕಠಿಣವಾಗಲಿದೆ. ಇನ್ನೂ ಸಿಎಸ್‌ಕೆ ವಿರುದ್ಧದ ತಮ್ಮ ಮುಂದಿನ ಪಂದ್ಯದಲ್ಲಿ ಗೆದ್ದರೆ ಎಸ್‌ಆರ್‌ಎಚ್‌ ಹಾಗೂ ಗುಜರಾತ್ ಟೈಟಾನ್ಸ್ ಎರಡೂ ತಂಡಗಳು ಅಧಿಕೃತವಾಗಿ ಪ್ಲೇ-ಆಫ್‌ಗೆ ಅರ್ಹತೆ ಪಡೆಯಲಿವೆ.

ಪಂಜಾಬ್ ಕಿಂಗ್ಸ್‌: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಈ ಸೀಸನ್‌ನಲ್ಲಿ ಸತತ ಆರನೇ ಸೋಲನುಭವಿಸಿದೆ. ಪಂಜಾಬ್ ತಂಡವು 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈಗ ಪ್ಲೇ-ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಪಂಜಾಬ್ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳಲ್ಲಿ ಕೇವಲ ಒಂದು ತಂಡ ಮಾತ್ರ 15 ಅಂಕಗಳ ಗಡಿ ದಾಟಬೇಕೆಂಬ ಲೆಕ್ಕಾಚಾರವೂ ಇದೆ. ಏಕೆಂದರೆ ಪಂಜಾಬ್ ಗರಿಷ್ಠವಾಗಿ 15 ಅಂಕಗಳವರೆಗೆ ಮಾತ್ರ ತಲುಪಲು ಸಾಧ್ಯ. ಅಲ್ಲದೆ ಕೆಕೆಆರ್ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಗೆಲ್ಲಬಾರದು ಎಂದು ಪಂಜಾಬ್ ಅಭಿಮಾನಿಗಳು ಬಯಸುತ್ತಿದ್ದಾರೆ. ಒಂದು ವೇಳೆ ಕೆಕೆಆರ್ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದರೆ ಅವರು 15 ಅಂಕಗಳಿಗೆ ತಲುಪಲಿದ್ದಾರೆ. ಆಗ ಪಂಜಾಬ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್‌ರೇಟ್ ಹೊಂದಿರಬೇಕಾದ ಅನಿವಾರ್ಯತೆ ಎದುರಾಗಲಿದೆ.

ರಾಜಸ್ಥಾನ್ ರಾಯಲ್ಸ್: ರಾಜಸ್ಥಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅನುಭವಿಸಿದ ಸೋಲು ಪ್ಲೇ-ಆಫ್ ಆಸೆಗೆ ದೊಡ್ಡ ಹೊಡೆತ ನೀಡಿದೆ. ಸದ್ಯ ತಂಡವು 12 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 12 ಅಂಕಗಳನ್ನು ಪಡೆದುಕೊಂಡಿದೆ. ಈಗ ರಾಜಸ್ಥಾನ್ ರಾಯಲ್ಸ್ ತಂಡವು ತನ್ನ ಉಳಿದಿರುವ ಎರಡು ಪಂದ್ಯಗಳನ್ನು ಗೆದ್ದರೆ ಪ್ಲೇ-ಆಫ್ ಹಂತಕ್ಕೇರಲಿದೆ. ಅದು ಚೆನ್ನೈ ಸೂಪರ್ ಕಿಂಗ್ಸ್ ತನ್ನ ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲದಿದ್ದರೆ ಮಾತ್ರ. ಜೊತೆಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆರ್‌ಸಿಬಿ ವಿರುದ್ಧ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್‌ಗಿಂತ ಉತ್ತಮ ನೆಟ್ ರನ್‌ರೇಟ್ ಹೊಂದಿದ್ದರೆ ಮಾತ್ರ ಆರ್‌ಆರ್‌ಗೆ ಹಿನ್ನಡೆಯಾಗಲಿದೆ.

ಸಿಎಸ್‌ಕೆ: ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ಸೋಲು ಚೆನ್ನೈ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಜೀವದಾನ ನೀಡಿದೆ. ಸದ್ಯ ಸಿಎಸ್‌ಕೆ ತಂಡವು 12 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಉಳಿದಿರುವ ಎರಡು ಪಂದ್ಯಗಳಲ್ಲಿ ಗೆದ್ದರೆ ಬಹುತೇಕ ಪ್ಲೇ-ಆಫ್ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಆದರೆ ಎಸ್‌ಆರ್‌ಎಚ್ ತಂಡವು ಆರ್‌ಸಿಬಿ ವಿರುದ್ಧ ಗೆದ್ದು, ರಾಜಸ್ಥಾನ್ ರಾಯಲ್ಸ್ ತಂಡವೂ ತನ್ನ ಉಳಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದರೆ ನೆಟ್ ರನ್‌ರೇಟ್ ಆಧಾರದ ಮೇಲೆ ಸಿಎಸ್‌ಕೆಯನ್ನು ಹಿಂದಿಕ್ಕುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ಲೇ-ಆಫ್ ಆಸೆ ಇನ್ನೂ ಜೀವಂತವಾಗಿದೆ. ಸದ್ಯ ಡಿಸಿ 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 12 ಅಂಕಗಳನ್ನು ಪಡೆದುಕೊಂಡಿದ್ದು, ಕೊನೆಯ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ. ಪ್ಲೇ-ಆಫ್ ಪ್ರವೇಶಿಸಲು ಈ ಪಂದ್ಯದಲ್ಲಿ ಡೆಲ್ಲಿ ಗೆಲ್ಲಲೇಬೇಕಿದ. ಜೊತೆಗೆ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲಬೇಕೆಂಬ ಲೆಕ್ಕಾಚಾರವೂ ಇದೆ.

ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಮ್ಮ ಉಳಿದೆರಡು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಗೆಲ್ಲಬೇಕು. ಆಗ ಅವುಗಳ ಒಟ್ಟು ಅಂಕಗಳು 14ಕ್ಕೆ ಸೀಮಿತವಾಗಲಿವೆ. ಡಿಸಿ ತಂಡವೂ ಗರಿಷ್ಠವಾಗಿ 14 ಅಂಕಗಳವರೆಗೆ ಮಾತ್ರ ತಲುಪಲು ಸಾಧ್ಯವಾಗುವುದರಿಂದ ನೆಟ್ ರನ್‌ರೇಟ್ ಆಧಾರದ ಮೇಲೆ ಮುಂದಿನ ಹಂತಕ್ಕೇರಲು ಪ್ರಯತ್ನಿಸಬೇಕಾಗುತ್ತದೆ. ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್‌ ತಂಡಗಳು ಉಳಿದೆರಡು ಪಂದ್ಯಗಳಲ್ಲಿ ಸೋತರೆ, ಜೊತೆಗೆ ಪಂಜಾಬ್ ಕಿಂಗ್ಸ್ ತಂಡವೂ ಎಲ್‌ಎಸ್‌ಜಿ ವಿರುದ್ಧ ಸೋತರೆ ಡೆಲ್ಲಿ ತಂಡವು ನೆಟ್ ರನ್‌ರೇಟ್ ಅವಶ್ಯಕತೆಯಿಲ್ಲದೆ ನೇರವಾಗಿ ಪ್ಲೇ-ಆಫ್ ಪ್ರವೇಶಿಸಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸದ್ಯ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದು, ಪ್ಲೇ-ಆಫ್ ಹಂತ ಪ್ರವೇಶಿಸುವ ಅವಕಶಾ ಕಡಿಮೆಯಿದೆ. ಕೆಕೆಆರ್ ತಂಡವು 12 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 11 ಅಂಕಗಳನ್ನು ಪಡೆದುಕೊಂಡಿದ್ದು, ಇನ್ನೂ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯಗಳನ್ನು ಆಡಬೇಕಿದೆ. ಪ್ಲೇ-ಆಫ್ ಅವಕಾಶವನ್ನು ಜೀವಂತವಾಗಿರಿಸಿಕೊಳ್ಳಲು ಈ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ. ಜೊತೆಗೆ ಸಿಎಸ್‌ಕೆ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಮ್ಮ ಉಳಿದ ಎರಡು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲ್ಲಬೇಕು ಎಂಬ ಲೆಕ್ಕಾಚಾರವೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+