RCB: ಆರ್‌ಸಿಬಿ ಸ್ಟಾರ್ ಬೌಲರ್ ಐಪಿಎಲ್‌ನಿಂದ ಬ್ಯಾನ್ ಸಾಧ್ಯತೆ..
RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 2026ರ ಸೀಸನ್‌ನತ್ತ ನೆಟ್ಟಿದ್ದು, ಮಿನಿ ಹರಾಜಿಗೂ ಮುನ್ನ ಬೆಂಗಳೂರು ರಿಟೈನ್ ಆಟಗಾರರ ಪಟ್ಟಿಯನ್ನು ಇತ್ತೀಗಷ್ಟೇ ಪ್ರಕಟ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಈ ಲೀಸ್ಟ್‌ನಲ್ಲಿರುವ ಮಾರಕ ಬೌಲರ್ ಬ್ಯಾನ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾದ್ರೆ, ಯಾರು ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಟ್ರೋಫಿ ಗೆದ್ದಾಗಿನಿಂದಲೂ ಆರ್‌ಸಿಬಿಗೆ ಒಂದಲ್ಲ ಒಂದು ಆಘಾತಗಳು ಎದುರಾಗುತ್ತಲಿದೆ. ಮೊದಲಿಗೆ ಕಾಲ್ತುಳಿತ ಪ್ರಕರಣ ಆರ್‌ಸಿಬಿ ಪಾಲಿಗೆ ಕಪ್ಪು ಚುಕ್ಕೆಯಾಗಿ ಉಳಿದುಬಿಟ್ಟಿತು. ಈ ಸಂಬಂಧ ಕೆಎಸ್‌ಸಿಎ, ಪ್ರಾಂಚೈಸಿ ಹಾಗೂ ಆರ್‌ಸಿಬಿಯ ಮಾರ್ಕೆಟಿಂಗ್ ಹೆಡ್ ವಿರುದ್ಧ ಎಫ್‌ಐಆರ್ ದಾಖಲಾಯಿತು. ಅಷ್ಟೇ ಸಾಲದೆಂಬಂತೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಯಿತು. ಇದೀಗ ಇವೆಲ್ಲದರಿಂದ ಹೊರಬಂದಿರುವ ತಂಡಕ್ಕೆ ಹೊಸ ಚಿಂತೆಯೊಂದು ಎದುರಾಗಿದೆ.

ಇತ್ತೀಚೆಗಷ್ಟೇ ಆರ್‌ಸಿಬಿ ರಿಟೈನ್ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಉಳಿಸಿಕೊಂಡ 17 ಮಂದಿಯಲ್ಲಿ ಮಾರಕ ಬೌಲರ್ ಯಶ್ ದಯಾಳ್ ಕೂಡ ಒಬ್ಬರಿದ್ದು, ಇವರು ಟೀಂನಿಂದ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಇವರ ವಿರುದ್ಧ ಲೈಕಿಂಗ ಕಿರುಕುಳ ಆರೋಪದ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಆದರೂ ಆರ್‌ಸಿಬಿ ಮಾತ್ರ ಇವರನ್ನು ಮತ್ತೆ ತಂಡದೊಳಗೆ ಸೇರಿಸಿಕೊಂಡಿದೆ ಎನ್ನುವ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆ ಅವರು ಮುಂದಿನ ಸೀಸನ್‌ನಲ್ಲಿ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಟ್ರೋಫಿ ಗೆಲುವಿಗೆ ಪ್ರಮುಖ ಕಾರಣಕರ್ತರಾಗಿರುವ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆ ಅವರು ಮುಂದಿನ ಸೀಸನ್‌ಗೆ ರಿಟೈನ್ ಆಗಿದ್ದರೂ ಅವರು ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಲಾಗುತ್ತಿದೆ.
ಟ್ರೋಫಿ ಗೆದ್ದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತಗಳ ಸರಮಾಲೆಯೇ ಎದುರಾಗುತ್ತಿವೆ. ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ವೇಳೆ ಆರ್‌ಸಿಬಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಳಿಕ ತುಂಬಾ ಬೆಳವಣಿಗಳು ಆದ್ವು. ಈಗಲೂ ಆಗುತ್ತಲಿವೆ.
"ವೃತ್ತಿಜೀವನದ ಭರವಸೆ ನೀಡಿ ಬ್ಲ್ಯಾಕ್‌ಮೇಲ್ ಮಾಡಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ," ಎಂದು 17 ವರ್ಷದ ಸಂತ್ರಸ್ತೆಯೊಬ್ಬರು ಆರೋಪ ಮಾಡಿದ್ದರು. ಈ ದೂರಿನ ಮೇರೆಗೆ ಜೈಪುರದಲ್ಲಿ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿ ಆಗಿದೆ. ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ವಿಶೇಷ ಸಂದೇಶದ ಮೂಲಕ ಆರ್ಥಿಕ ನೆರವು ಘೋಷಣೆ ಮಾಡಿತ್ತು. ಈ ನಡೆಗೆ ಬಹುತೇಕ ಕರುನಾಡ ಮಂದಿ ಮೆಚ್ಚುಗೆ ವ್ಯಕ್ತಪಡಿಸಿತ್ತು. ಆದರೆ, ರಿಟೈನ್ ಪಟ್ಟಿಯಲ್ಲಿ ಅತ್ಯಾಚಾರ ಆರೋಪದಡಿಯಲ್ಲಿ ಎಫ್‌ಐಆರ್ ಹಾಕಿಸಿಕೊಂಡಿರುವ ಯಶ್ ದಯಾಳ್ ಇರುವುದಕ್ಕೆ ಅಸಮಾಧಾನಗಳು ವ್ಯಕ್ತವಾಗುತ್ತಿದೆ.
ಇನ್ನೂ ಬೇರೆ ತಂಡಗಳಿಗೆ ಹೋಲಿಕೆ ಮಾಡಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ರಿಟೈನ್ ಪಟ್ಟಿ ಪ್ರಕಟ ವೇಳೆ ಅಷ್ಟೊಂದು ಬದಲಾವಣೆಗಳಾಗಿಲ್ಲ. ಬಹುತೇಕ ಅದೇ ಆಟಗಾರರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿದ, ಬದಲಿ ಆಟಗಾರರು ಹಾಗೂ ಒಂದು ಪಂದ್ಯದಲ್ಲೂ ಆಡಿರದ ಕೆಲವೇ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.
ಉಳಿದಂತೆ ಮಿಕ್ಕಿದ ಎಲ್ಲಾ ಆಟಗಾರರನ್ನು ಉಳಿಸಿಕೊಂಡಿ. ಒಟ್ಟು 17 ಮಂದಿ ಆಟಗಾರರನ್ನು ಉಳಿಸಿಕೊಂಡಿದೆ. ಇದೀಗ ಸದ್ಯ ಆರ್‌ಸಿಬಿ 16.4 ಕೋಟಿ ರೂಪಾಯಿ ಉಳಿಸಿಕೊಂಡಿದೆ. ಆರ್‌ಸಿಬಿಯು ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ (ವಿ.ಕೀ), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ಜೋಶ್ ಹೇಝಲ್‌ವುಡ್, ಯಶ್ ದಯಾಳ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮ, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ರಸಿಖ್ ದಾರ್ ಸಲಾಮ್, ಅಭಿನಂದನ್ ಸಿಂಗ್ ಅವರನ್ನ ಉಳಿಸಿಕೊಂಡಿದೆ.
ಆರ್‌ಸಿಬಿ ಕೈಬಿಟ್ಟ ಆಟಗಾರರು: ಉಳಿದಂತೆ ಲಿಯಾಮ್ ಲಿವಿಂಗ್ಸ್ಟೋನ್, ಮಯಾಂಕ್ ಅಗರ್ವಾಲ್, ಬ್ಲೆಸಿಂಗ್ ಮುಝರಬಾನಿ, ಟಿಮ್ ಸಿಫರ್ಟ್, ಮೋಹಿತ್, ರಾಥಿ, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ಲುಂಗಿ ಎನ್ಗಿಡಿ ಅವರನ್ನು ಕೈಬಿಟ್ಟಿದೆ.












Click it and Unblock the Notifications