IPL 2026: ಆರ್‌ಸಿಬಿ-ಎಸ್‌ಆರ್‌ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?
IPL 2026 RCB Vs SRH: ಐಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಕಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಹಾಗಾದ್ರೆ, ಮಾರ್ಚ್ 28ರಂದು ಬೆಂಗಳೂರಿನಲ್ಲಿ ವಾತಾವರಣ ಹೇಗಿರಲಿದೆ? ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 28ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸುವ ಮೂಲಕ ತಮ್ಮ ಅಭಿಯಾನವನ್ನು ಆರಂಭಿಸಲಿದೆ. ಕಳೆದ ವರ್ಷದ ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ, 18 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

ಸುದೀರ್ಘ ತಿಂಗಳುಗಳ ಬಳಿಕ ಚಿನ್ನಸ್ವಾಮಿಯಲ್ಲಿ ಪಂದ್ಯ
ಇದೀಗ ಇಂದಿನ ಪಂದ್ಯವು ಬೆಂಗಳೂರಿನ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಜೂನ್ 2025ರಲ್ಲಿ ನಡೆದ ಕಾಲ್ತುಳಿತದ ದುರಂತದಲ್ಲಿ 11 ಮಂದು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಈ ದುರಂತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿರಲಿಲ್ಲ. ಇದೀಗ ಸುಮಾರು 9 ತಿಂಗಳ ನಂತರ ಈ ಐತಿಹಾಸಿಕ ಮೈದಾನಕ್ಕೆ ಕ್ರಿಕೆಟ್ ಮರಳುತ್ತಿದೆ.
ಬೆಂಗಳೂರಿನ ವಾತಾವರಣದ ಬಗ್ಗೆ ಹವಾಮಾನ ಇಲಾಖೆ ಹೇಳೋದೇನು?
ಹವಾಮಾನ ಇಲಾಖೆ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಐಪಿಎಲ್ 2026ರ ಉದ್ಘಾಟನಾ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕೇವಲ 6% ಮಾತ್ರ ಇದೆ. ಗರಿಷ್ಠ ತಾಪಮಾನ 32 ಡಿಗ್ರಿ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ಅಂದರೆ, ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ತೀರಾ ಕಡಿಮೆ. ಬೆಂಗಳೂರಿನ ಹವಾಮಾನವು ಸಾಮಾನ್ಯವಾಗಿ ಅನಿರೀಕ್ಷಿತವಾಗಿದ್ದರೂ, ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಮಳೆಯಿಂದ ಯಾವುದೇ ತೊಂದರೆಯಾಗುವ ಲಕ್ಷಣಗಳಿಲ್ಲ. ಆದ್ದರಿಂದ ಕ್ರಿಕೆಟ್ ಅಭಿಮಾನಿಗಳು ಈ ರೋಚಕ ಪಂದ್ಯವನ್ನು ಸವಿಯಬಹುದಾಗಿದೆ.
ಬೆಂಗಳೂರು ವಾತಾವರಣದ ಮುಖ್ಯಾಂಶಗಳು
* ಮಳೆಯ ಸಾಧ್ಯತೆ: 6% (ತೀರಾ ಕಡಿಮೆ)
* ಗರಿಷ್ಠ ತಾಪಮಾನ: 32°C
* ಕನಿಷ್ಠ ತಾಪಮಾನ: 20°C
* ಬೆಂಗಳೂರಿನ ಮಳೆಯ ಪ್ರಭಾವ ತೀರಾ ಕಡಿಮೆಯಿರುವುದರಿಂದ, ಯಾವುದೇ ಅಡ್ಡಿಯಿಲ್ಲದೆ ಪೂರ್ಣ ಪಂದ್ಯ ನಡೆಯುವ ನಿರೀಕ್ಷೆಯಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ತಂಡ
ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಜಿತೇಶ್ ಶರ್ಮಾ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಸುಯೇಶ್ ಶರ್ಮಾ, ಅಭಿನಂದನ್ ಸಿಂಗ್, ಜಾಕೋಬ್ ಬೆಥೆಲ್, ನುವಾನ್ ತುಷಾರ, ರಸಿಕ್ ದಾರ್, ಸ್ವಪ್ನಿಲ್ ಸಿಂಗ್, ವೆಂಕಟೇಶ್ ಅಯ್ಯರ್, ಜೇಕಬ್ ಡಫಿ, ಸಾತ್ವಿಕ್ ದೇಶ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕ್ಕಿ ಒಟ್ಸ್‌ವಾಲ್, ವಿಹಾನ್ ಮಲ್ಹೋತ್ರಾ, ಕನಿಷ್ಕ್ ಚೌಹಾಣ್
ಸನ್ ರೈಸರ್ಸ್ ಹೈದರಾಬಾದ್ ಸಂಪೂರ್ಣ ತಂಡ
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ರವಿಚಂದ್ರನ್ ಸ್ಮರಣ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್, ಪ್ಯಾಟ್ ಕಮ್ಮಿನ್ಸ್, ಜಯದೇವ್ ಉನಾದ್ಕಟ್, ಇಶಾನ್ ಮಾಲಿಂಗ, ಜೀಶನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರಾ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೇ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೈನ್ಸ್ ಫುಲೆತ್ರಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಿವಂ ಮಾವಿ, ಜಾಕ್ ಎಡ್ವರ್ಡ್ಸ್.












Click it and Unblock the Notifications