RCB Vs SHR: ಚಿನ್ನಸ್ವಾಮಿಯಲ್ಲಿ ಎಸ್‌ಆರ್‌ಎಚ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ

IPL 2026 RCB Vs SHR: ಐಪಿಎಲ್ 2026ರ ಮೊದಲ ಪಂದ್ಯಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಇಂದಿನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಕಳೆದ ಬಾರಿ ಚಾಂಪಿಯನ್ ಆಗಿರುವ ಆರ್‌ಸಿಬಿ, ಈ ಬಾರಿ ಕೂಡ ಗೆಲುವಿನೊಂದಿಗೆ ಶುಭಾರಂಭ ಮಾಡಲು ಸನ್ನದ್ಧವಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸಣ್ಣ ಬೌಂಡರಿಗಳು ಮತ್ತು ಎಸ್‌ಆರ್‌ಎಚ್ ಬ್ಯಾಟರ್‌ಗಳ ಲಾಂಗ್ ಸಿಕ್ಸರ್ ಸಿಡಿಸುವ ಸಾಮರ್ಥ್ಯವನ್ನು ಗಮನಿಸಿದರೆ, ಇಂದು ರನ್‌ಗಳ ಮಳೆ ಹರಿಯುವುದು ಖಚಿತ ಎನಿಸುತ್ತಿದೆ. ಅದರಲ್ಲೂ ಪ್ರಮುಖ ವೇಗಿಗಳಾದ ಪ್ಯಾಟ್ ಕಮಿನ್ಸ್ (ಎಸ್‌ಆರ್‌ಎಚ್‌) ಮತ್ತು ಜೋಶ್ ಹ್ಯಾಜಲ್‌ವುಡ್ (ಆರ್‌ಸಿಬಿ) ಅಲಭ್ಯತೆ ಬೌಲಿಂಗ್ ವಿಭಾಗಕ್ಕೆ ಸವಾಲಾಗಿ ಪರಿಣಮಿಸಿದೆ.

IPL 2026 Royal Challengers Bengaluru Opt to Bowl First Against SRH at Bengaluru s M Chinnaswamy

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯೇಶ್ ಶರ್ಮಾ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ ಮತ್ತು ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲಿಲ್ ಅರೋರಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಈಶಾನ್ ಮಾಲಿಂಗ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+