ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ಬೌಲರ್‌ಗಳಿಗೆ ಬೆವರಿಳಿಸಿದ ಆರ್‌ಸಿಬಿ ಫಿಲ್ ಸಾಲ್ಟ್
RCB Vs MI IPL 2026: ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 11) ನಡೆಯುತ್ತಿರುವ ಐಪಿಎಲ್ 2026ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿದರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಈ ಬೃಹತ್ ಮೊತ್ತ ಕಲೆಹಾಕಲು ಫಿಲ್ ಸಾಲ್ಟ್ ಸಿಡಿಸಿದ 78 ರನ್‌ಗಳೇ ಪ್ರಮುಖ ಕಾರಣ.

78 ರನ್ ಸಿಡಿಸಿದ ಫಿಲ್ ಸಾಲ್ಟ್
ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಆರ್‌ಸಿಬಿಗೆ ಭರ್ಜರಿ ಆರಂಭ ನೀಡಿದರು. ಈ ಜೋಡಿ ಕೇವಲ 10.5 ಓವರ್‌ಗಳಲ್ಲಿ 120 ರನ್‌ಗಳ ಜೊತೆಯಾಟವಾಡಿತು. ಫಿಲ್ ಸಾಲ್ಟ್ ಕೇವಲ 36 ಎಸೆತಗಳಲ್ಲಿ 78 ರನ್ ಚಚ್ಚಿದರೆ, ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 50 ರನ್ ಗಳಿಸಿ ಮಿಂಚಿದರು.
ನಂತರ ಬಂದ ನಾಯಕ ರಜತ್ ಪಾಟೀದಾರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಅವರು ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿದರು. ಕೊನೆಯಲ್ಲಿ ಟಿಮ್ ಡೇವಿಡ್ 16 ಎಸೆತಗಳಲ್ಲಿ ಅಜೇಯ 34 ರನ್ ಗಳಿಸುವ ಮೂಲಕ ಆರ್‌ಸಿಬಿ ತಂಡವು 200ರ ಗಡಿ ದಾಟಿ 240 ರನ್‌ಗಳನ್ನು ಕಲೆಹಾಕಲು ನೆರವಾದರು.












Click it and Unblock the Notifications