ವಾಂಖೆಡೆಯಲ್ಲಿ ಆರ್‌ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ
RCB Vs MI Match Weather Report: ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 12) ಸಂಜೆ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಮುನ್ಸೂಚನೆ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಾಂಖೆಡೆ ಕ್ರೀಡಾಂಗಣದಲ್ಲಿಂದು ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 27 ರನ್‌ಗಳಿಂದ ಸೋಲನುಭವಿಸಿತು. ಮತ್ತೊಂದೆಡೆ, ಶುಕ್ರವಾರ ನಡೆದ ಇದೇ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿತು. ಸೋಲಿನ ನಂತರ ಗೆಲುವಿನ ಹಳಿಗೆ ಮರಳಲು ಎರಡೂ ತಂಡಗಳಿಗೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ.

ಗೆಲುವಿನ ವಿಶ್ವಾಸದಲ್ಲಿ ಆರ್‌ಸಿಬಿ
ವಾಂಖೆಡೆ ಕ್ರೀಡಾಂಗಣದ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಇದರ ಸಂಪೂರ್ಣ ಲಾಭ ಪಡೆಯಲು ಬೇಕಾದ ಸ್ಫೋಟಕ ಬ್ಯಾಟಿಂಗ್ ಶಕ್ತಿ ತಮ್ಮಲ್ಲಿದೆ ಎನ್ನುವು ವಿಶ್ವಾದಲ್ಲಿ ಆರ್‌ಸಿಬಿ ಇದೆ. ಇನ್ನೂ ಈ ಋತುವಿನಲ್ಲಿ ಇಲ್ಲಿ ನಡೆದ ಏಕೈಕ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ನೀಡಿದ್ದ 221 ರನ್‌ಗಳ ಬೃಹತ್ ಗುರಿಯನ್ನು ಕೇವಲ 19.1 ಓವರ್‌ಗಳಲ್ಲಿ ಬೆನ್ನಟ್ಟಿ ಜಯ ಸಾಧಿಸಿತ್ತು.
ವಾಂಖೆಡೆ ಪಿಚ್ ರಿಪೋರ್ಟ್
ಮೈದಾನದ ಬೌಂಡರಿಗಳು ಚಿಕ್ಕದಾಗಿರುವುದರಿಂದ ಬ್ಯಾಟರ್‌ಗಳು ಸಿಕ್ಸರ್‌ಗಳ ಸುರಿಮಳೆ ಸುರಿಸುವುದು ಗ್ಯಾರಂಟಿ. ಮತ್ತೊಂದೆಡೆ, ಇಬ್ಬನಿಯ ಕಾರಣ ಬೌಲರ್‌ಗಳಿಗೆ ಚೆಂಡಿನ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಗಬಹುದು. ಆದ್ದರಿಂದ ಚೇಸಿಂಗ್ ಮಾಡುವ ತಂಡದ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವಾಗುವ ಸಾಧ್ಯತೆಯಿದೆ. ಆದ್ದರಿಂದ, ಇಲ್ಲಿ ಟಾಸ್ ಗೆದ್ದ ತಂಡಗಳು ಸಾಮಾನ್ಯವಾಗಿ ಬೌಲಿಂಗ್ ಆಯ್ಕೆ ಮಾಡಿಕೊಂಡು, ಗುರಿಯನ್ನು ಬೆನ್ನಟ್ಟಲು ಬಯಸುತ್ತವೆ.
ಆರ್‌ಸಿಬಿ vs ಎಂಐ ಮುಖಾಮುಖಿ ದಾಖಲೆ ವಿವರ
* ಒಟ್ಟು ಆಡಿದ ಪಂದ್ಯಗಳು: 34
* ಮುಂಬೈ ಇಂಡಿಯನ್ಸ್: 19 ಗೆಲುವು
* ರಾಯಲ್ ಚಾಲೆಂಜರ್ಸ್ ಬೆಂಗಳೂರು: 15 ಗೆಲುವು
ಮುಂಬೈ ಹವಾಮಾನ ವರದಿ
ಪಂದ್ಯದ ಸಮಯದಲ್ಲಿ ಯವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬಿಸಿಗಾಳಿ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ಪಂದ್ಯಕ್ಕೆ ಮಳೆಯ ಅಡ್ಡಿ ಉಂಟಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಪಂದ್ಯದ ಆರಂಭದಲ್ಲಿ ತಾಪಮಾನವು ಸುಮಾರು 33°C ನಷ್ಟಿರಲಿದ್ದು, ಸಂಜೆಯಾಗುತ್ತಿದ್ದಂತೆ 30°Cಗೆ ಇಳಿಕೆಯಾಗುವ ನಿರೀಕ್ಷೆಯಿದೆ.
ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಎ. ಎಮ್. ಘಜನ್ಫರ್, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್ ಮತ್ತು ಜೋಶ್ ಹ್ಯಾಜಲ್‌ವುಡ್.












Click it and Unblock the Notifications