IPL 2026 Schedule: ಮಿನಿ ಹರಾಜಿಗೂ ಮುನ್ನ ಐಪಿಎಲ್ 2026 ಟೂರ್ನಿ ವೇಳಾಪಟ್ಟಿ ಪ್ರಕಟ
IPL 2026 Schedule Announcement: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 2026ರ ಆವೃತ್ತಿಯತ್ತ ನೆಟ್ಟಿದೆ. ಮಿನಿ ಹರಾಜಿಗೂ ಮುನ್ನ ಟೂರ್ನಿ ಯಾವಾಗ ಆರಂಭ ಆಗಲಿದೆ ಎನ್ನುವ ಮಾಹಿತಿ ರಿವೀಲ್ ಆಗಿದೆ. ಹಾಗಾದ್ರೆ ಎಲ್ಲಿಂದ ಎಲ್ಲಿಯವರೆಗೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಪಿಎಲ್ 2026 ಟೂರ್ನಿ ಯಾವಾಗ ಆರಂಭ ಆಗಲಿದೆ ಎನ್ನುವ ಕುತೂಹಲ ಬಹುತೇಕ ಮಂದಿಯ ತಲೆಯಲ್ಲಿತ್ತು. ಇದೀಗ ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದ್ದು, ಯಾವಾಗಿನಿಂದ ಹಾಗೂ ಎಲ್ಲಿಯವರೆಗೆ ನಡೆಯಲಿದೆ ಎನ್ನುವ ಮಾಹಿತಿ ರಿವೀಲ್ ಆಗಿದೆ. ಇದಕ್ಕಾಗಿಯೇ ಕ್ರೀಡಾಭಿಮಾನಿಗಳು ಕಾದು ಕುಳಿತಿದ್ದರು.

ಐಪಿಎಲ್ 19ನೇ ಆವೃತ್ತಿಯು ಮುಂಬರುವ ಮಾರ್ಚ್ 26, 2026ರಿಂದ ಆರಂಭ ಆಗಲಿದ್ದು, ಮೇ 31ರವರೆಗೆ ನಡೆಯಲಿದೆ. ಐಪಿಎಲ್ ಮಿನಿ ಹರಾಜಿಗೂ ಮುನ್ನ ನಡೆದ ಐಪಿಎಲ್ ಫ್ರಾಂಚೈಸಿಸ್ ಮತ್ತು ಅಥಾರಿಟೀಸ್‌ಗಳ ನಡುವೆ ಡಿಸೆಂಬರ್ 15ರ ಬುಧವಾರ ಸಭೆ ನಡೆಯಿತು. ಈ ವೇಳೆ ಬಿಸಿಸಿಐ ದಿನಾಂಕವನ್ನು ರಿವೀಲ್ ಮಾಡಿದೆ.
ಆದರೆ, ಐಪಿಎಲ್‌ನ ಉದ್ಘಾಟನಾ ಪಂದ್ಯವು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತದೆಯೋ ಅಥವಾ ಬೇರೆ ಕಡೆ ನಡೆಸುತ್ತಾರೆಯೋ ಎನ್ನುವ ಗೊಂದಲ ಕ್ರೀಡಾಭಿಮಾನಿಗಳಲ್ಲಿ ಉಂಟಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವವರೆಗೂ ಕಾಯಬೇಕಿದೆ ಅಷ್ಟೇ.
ಇನ್ನೂ ಐಪಿಎಲ್ ಸಿಇಒ ಹೇಮಂಗ್ ಅಮಿನ್, 19ನೇ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಎಲ್ಲಾ ಫ್ರಾಂಚೈಸಿಗಳಿಗೆ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ ಐಪಿಎಲ್‌ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ತಂಡವು ತನ್ನ ತವರಿನಲ್ಲಿ ಕಣಕ್ಕಿಳಿಯಲಿದೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈಗಾಗಲೇ ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಪಂದ್ಯ ನಡೆಸಲು ಒಪ್ಪಿಗೆ ಸೂಚಿಸಿದೆ. ಆದರೆ, ಕೆಎಸ್‌ಸಿಎಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಈ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೇ ಕಾರಣದಿಂದ ಆಗಿನಿಂದಲೂ ಇಲ್ಲಿಯವರೆಗೂ ಇಲ್ಲಿ ಯಾವುದೇ ಪಂದ್ಯಗಳಿಗೆ ಅವಕಾಶ ನೀಡಿಲ್ಲ. ಇದೀಗ ಇಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಏನೋ ಒಪ್ಪಿಗೆ ಸೂಚಿಸಿದೆ. ಆದರೆ, ಕೆಎಸ್‌ಸಿಎ ಕಡೆಯಿಂದಲೂ ಈ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ.
ಫೈನಲ್ ಪಂದ್ಯ ಜೂನ್ 3ರಂದು ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ವೇಳೆ ಪಂಜಾಬ್ ಕಿಂಗ್ಸ್ ಮಣಿಸಿದ ಆರ್‌ಸಿಬಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಆದರೆ ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಕಾರ್ಯಕ್ರಮ ಇಟ್ಟುಕೊಂಡ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಸಂಭವಿಸಿತ್ತು.












Click it and Unblock the Notifications