IPL: ಐಪಿಎಲ್ ಮಾಲೀಕರ ಸಭೆಯಲ್ಲಿ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ವಾಗ್ವಾದ!

ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆದ ಐಪಿಎಲ್ ಮಾಲೀಕರ ಸಭೆಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಓನರ್ ಶಾರುಖ್ ಖಾನ್ ಮತ್ತು ಪಂಜಾಬ್ ಕಿಂಗ್ಸ್ ಸಹ- ಮಾಲೀಕ ನೆಸ್ ವಾಡಿಯಾ ನಡುವೆ ವಾಗ್ವಾದ ನಡೆದಿದೆ.

ಸಭೆಯಲ್ಲಿ ಪ್ರಮುಖ ವಿವಾದವೆಂದರೆ ರಿಟೈನ್ ನಡೆಸಬೇಕೇ ಅಥವಾ ಬೇಡವೇ ಎಂಬುದು. ಕೊಲ್ಕತ್ತಾ ನೈಟ್ ರೈಡರ್ಸ್ ಪ್ರಾಂಚೈಸಿಯು ಹೆಚ್ಚಿನ ಆಟಗಾರರ ರಿಟೈನ್‌ಗಾಗಿ ಬೇಡಿಕೆಯಿಟ್ಟಿದ್ದು, ಈ ವೇಳೆ ಪಂಜಾಬ್ ಕಿಂಗ್ಸ್ ಪ್ರಾಂಚೈಸಿ ಕಡೆಯಿಂದ ಆಕ್ಷೇಪ ವ್ಯಕ್ತವಾಗಿದೆ. ಇದರಿಂದ ಓನರ್ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ವಾಗ್ವಾದ ನಡೆದಿದೆ.

IPL Argument between Shahrukh Khan and Ness Wadia in IPL owners meeting

ಐಪಿಎಲ್ 2025 ರ ಮೊದಲು ಜುಲೈ 31 ರಂದು 10 ಐಪಿಎಲ್ ಫ್ರಾಂಚೈಸಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಆಟಗಾರರನ್ನು ಉಳಿಸಿಕೊಳ್ಳುವುದು ಮತ್ತು ಪರಿಣಾಮ ಬೀರುವ ನಿಯಮಗಳನ್ನು ಚರ್ಚಿಸಲಾಗಿದೆ. ರೈಟ್ ಟು ಮ್ಯಾಚ್ ಕಾರ್ಡ್ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಿತು. 2025ರ ರಿಟೈನ್ ಸಂಬಂಧಿಸಿದಂತೆ ಬಿಸಿಸಿಐ ಎಲ್ಲಾ ಐಪಿಎಲ್ ಫ್ರಾಂಚೈಸಿಗಳಿಂದ ಸಲಹೆಗಳನ್ನು ಕೇಳಿತ್ತು.

ಮೆಗಾ ಹರಾಜಿಗೂ ಮುನ್ನ ಹೆಚ್ಚಿನ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಈ ಹಿಂದೆಯೇ ಕೆಕೆಆರ್ ಫ್ರಾಂಚೈಸಿ ಬಿಸಿಸಿಐಗೆ ಮನವಿ ಮಾಡಿತ್ತು. ಇದಕ್ಕೆ ಮುಂಬೈ ಇಂಡಿಯನ್ನ್, ಚೆನ್ನೈ ಸೂಪರ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳು ಬೆಂಬಲ ವ್ಯಕ್ತಪಡಿಸಿದೆ.

IPL Argument between Shahrukh Khan and Ness Wadia in IPL owners meeting

ಆದರೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಕೆಲ ಫ್ರಾಚೈಸಿಗಳು ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬಾರದೆಂಬ ವಾದವನ್ನು ಮುಂಡಿಟ್ಟಿದ್ದಾರೆ. ಈ ವೇಳೆ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ಏರುಧ್ವನಿಯಲ್ಲಿ ವಾದ ನಡೆದಿದ್ದು ಕಂಡು ಬಂದಿದೆ. ಈ ಸಭೆಯ ನಂತರ ಬಿಸಿಸಿಐ ಯಾವ ತೀರ್ಮಾನಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಶಾರುಖ್ ಖಾನ್‌ಗೆ ಕಣ್ಣಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಶಿಫ್ಟ್‌

ಬಾಲಿವುಡ್ ಕಿಂಗ್ ಶಾರುಖ್‌ಖಾನ್ ಅವರಿಗೆ ಕಣ್ಣಿನ ಸಮಸ್ಯೆ ಇರುವುದು ಗೊತ್ತೇ ಇದೆ. ಇದಕ್ಕಾಗಿ ಅವರು ಈಗ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗುತ್ತಿದ್ದಾರೆ. ಈ ವಿಚಾರ ಕೇಳುತ್ತಿದ್ದಂತೆ ಅಭಿಮಾನಿಗಳು ಗಾಬರಿಗೊಂಡಿದ್ದಾರೆ.

ಬಾಲಿವುಡ್ ಮೂಲಗಳಿಂದ ಬಂಧಿರುವ ಮಾಹಿತಿ ಪ್ರಕಾರ ಸೋಮವಾರ ಶಾರುಖ್ ಖಾನ್ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆಲ್ಲಿಯೇ ಕಣ್ಣಿನ ಚಿಕಿತ್ಸೆಗೆ ಒಳಗಾಗಲು ಬಯಸಿದ್ದರು. ಆದರೆ ಅಂದುಕೊಂಡಂತೆ ಆಗಲಿಲ್ಲ. ಆಗಿರುವ ಹಾನಿ ಸರಿಪಡಿಸಲು ತುರ್ತಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+