IPL Auction 2024: ಬರೋಬ್ಬರಿ ₹24.75 ಕೋಟಿಗೆ ಹರಾಜಾದ ಮಿಚೆಲ್ ಸ್ಟಾರ್ಕ್: ಆರ್‌ಸಿಬಿಗೆ ಬಂದ ವೆಸ್ಟ್ ಇಂಡೀಸ್ ವೇಗಿ

ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ಆಟಗಾರರ ಅದೃಷ್ಟದ ಬಾಗಿಲು ತೆಗೆದಿದೆ. ಏಕದಿನ ವಿಶ್ವಕಪ್ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಬರೋಬ್ಬರಿ 20.5 ಕೋಟಿ ರೂಪಾಯಿ ತಂಡಕ್ಕೆ ಸೇರಿಸಿಕೊಳ್ಳುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿತ್ತು.

ಪಾಟ್ ಕಮ್ಮಿನ್ಸ್ ಐಪಿಎಲ್‌ ಹರಾಜಿನಲ್ಲಿ 20 ಕೋಟಿ ರೂಪಾಯಿಗಿಂತ ಅಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎನಿಸಿಕೊಂಡರು. ಅದಾದ ಕೆಲವೇ ಕ್ಷಣಗಳಲ್ಲಿ ಆ ದಾಖಲೆಯನ್ನು ಆಸ್ಟ್ರೇಲಿಯಾದ ಮತ್ತೊಬ್ಬ ಆಟಗಾರ ಮುರಿದಿದ್ದು, ಹೊಸ ದಾಖಲೆ ಬರೆದಿದ್ದಾರೆ.

 IPL Auction 2024: KKR Makes History, Bids Rs 24.75 Cr for Mitchell Starc, IPLs Costliest Player Ever!

ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂಪಾಯಿ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅವರನ್ನು ಖರೀದಿಸಿದೆ. ಈ ಮೂಲಕ ಆಸ್ಟ್ರೇಲಿಯಾ ವೇಗಿ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡರು.

ಕೆಕೆಆರ್ ಮತ್ತು ಜಿಟಿ ನಡುವೆ ಪೈಪೋಟಿ

ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿ ಮಾಡಲು ಗುಜರಾತ್ ಜೈಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತೀವ್ರ ಪೈಪೋಟಿ ನಡೆಸಿದವು. 2 ಕೋಟಿ ರೂಪಾಯಿ ಮೂಲ ಬೆಲೆ ಹೊಂದಿರುವ ಸ್ಟಾರ್ಕ್ ಅವರನ್ನು ಖರೀದಿ ಮಾಡಲು ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಆಸಕ್ತಿ ತೋರಿದವು.

ಮುಂಬೈ ಇಂಡಿಯನ್ಸ್ 9.60 ಕೋಟಿ ರೂಪಾಯಿವರೆಗೆ ಬಿಡ್ ಮಾಡಿದರೆ, ಡೆಲ್ಲಿ ಕ್ಯಾಪಿಟಲ್ಸ್ 9.40 ಕೋಟಿ ರೂಪಾಯಿವರೆಗೆ ಬಿಡ್ ಮಾಡಿತು. ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ಸ್ಟಾರ್ಕ್‌ಗಾಗಿ ಪೈಪೋಟಿ ನಡೆಸಿದವು.

ಎರಡೂ ತಂಡಗಳು ಸ್ಟಾರ್ಕ್‌ರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲು ಭಾರಿ ಪೈಪೋಟಿ ನಡೆಸಿದವು. ಅಂತಿಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 24.75 ಕೋಟಿ ರೂಪಾಯಿಗೆ ಬಿಡ್ ಮಾಡುವ ಮೂಲಕ ಸ್ಟಾರ್ಕ್‌ರನ್ನು ತಂಡಕ್ಕೆ ಸೇರಿಸಿಕೊಂಡಿತು.

ಆರ್ ಸಿಬಿ ತಂಡ ಸೇರಿದ ಅಲ್ಜಾರಿ ಜೋಸೆಫ್

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವೆಸ್ಟ್ ಇಂಡೀಸ್‌ ವೇಗಿ ಅಲ್ಜಾರಿ ಜೋಸೆಫ್‌ರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅಲ್ಜಾರಿ ಜೋಸೆಫ್ 1 ಕೋಟಿ ರೂಪಾಯಿ ಮೂಲ ಬೆಲೆ ಹೊಂದಿದ್ದರು, ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಅವರನ್ನು ಖರೀದಿ ಮಾಡಲು ಆಸಕ್ತಿ ತೋರಿತು, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜೋಸೆಫ್‌ಗಾಗಿ ಭಾರಿ ಪೈಪೋಟಿ ನಡೆಸಿತು.

ಆರಂಭದಲ್ಲಿ ಸಿಎಸ್‌ಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಜೋಸೆಫ್‌ಗಾಗಿ ಪೈಪೋಟಿ ನಡೆಸಿದರೆ, ನಂತರ ಆರ್ ಸಿಬಿ ಮತ್ತು ಎಲ್‌ಎಸ್‌ಜಿ ತಂಡಗಳು ಸ್ಪರ್ಧೆಗೆ ಬಿದ್ದವು. ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11.50 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿತು. ಜೋಸೆಫ್ 2022 ರ ಐಪಿಎಲ್ ಹರಾಜಿನಲ್ಲಿ 2.40 ಕೋಟಿ ರೂಪಾಯಿಗೆ ಗುಜರಾತ್ ಜೈಂಟ್ಸ್ ತಂಡಕ್ಕೆ ಸೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+