ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ
IPL SRH Kavya Maran: 2026ರ 'ದಿ ಹಂಡ್ರೆಡ್' ಕ್ರಿಕೆಟ್ ಹರಾಜಿನಲ್ಲಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಸನ್‌ರೈಸರ್ಸ್ ಲೀಡ್ಸ್ ಖರೀದಿಸಿದ ನಂತರ, ತಂಡದ ಸಹ-ಮಾಲೀಕರಾದ ಕಾವ್ಯಾ ಮಾರನ್ ಅವರು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಐಪಿಎಲ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲೀಕತ್ವ ಹೊಂದಿರುವ 'ಸನ್ ಗ್ರೂಪ್', 'ಸನ್‌ರೈಸರ್ಸ್ ಲೀಡ್ಸ್' ಎಂಬ ಹೆಸರಿನಲ್ಲಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿತು. ಈ ಖರೀದಿಗಾಗಿ ನಡೆದ ಬಿಡ್ಡಿಂಗ್ ಕಾಳಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿವಾದವನ್ನು ಸೃಷ್ಟಿಸಿದ್ದು, ಆಕ್ರೋಶದ ಕಟ್ಟೆಯನ್ನು ಒಡೆದಿದೆ.

ಬೃಹತ್ ಮೊತ್ತಕ್ಕೆ ಪಾಕ್ ಆಟಗಾರನ ಖರೀಗಿ
£190,000 (ಅಂದಾಜು 2.34 ಕೋಟಿ ರೂಪಾಯಿ) ಮೌಲ್ಯದ ಈ ಒಪ್ಪಂದವು ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಹತ್ವದ ಘಟನೆಯಾಗಿದೆ. ದೀರ್ಘಕಾಲದ ನಂತರ ಭಾರತೀಯ ಮಾಲೀಕತ್ವದ ಫ್ರಾಂಚೈಸಿಯೊಂದು ಪಾಕಿಸ್ತಾನದ ಅಂತಾರಾಷ್ಟ್ರೀಯ ಆಟಗಾರನನ್ನು ಸಕ್ರಿಯವಾಗಿ ತಂಡಕ್ಕೆ ಸೇರಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.
ಸನ್‌ರೈಸರ್ಸ್ ಬ್ರ್ಯಾಂಡ್ ಬಹಿಷ್ಕರಿಸುವಂತೆ ಒತ್ತಾಯ
ಈ ನಡೆಗೆ ಇಂಗ್ಲೆಂಡಿನಲ್ಲಿ 'ಪ್ರತಿಭೆಗೆ ನೀಡಿದ ಮನ್ನಣೆ' ಎಂದು ಮೆಚ್ಚುಗೆ ವ್ಯಕ್ತವಾಗಿದ್ದರೆ, ಭಾರತದಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನೇಕ ಅಭಿಮಾನಿಗಳು ಸನ್‌ರೈಸರ್ಸ್ ಬ್ರ್ಯಾಂಡ್ ಅನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿದ್ದಾರೆ.
ಎಂಟು ತಂಡಗಳನ್ನೊಳಗೊಂಡ 'ದಿ ಹಂಡ್ರೆಡ್' ಕ್ರಿಕೆಟ್ ಟೂರ್ನಿಯು ಈ ವರ್ಷ ಜುಲೈ 21ರಿಂದ ಆಗಸ್ಟ್ 16 ರವರೆಗೆ ಯುಕೆಯಲ್ಲಿ (UK) ನಡೆಯಲಿದೆ.
ಈ ಆಕ್ರೋಶಕ್ಕೆ ಪ್ರಮುಖ ಕಾರಣವೆಂದರೆ, 2025ರ ಮಧ್ಯಭಾಗದಲ್ಲಿ ಅಬ್ರಾರ್ ಅಹ್ಮದ್ ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾದ ಕೆಲವು ವಿವಾದಾತ್ಮಕ ಪೋಸ್ಟ್‌ಗಳು ಎಂದು ಹೇಳಲಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾಗಿದ್ದ ಆ ಸಮಯದಲ್ಲಿ, ಅಬ್ರಾರ್ ಹಂಚಿಕೊಂಡ ವಿಷಯಗಳು ಭಾರತೀಯ ಸಶಸ್ತ್ರ ಪಡೆಗಳನ್ನು ಅಪಹಾಸ್ಯ ಮಾಡುವಂತಿದ್ದವು ಎಂದು ಭಾರತೀಯ ಅಭಿಮಾನಿಗಳು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಟ್ವಿಟರ್‌ನಲ್ಲಿ #BoycottSunrisers ಟ್ರೆಂಡ್
ಈ ಒಪ್ಪಂದದ ಸುದ್ದಿ ಹೊರಬೀಳುತ್ತಿದ್ದಂತೆ, #ShameOnSRH ಮತ್ತು #BoycottSunrisers ಎಂಬ ಹ್ಯಾಶ್‌ಟ್ಯಾಗ್‌ಗಳು 'ಎಕ್ಸ್' (X)ನಲ್ಲಿ ಟ್ರೆಂಡ್ ಆಗಲು ಪ್ರಾರಂಭಿಸಿದವು. ಭಾರತದ ಭದ್ರತಾ ಪಡೆಗಳನ್ನು ಬಹಿರಂಗವಾಗಿ ಅವಮಾನಿಸಿದ ಆಟಗಾರನಿಗೆ ಇಷ್ಟು ದೊಡ್ಡ ಮೊತ್ತವನ್ನು ನೀಡಿ ಕೊಂಡುಕೊಂಡಿದ್ದಾರೆ. ಈ ಮೂಲಕ ಫ್ರಾಂಚೈಸಿ ಮಾಲೀಕರು ಕೇವಲ ತಂಡದ ಲಾಭಕ್ಕಾಗಿ ರಾಷ್ಟ್ರೀಯ ಭಾವನೆಗಳನ್ನು ನಿರ್ಲಕ್ಷಿಸಿದ್ದಾರೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ.
ಲಂಡನ್‌ನಲ್ಲಿ ಗುರುವಾರ ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರಿಗಾಗಿ ಪಟ್ಟುಹಿಡಿದು ಬಿಡ್ ಮಾಡಿದ ಸನ್‌ರೈಸರ್ಸ್ ಬ್ರ್ಯಾಂಡ್‌ನ ಮುಖವಾಗಿರುವ ಕಾವ್ಯಾ ಮಾರನ್ ಅವರನ್ನೂ ಸಹ ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವಿಟ್ ಬಳಕೆದಾರರೊಬ್ಬರು, "ವರ್ಷಗಳಿಂದ ಭಾರತೀಯ ತಂಡಗಳು ರಾಷ್ಟ್ರೀಯ ಭಾವನೆಗಳಿಗೆ ಗೌರವ ನೀಡಿ ಪಾಕಿಸ್ತಾನದ ಆಟಗಾರರಿಂದ ದೂರವಿದ್ದವು. ಆದರೆ, ಸನ್‌ರೈಸರ್ಸ್ ಮಾಲೀಕರಾದ ಕಾವ್ಯಾ ಮಾರನ್ ಅವರ ನಡೆ ಇದಕ್ಕೆ ತದ್ವಿರುದ್ಧವಾಗಿದೆ. ದೇಶಕ್ಕಿಂತ ಲಾಭವೇ ಮುಖ್ಯ ಎಂದಾದರೆ ಭಾರತವನ್ನು ಪ್ರತಿನಿಧಿಸುತ್ತಿದ್ದೇವೆ ಎಂದು ನಾಟಕ ಮಾಡುವುದನ್ನು ನಿಲ್ಲಿಸಿ," ಎಂದು ಆಕ್ರೋಶ ಹೊರಹಾಕಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ 2009ರಿಂದ ಪಾಕಿಸ್ತಾನದ ಆಟಗಾರರು ಐಪಿಎಲ್‌ನಲ್ಲಿ ಆಡಿಲ್ಲ. ಇದೇ ಕಾರಣಕ್ಕೆ, ಐಪಿಎಲ್ ಜೊತೆ ಸಂಬಂಧ ಹೊಂದಿರುವ ಫ್ರಾಂಚೈಸಿಗಳು ಪಾಕಿಸ್ತಾನಿ ಆಟಗಾರರನ್ನು ಆಯ್ಕೆ ಮಾಡುವುದಿಲ್ಲ ಎಂಬ ನಿರೀಕ್ಷೆ ಇತ್ತು. ಆದರೆ, ಇದೀಗ ಐಪಿಎಲ್‌ನ ಎಸ್‌ಆರ್‌ಎಚ್ ಮಾಲೀಕತ್ವ ಹೊಂದಿರುವ 'ಸನ್ ಗ್ರೂಪ್ ಇದನ್ನು ಸುಳ್ಳು ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯುತ್ತದೆಯೋ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
-
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications