Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್
RCB Jacob Bethell: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ಧ ಟೀಂ ಇಂಡಿಯಾ ಪೈನಲ್‌ಗೆ ಲಗ್ಗೆ ಇಟ್ಟಿತು. ಮತ್ತೊಂದೆಡೆ, ತಂಡ ಸೋತರೂ 22 ವರ್ಷದ ಜೇಕಬ್ ಬೆಥೆಲ್ ಹೊಸ ದಾಖಲೆ ಮಾಡಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಟೀಂ ಇಂಡಿಯಾ ವಿರುದ್ಧ ಸ್ಫೋಟಕ ಶತಕ ಸಿಡಿಸಿ ಈ ಸಾಧಾನೆ ಮಾಡಿದ್ದಾರೆ. ಇವರ ಸಿಡಿಲಬ್ಬರದ ಆಟಕ್ಕೆ ಆರ್‌ಸಿಬಿ ಅಭಿಮಾನಿಗಳು ಮೆಚ್ಚುಗೆಗಳ ಸುರಿಮಳೆ ಹರಿಸುತ್ತಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿತು. ನಿಗದಿತ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ ಬರೋಬ್ಬರಿ 253 ರನ್‌ಗಳನ್ನು ಕಲೆಹಾಕಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ ಸಿಡಿಲಬ್ಬರದ ಬ್ಯಾಟಿಂಗ್‌ನಿಂದ ಬೃಹತ್ ರನ್‌ಗಳು ಹರಿದುಬಂದವು. ಅದರಲ್ಲೂ ಸಂಜು ತಂಡದ ಪರ ಅತೀ ಹೆಚ್ಚು 89 ರನ್‌ಗಳನ್ನು ಕಲೆಹಾಕಿ ಮಿಂಚಿದರು.

ಮತ್ತೆ ಮಿಂಚಿದ ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್ ಜೊತೆ ಆರಂಭಿಕರಾಗಿ ಬ್ಯಾಟಿಂಗ್‌ಗೆ ಬಂದ ಅಭಿಷೇಕ್ ಶರ್ಮಾ ಕೇವಲ 9 ರನ್‌ಗಳನ್ನಷ್ಟೇ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಆದರೂ, ಕುಗ್ಗದ ಸಂಜು ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದರು. ಮಧ್ಯ ಅವರು ಆಕ್ರಮಣಕಾರಿ ಆಟವಾಡಿ 89 ರನ್ ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅವರ ಈ ಇನ್ನಿಂಗ್ಸ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿತು. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ ಪಂದ್ಯವೊಂದರಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಆಯಿತು.
ಬಳಿಕ ಟೀಂ ಇಂಡಿಯಾ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ನಂತರ ಬಂದ ಯುವ ಆಟಗಾರ ಜಾಕೋಬ್ ಬೆಥೆಲ್ ಆಕ್ರಮಣಕಾರಿ ಆಟವಾಡಿ ಪಂದ್ಯಕ್ಕೆ ಹೊಸ ತಿರುವು ನೀಡಿದರು. ಭಾರತದ ಸ್ಪಿನ್ನರ್ ವರುಣ್ ಚಕ್ರವರ್ತಿ ಮಾರಕ ಬೌಲಿಂಗೂ ಬಗ್ಗದ ಬೆಥೆಲ್ ಬೌಂಡರಿ, ಸಿಕ್ಸ್‌ಗಳ ಸುರಿಮಳೆಯನ್ನೇ ಸುರಿಸಿ ವೇಗವಾಗಿ ಹೆಚ್ಚು ರನ್ ಕಲೆಹಾಕಿದರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೇಗದ ಅರ್ಧ ಶತಕಗಳಿಸಿದವರ ಪಟ್ಟಿಗೆ ಸೇರಿದರು.
ಭರ್ಜರಿ ಶತಕ ಸಿಡಿಸಿದ ಜೇಕಬ್ ಬೆಥೆಲ್
ಅರ್ಧಶತಕದ ನಂತರವೂ ಬೆಥೆಲ್ ಅದೇ ಲಯ ಮುಂದುವರಿಸಿ ಭಾರತೀಯ ಬೌಲರ್‌ಗಳಿಗೆ ತೀವ್ರ ಸವಾಲು ನೀಡಿದರು. ವಿಲ್ ಜಾಕ್ಸ್ ಮತ್ತು ಸಾಮ್ ಕರನ್ ಅವರಿಂದಲೂ ಉತ್ತಮ ಬೆಂಬಲ ಸಿಕ್ಕಿದ್ದು, ಇದರಿಂದ ಇಂಗ್ಲೆಂಡ್ ತಂಡ ಹೋರಾಟ ಮುಂದುವರಿಸಿತು. ಈ ನಡುವೆ ಬೆಥೆಲ್ ಕೇವಲ 45 ಎಸೆತಗಳಲ್ಲಿ ಭರ್ಜರಿ (105) ಶತಕ ಸಿಡಿಸಿ ತಮ್ಮ ಟಿ20 ವೃತ್ತಿಜೀವನದ ಮೊದಲ ಸೆಂಚುರಿ ದಾಖಲಿಸಿ ಗಮನ ಸೆಳದರು. ಟಿ20 ವಿಶ್ವಕಪ್ ಇತಿಹಾಸದಲ್ಲಿ ವೇಗದ ಶತಕಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಆಟಗಾರ ಫಿನ್ ಅಲೆನ್ ಮೊದಲ ಸೆಮಿಫೈನಲ್‌ನಲ್ಲಿ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
ಆದರೆ ಜೇಕಬ್ ಬೆಥೆಲ್ ಅವರ ಸ್ಫೋಟಕ ಶತಕ ಸಿಡಿಸಿದರೂ ಕೂಡ ಇಂಗ್ಲೆಂಡ್ ತಂಡಕ್ಕೆ ಜಯ ಸಿಗಲಿಲ್ಲ. ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳು ಉತ್ತಮ ಬೌಲಿಂಗ್ ದಾಳಿ ಮಾಡಿ ಪಂದ್ಯದ ದಿಕ್ಕನ್ನೇ ಬದಲಿಸಿದರು. ಪರಿಣಾಮ, ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆಯಿತು. ಜೇಕಬ್ ಬೆಥೆಲ್ ತಾವು ವಿಕೆಡ್ ಒಪ್ಪಿಸಿದ ಬಳಿಕ ಮೈದಾನದಲ್ಲೇ ನಮಸ್ಕಾರಮ ಮಾಡುವ ರೀತಿಯಲ್ಲಿ ಅಡ್ಡ ಬಿದ್ದಿದ್ದು, ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಮತ್ತೊಂದೆಡೆ ಇವರ ಆಟಕ್ಕೆ ಮನಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಮೆಚ್ಚುಗೆಗಳ ಸುರಿಮಳೆ ಹರಿಸಿದ್ದಾರೆ. ಇವರು ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಕಣಕ್ಕಿಳಿಯುವ ಆಟಗಾರ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್‌ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್‌ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications