Get Updates
Get notified of breaking news, exclusive insights, and must-see stories!

ರಣಜಿ ಟ್ರೋಫಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ ಕಿರೀಟಕ್ಕೆ ಮುತ್ತಿಟ್ಟ ಜಮ್ಮು-ಕಾಶ್ಮೀರ ತಂಡಕ್ಕೆ ಹಣದ ಹೊಳೆ ಹರಿಸಿದ ಬಿಸಿಸಿಐ

Ranji Trophy 2026: ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಣಜಿ 2026 ಫೈನಲ್ ಪಂದ್ಯಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟ ಜಮ್ಮು-ಕಾಶ್ಮೀರ ತಂಡಕ್ಕೆ ಪ್ರಶಂಸೆ ಜೊತೆಗೆ ಬಹುಮಾನಗಳ ಸುರಿಮಳೆಯೇ ಹರಿದುಬಂದಿದೆ. ಜೆ & ಕೆ ಸಿಎಂ ಒಮರ್ ಅಬ್ದುಲ್ಲಾ 2,00,00,000 ರೂಪಾಯಿ ನಿಡಿದ್ದು, ಬಿಸಿಸಿಐ ಕೂಡ ಹಣದ ಹೊಳೆಯನ್ನೇ ಹರಿಸಿದೆ. ಹಾಗಾದ್ರೆ, ರನ್ನರ್ ಅಪ್‌ ಕರ್ನಾಟಕ ತಂಡಕ್ಕೆ ಸಿಕ್ಕಿದ್ದೆಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಬಾರಿಯ ರಣಜಿ ಟ್ರೋಫಿ ಫೈನಲ್ ಪಂದ್ಯ ಭಾರತೀಯ ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಿ ಉಳಿದಿದೆ. ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕವನ್ನು ಮಣಿಸಿ ಚೊಚ್ಚಲ ಬಾರಿಗೆ ಕಿರೀಟ ಗೆದ್ದು ಸಂಭ್ರಮಿಸಿದೆ. ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಜೆ & ಕೆ, 67 ವರ್ಷಗಳ ಬಳಿಕ ಹೊಸ ಇತಿಹಾಸವನ್ನು ಸೃಷ್ಟಿಸಿತು.

Jammu-Kashmir Clinch Maiden Ranji Trophy 2026 Title BCCI Announces 5 Cr Prize Karnataka Get 3 Cr

ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ದುಕೊಂಡ ಜಮ್ಮು ಮತ್ತು ಕಾಶ್ಮೀರ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್ ಗಳಿಸಿತು. ಪ್ರತಿಯಾಗಿ ಕಣಕ್ಕಿಳಿದ ಕರ್ನಾಟಕ ತಂಡ 293 ರನ್‌ಗಳಿಗೆ ಸೀಮಿತಗೊಂಡಿತು. ಇದರಿಂದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 291 ರನ್‌ಗಳ ಮಹತ್ವದ ಮುನ್ನಡೆ ಸಾಧಿಸಿತು.

ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಹಣದ ಹೊಳೆ

ಎರಡನೇ ಇನ್ನಿಂಗ್ಸ್‌ನಲ್ಲೂ ಜಮ್ಮು ಮತ್ತು ಕಾಶ್ಮೀರ ತನ್ನ ಹಿಡಿತ ಸಾಧಿಸಿ 630 ರನ್‌ಗಳವರೆಗೆ ಹೆಚ್ಚಿಸಿತು. ಅಂತಿಮವಾಗಿ ಪಂದ್ಯ ಡ್ರಾ ಮಾಡಿಕೊಂಡರೂ, ಮೊದಲ ಇನ್ನಿಂಗ್ಸ್ ಮುನ್ನಡೆಯಿಂದ ಜಮ್ಮು-ಕಾಶ್ಮೀರ ಚಾಂಪಿಯನ್ ಆಗಿ ಹೊರಹೊಮ್ಮಿತು. ಐತಿಹಾಸಿಕ ಜಯ ಸಾಧಿಸಿದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸೋತು ರನ್ನರ್ ಅಪ್ ಆಗಿರುವ ಕರ್ನಾಟಕ ತಂಡಕ್ಕೆ 3 ಕೋಟಿ ರೂಪಾಯಿ ನೀಡಲಾಗುತ್ತದೆ. ಇನ್ನೂ ಜಮ್ಮು ಮತ್ತು ಕಾಶ್ಮೀರ ತಂಡದ ಸಾಧನೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 2 ಕೋಟಿ ರೂಪಾಯಿ ಪ್ರೋತ್ಸಾಹಧನ ಘೋಷಿಸಿದ್ದಾರೆ.

ಭಾವುಕರಾಗಿ ಕಣ್ಣೀರಿಟ್ಟ ಜಮ್ಮು-ಕಾಶ್ಮೀರ ಆಟಗಾರರು

ರಣಜಿ ಟ್ರೋಫಿ ಕಿರೀಟ ಜಯಿಸಿದ ಕ್ಷಣ ಜಮ್ಮು ಮತ್ತು ಕಾಶ್ಮೀರ ತಂಡದ ಆಟಗಾರರಿಗೆ ಮರೆಯಲಾಗದ ಅನುಭವವಾಗಿತ್ತು. ಫೈನಲ್‌ನಲ್ಲಿ ಗೆದ್ದ ತಕ್ಷಣ ಮೈದಾನದಲ್ಲಿ ಸಂಭ್ರಮದ ವಾತಾವರಣ ಮೂಡಿತು. ಆಟಗಾರರು ಪರಸ್ಪರ ಅಪ್ಪಿಕೊಂಡು ಭಾವುಕರಾಗಿ ಕಣ್ಣೀರಿಟ್ಟ ದೃಶ್ಯಗಳು ಕಂಡುಬಂದವು. ಹಲವು ವರ್ಷಗಳ ಪರಿಶ್ರಮಕ್ಕೆ ಫಲ ದೊರೆತ ಹಿನ್ನೆಲೆ ಈ ಘಟನೆ ನಡೆಯಿತು.

ಟ್ರೋಫಿ ಪ್ರದಾನ ಸಮಾರಂಭದಲ್ಲಿ ತಂಡದ ನಾಯಕ ಮತ್ತು ಕೋಚ್ ಮಾತನಾಡಿ, ಇದು ಸಂಪೂರ್ಣ ತಂಡದ ಶ್ರಮದ ಫಲ. ರಾಜ್ಯ ಕ್ರಿಕೆಟ್ ಸಂಸ್ಥೆಯ ಬೆಂಬಲ, ಅಭಿಮಾನಿಗಳ ಪ್ರೋತ್ಸಾಹ ಹಾಗೂ ಆಟಗಾರರ ಶಿಸ್ತುಬದ್ಧ ಪ್ರದರ್ಶನವೇ ಗೆಲುವಿಗೆ ಪ್ರಮುಖ ಕಾರಣ ಎಂದು ಅವರು ತಿಳಿಸಿದರು. ಯುವ ಆಟಗಾರರಿಗೆ ಈ ಸಾಧನೆ ಪ್ರೇರಣೆ ಆಗಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದರು.

ಮೈದಾನದ ಹೊರಗೂ ಸಂಭ್ರಮ ಮುಂದುವರಿಯಿತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ ಹರಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಪ್ರಿಯರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಗಮನ ಸೆಳೆದರು. ಒಟ್ಟಿನಲ್ಲಿ ಹೇಳುವುದಾದ್ರೆ ಈ ಗೆಲುವು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ಗೆ ಹೊಸ ದಿಕ್ಕು ತೋರಿಸುವುದರ ಜೊತೆಗೆ ದೇಶೀಯ ಮಟ್ಟದಲ್ಲಿ ತಂಡದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+