RCB vs MI: ಆರ್‌ಸಿಬಿ ವಿರುದ್ಧ ಆಡಲು ಸಜ್ಜಾದ ಮಾರಕ ವೇಗಿ; ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಐಪಿಎಲ್ 2025ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಉತ್ತಮ ಆರಂಭ ಕಂಡಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕೊನೆಯ ಪಂದ್ಯದಲ್ಲಿ ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತ್ತು. ಇದೀಗ ಮುಂಬೈಗೆ ಪ್ರಯಾಣಿಸಿದ್ದು ಸೋಮವಾರ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಲಿದೆ.

ಸೋಮವಾರ ಆರ್ ಸಿಬಿ ಗೆಲುವು ಸಾಧಿಸಿದರೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೆ ಬರುವ ಸಾಧ್ಯತೆ ಇದೆ. ಪ್ಲೇಆಫ್ ಹಾದಿಯನ್ನು ಸುಲಭವಾಗಿಸಲು ಆರಂಭದಲ್ಲೇ ಪಂದ್ಯಗಳನ್ನು ಗೆಲ್ಲುವ ಉತ್ಸಾಹದಲ್ಲಿದೆ ಆರ್ ಸಿಬಿ. ಕಳೆದ ಪಂದ್ಯದಲ್ಲಿ ಲಕ್ನೋದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ಮತ್ತೆ ತವರಿನಲ್ಲಿ ಆಡಲು ಸಜ್ಜಾಗಿದೆ.

Jasprit bumrah rohit sharma return rcb vs mi ipl 2025

ವಾಂಖೆಡೆ ಕ್ರೀಡಾಂಗಣದಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮುಂಬೈ ಇಂಡಿಯನ್ಸ್ ಆರ್ ಸಿಬಿ ವಿರುದ್ಧವೂ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ. ಆರ್ ಸಿಬಿ ಪಂದ್ಯಕ್ಕೆ ಮುನ್ನ ಮುಂಬೈ ಇಂಡಿಯನ್ಸ್‌ಗೆ ಎರಡು ಖುಷಿ ಸುದ್ದಿ ಸಿಕ್ಕಿದೆ. ಮೊಣಕಾಲು ಗಾಯದಿಂದ ಎಲ್‌ಎಸ್‌ಜಿ ವಿರುದ್ಧ ಆಡದ ರೋಹಿತ್ ಶರ್ಮಾ ಫಿಟ್ ಆಗಿದ್ದು ಆರ್ ಸಿಬಿ ವಿರುದ್ಧ ಆಡಲಿದ್ದಾರೆ. ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ ಆಗಿದ್ದು ಭಾನುವಾರ ತಂಡದ ಜೊತೆ ಅಭ್ಯಾಸ ಮಾಡುತ್ತಿದ್ದು ಸೋಮವಾರ ಕಣಕ್ಕಿಳಿಯಲಿದ್ದಾರೆ.

Take a Poll

ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ ಬುಮ್ರಾ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಭಾನುವಾರ ತರಬೇತಿ ಪಡೆಯುತ್ತಿದ್ದಾರೆ, ಆರ್‌ಸಿಬಿ ಪಂದ್ಯಕ್ಕೂ ಲಭ್ಯವಿದ್ದಾರೆ ಎಂದರು. ಬುಮ್ರಾ ಎನ್‌ಸಿಎ ಜೊತೆ ತಮ್ಮ ಅಭ್ಯಾಸವನ್ನು ಮುಗಿಸಿದ್ದು, ಅವರನ್ನು ನಮ್ಮ ಫಿಸಿಯೋಗಳಿಗೆ ಹಸ್ತಾಂತರಿಸಲಾಗಿದೆ. ಭಾನುವಾರ ಅವರು ಬೌಲಿಂಗ್ ಮಾಡುತ್ತಿದ್ದಾರೆ, ಆದ್ದರಿಂದ ಎಲ್ಲವೂ ಚೆನ್ನಾಗಿದೆ ಎಂದಿದ್ದಾರೆ.

ಆರ್ ಸಿಬಿಗೆ ದೊಡ್ಡ ಸವಾಲು

ವಾಂಖೆಡೆ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದರೂ ವೇಗಿಗಳಿಗೂ ಸಹಾಯವಿರುತ್ತದೆ. ಆರ್ ಸಿಬಿ ಬಳಿ ಕೂಡ ಉತ್ತಮ ವೇಗಿಗಳಿದ್ದಾರೆ. ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಬಲಿಷ್ಠವಾಗಿದ್ದರೂ, ಆರ್ ಸಿಬಿ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನೇ ಹೊಂದಿದೆ. ಈ ಕಾರಣದಿಂದಲೇ ಸೋಮವಾರ ಕ್ರಿಕೆಟ್ ಅಭಿಮಾನಿಗಳು ಒಂದು ರೋಚಕ ಪಂದ್ಯವನ್ನು ನಿರೀಕ್ಷೆ ಮಾಡಬಹುದು.

ಗಾಯದಿಂದ ಚೇತರಿಸಿಕೊಂಡಿರುವ ಬುಮ್ರಾ ಹೇಗೆ ಬೌಲಿಂಗ್ ಮಾಡುತ್ತಾರೆ, ಅವರನ್ನು ಆರ್ ಸಿಬಿ ಬ್ಯಾಟರ್ ಗಳು ಹೇಗೆ ಎದುರಿಸುತ್ತಾರೆ ಎಂದು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಅಬ್ಬರಿಸಿದರೆ ಆರ್ ಸಿಬಿ ಆರಂಭದಲ್ಲೇ ಮೇಲುಗೈ ಸಾಧಿಸಬಹುದು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಆರ್ ಸಿಬಿ: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ (ನಾಯಕ), ರಜತ್ ಪಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್, ನಮನ್ ಧಿರ್, ಸೂರ್ಯಕುಮಾರ್ ಯಾದವ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಅಶ್ವನಿ ಕುಮಾರ್, ವಿಘ್ನೇಶ್ ಪುತೂರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+