Champions Trophy: ಭಾರತ ತಂಡಕ್ಕೆ ಬಿಗ್ ಶಾಕ್! ಕೊನೆಯ ಹಂತದಲ್ಲಿ ತಂಡದಲ್ಲಿ ಎರಡು ಬದಲಾವಣೆ
ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಎರಡು ಬದಲಾವಣೆಯಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ದೃಢಪಡಿಸಿದೆ. ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು ಬುಮ್ರಾ ಬದಲಿಗೆ ವೇಗಿ ಹರ್ಷಿತ್ ರಾಣಾರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸಂದರ್ಭದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ, ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು, ಆದರೆ ಅವರು ಫಿಟ್ ಆಗಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗಲಿದ್ದು, ಅನಿವಾರ್ಯವಾಗಿ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ಮೊದಲು ಪ್ರಕಟಿಸಿದ್ದ ಭಾರತ ತಂಡದಲ್ಲಿ ಬುಮ್ರಾ ಅವರ ಹೆಸರು ಇತ್ತು.

ಇನ್ನೊಂದು ಬದಲಾವಣೆ
ಮೊದಲು ಪ್ರಕಟಿಸಿದ ತಂಡದಲ್ಲಿ ಸ್ಥಾನ ಪಡೆದಿದ್ದ ಯಶಸ್ವಿ ಜೈಸ್ವಾಲ್‌ರನ್ನು ತಂಡದಿಂದ ಹೊರಗಿಡಲಾಗಿದ್ದು ಅವರ ಬದಲಾಗಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಏಕದಿನ ಸರಣಿಯಲ್ಲಿ ಕೂಡ ಅವಕಾಶ ಪಡೆದಿರುವ ಚಕ್ರವರ್ತಿ ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲೂ ಮಿಂಚಲು ಸಜ್ಜಾಗಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರ ಕೆಳಭಾಗದ ಬೆನ್ನಿನ ಗಾಯದಿಂದ ಬಳಲುತ್ತಿದ್ದ ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ ತಂಡದಿಂದ ಹೊರಗಿಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿರುವ ಹರ್ಷಿತ್ ರಾಣಾರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಪ್ರಯಾಣೇತರ ಬದಲೀ ಆಟಗಾರರು
ಯಶಸ್ವಿ ಜೈಸ್ವಾಲ್, ವೇಗಿ ಮೊಹಮ್ಮದ್ ಸಿರಾಜ್ ಮತ್ತು ಆಲ್‌ರೌಂಡರ್ ಶಿವಂ ದುಬೆ. ಮೂವರು ಆಟಗಾರರು ಭಾರತದಲ್ಲೇ ಉಳಿಯಲಿದ್ದು ತಂಡದಲ್ಲಿ ಯಾರಾದರೂ ಗಾಯಗೊಂಡರೆ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ.












Click it and Unblock the Notifications