ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್
RCB: ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಎಸ್ಆರ್ಎಚ್ ವಿರುದ್ಧ ಭರ್ಜರಿ ಗೆಲವು ಸಾಧಿಸಿದೆ. ಈ ಪಂದ್ಯವನ್ನು ಡಬ್ಲ್ಯೂಪಿಎಲ್ನ ಸ್ಮೃತಿ ಮಂಧಾನ, ಕನ್ನಡತಿ ಶ್ರೇಯಾಂಕಾ ಪಾಟೀಲ್ ಹಾಗೂ ಜೆಮಿಮಾ ರೊಡ್ರಿಗಸ್ ಒಟ್ಟಿಗೆ ಕುಳಿತು ವೀಕ್ಷಣೆ ಮಾಡಿ ಕ್ರೀಡಾಸ್ಪೂರ್ತಿ ಮೆರೆದರು.
ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿತು. ಈ ವೇಳೆ ಡಬ್ಲ್ಯೂಪಿಎಲ್ನ ಸ್ಮೃತಿ ಮಂಧಾನ, ಕನ್ನಡತಿ ಶ್ರೇಯಾಂಕಾ ಪಾಟೀಲ್ ಹಾಗೂ ಜೆಮಿಮಾ ರೊಡ್ರಿಗಸ್ ಆರ್ಸಿಬಿ ಆಟಗಾರರ ಪ್ರದರ್ಶನ ಕಂಡು ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದರು.

ಪಂದ್ಯ ವೀಕ್ಷಣೆ ಮಾಡಿದ ಸ್ಮೃತಿ, ಶ್ರೇಯಂಕಾ, ಜೆಮಿಮಾ
ಆರ್ಸಿಬಿ ತಂಡವನ್ನು ಹುರಿದುಂಬಿಸಲು ಮಹಿಳಾ ಪ್ರೀಮಿಯರ್ ಲೀಗ್ನ ಸ್ಟಾರ್ ಆಟಗಾರ್ತಿಯರಾದ ಸ್ಮೃತಿ ಮಂಧಾನ, ಶ್ರೇಯಾಂಕಾ ಪಾಟೀಲ್ ಮತ್ತು ಜೆಮಿಮಾ ರೋಡ್ರಿಗಸ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ಮಹಿಳಾ ಕ್ರಿಕೆಟ್ ತಾರೆಯರು ಗ್ಯಾಲರಿಯಲ್ಲಿ ಕುಳಿತು ಆರ್ಸಿಬಿ ತಂಡದ ಆಟಗಾರರ ಅದ್ಭುತ ಪ್ರದರ್ಶನ ಕಂಡು ಚಪ್ಪಾಳೆ ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿರುವ ದೃಶ್ಯಗಳು ಅಭಿಮಾನಿಗಳ ಗಮನ ಸೆಳೆದಿವೆ.
ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಈಗಾಗಲೇ ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಬರೆದಿದೆ. ಈಗ ಪುರುಷರ ತಂಡವೂ ಅದೇ ಹಾದಿಯಲ್ಲಿ ಸಾಗಲಿ ಎಂಬುದು ಈ ತಾರೆಯರ ಹಾರೈಕೆಯಾಗಿದೆ. ಇದೀಗ ಈ ಮೂವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.
ಚಿನ್ನಸ್ವಾಮಿಯಲ್ಲಿ ಎರಡು ಬಾರಿ ಉದ್ಘಾಟನಾ ಪಂದ್ಯ
ಐಪಿಎಲ್ ಇತಿಹಾಸದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣವು ಸೀಸನ್ನ ಉದ್ಘಾಟನಾ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿರುವುದು ಇದು 2ನೇ ಬಾರಿ. ಮೊದಲು 2008ರ ಐಪಿಎಲ್ ಇತಿಹಾಸದ ಚೊಚ್ಚಲ ಪಂದ್ಯ ಆರ್ಸಿಬಿ vs ಕೆಕೆಆರ್ ಹಾಗೂ ಇದೀಗ 2026ರಲ್ಲಿ ಆರ್ಸಿಬಿ ಹಾಗೂ ಎಸ್ಆರ್ಚ್ ನಡುವೆ ಉದ್ಘಾಟನಾ ಪಂದ್ಯ ನಡೆದಿದೆ.
ಟ್ರೋಫಿ ಗೆಲುವಿಗೆ ಪ್ರಮುಖ ಕಾರಣರಾದ ಆಟಗಾರ್ತಿಯರು
ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಗ್ಯಾಲರಿಯಲ್ಲಿ ಸ್ಮೃತಿ ಮಂಧಾನ, ಶ್ರೇಯಾಂಕ ಪಾಟೀಲ್ ಮತ್ತು ಜೆಮಿಮಾ ರೋಡ್ರಿಗಸ್ ಕಾಣಿಸಿಕೊಂಡರು. ಇವರ ಉಪಸ್ಥಿತಿಯು ಅಭಿಮಾನಿಗಳಲ್ಲಿ ಸಂಭ್ರಮವನ್ನು ಹೆಚ್ಚಿಸಿತು. ಸ್ಮೃತಿ ಮಂಧಾನ ಮತ್ತು ಶ್ರೇಯಾಂಕ ಪಾಟೀಲ್ ಅವರು ಆರ್ಸಿಬಿ ಮಹಿಳಾ ತಂಡದ ಭಾಗವಾಗಿದ್ದಾರೆ. 2024ರ ಮಹಿಳಾ ಪ್ರೀಮಿಯರ್ ಲೀಗ್ (WPL) ಆವೃತ್ತಿಯಲ್ಲಿ ಆರ್ಸಿಬಿ ತಂಡವು ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ಬರೆದಾಗ ಈ ಇಬ್ಬರು ಪ್ರಮುಖ ಪಾತ್ರ ವಹಿಸಿದ್ದರು.
ಎರಡು ಟ್ರೋಫಿ ಗೆದ್ದ ಮಹಿಳೆಯರ ತಂಡ
ಅಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ನಡೆದ 2026ರ ಡಬ್ಲ್ಯೂಪಿಎಲ್ನಲ್ಲೂ ಆರ್ಸಿಬಿ ಮಹಿಳಾ ತಂಡವು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್ಸಿಬಿ ಫ್ರಾಂಚೈಸಿಗೆ ಎರಡು ಬಾರಿ ಪ್ರಶಸ್ತಿ ತಂದುಕೊಡುವಲ್ಲಿ ಈ ಆಟಗಾರ್ತಿಯರು ಪ್ರಮುಖ ಪಾತ್ರವಹಿಸಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರಿನ ಅಭಿಮಾನಿಗಳು ಇವರನ್ನು ಹೆಚ್ಚಾಗಿ ಗೌರವಿಸುತ್ತಾರೆ. ಮತ್ತೊಂದೆಡೆ, ಮಹಿಳಾ ತಂಡವು ಈಗಾಗಲೇ ಎರಡು ಕಪ್ ಗೆದ್ದಿರುವುದು ಪುರುಷರ ತಂಡಕ್ಕೆ ಈ ಬಾರಿ ದೊಡ್ಡ ಪ್ರೇರಣೆಯಾಗಿದೆ ಎನ್ನಬಹುದು.
ಸ್ಮೃತಿ ಮಂಧಾನ ಸಾಧನೆ: ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ತಂಡದ ಪರ ಅದ್ಭುತ ಪ್ರದರ್ಶನ ತೋರುತ್ತಾ ಬಂದಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಒಂದೇ ಸೀಸನ್ನಲ್ಲಿ ಪ್ರಶಸ್ತಿ ಮತ್ತು ಆರೆಂಜ್ ಕ್ಯಾಪ್ ಎರಡನ್ನೂ ಗೆದ್ದ ಮೊದಲ ನಾಯಕಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇವರ ನಾಯಕತ್ವ ಮತ್ತು ಅದ್ಭುತ ಬ್ಯಾಟಿಂಗ್ ಪ್ರದರ್ಶನ ತಂಡದ ಬೆನ್ನೆಲುಬಾಗಿದೆ.
ಶ್ರೇಯಾಂಕಾ ಪಾಟೀಲ್ ಸಾಧನೆ: ಶ್ರೇಯಾಂಕ ಡಬ್ಲ್ಯೂಪಿಎಲ್ ಆರ್ಸಿಬಿ ತಂಡದ ಪ್ರಮುಖ ಆಲ್ರೌಂಡರ್ ಆಗಿದ್ದು, ಸ್ಪಿನ್ ಮೋಡಿ ಮಾಡುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಲವು ಬಾರಿ ಉತ್ತಮ ಬೌಲಿಂಗ್ ದಾಳಿ ಮಾಡಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.
ಜೆಮಿಮಾ ರೋಡ್ರಿಗಸ್: ಜೆಮಿಮಾ ಅವರು ಡಬ್ಲ್ಯೂಪಿಎಲ್ನಲ್ಲಿ ಆರ್ಸಿಬಿ ಪರ ಆಡದಿದ್ದರೂ, 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವರು ನೀಡಿದ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಬಳಿಕ ಅವರಿಗೆ ಭಾರತದಲ್ಲಿ ಅಭಿಮಾನಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.
ಜೆಮಿಮಾ ಅವರು 2026ರ ಡಬ್ಲ್ಯೂಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿದ್ದು, ಇವರ ನಾಯಕತ್ವದಲ್ಲಿ ಡೆಲ್ಲಿ ತಂಡವು ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ 3ನೇ ಸ್ಥಾನವನ್ನು ಪಡೆದುಕೊಂಡಿತು. ಮೈದಾನದಲ್ಲಿ ಎದುರಾಳಿಗಳಾಗಿದ್ದರೂ (ಆರ್ಸಿಬಿ vs ಡೆಲ್ಲಿ), ಈ ತಾರೆಯರೆಲ್ಲರೂ ಚಿನ್ನಸ್ವಾಮಿ ಮೈದಾನದಲ್ಲಿ ಒಟ್ಟಾಗಿ ಕುಳಿತು ಆರ್ಸಿಬಿ ಪುರುಷರ ತಂಡವನ್ನು ಬೆಂಬಲಿಸಿದ್ದು ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿದೆ.
-
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ












Click it and Unblock the Notifications