Jos Buttler: ಚಾಂಪಿಯನ್ಸ್‌ ಟ್ರೋಫಿಯಲ್ಲಿ ಹೀನಾಯ ಪ್ರದರ್ಶನ; ಇಂಗ್ಲೆಂಡ್ ನಾಯಕನ ತಲೆದಂಡ!

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸೋತ ಇಂಗ್ಲೆಂಡ್ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಸೆಮಿಫೈನಲ್ ತಲುಪುವ ಅವಕಾಶ ಇಲ್ಲದೇ ಇದ್ದರೂ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ಆಡಲಿದೆ, ಈ ಪಂದ್ಯಕ್ಕೆ ಮುನ್ನವೇ ಇಂಗ್ಲೆಂಡ್‌ಗೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಜೋಸ್ ಬಟ್ಲರ್ ಶುಕ್ರವಾರ ಘೋಷಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ಸೇರಿದಂತೆ ಹಲವು ಪ್ರಮುಖ ಪಂದ್ಯಾವಳಿಗಳಲ್ಲಿ ಇಂಗ್ಲೆಂಡ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ತಂಡದ ಪ್ರದರ್ಶನ ನಾಯಕತ್ವವನ್ನು ಕೂಡ ಪ್ರಶ್ನೆ ಮಾಡುವಂತೆ ಮಾಡಿತ್ತು, ಐಸಿಸಿ ಚಾಮಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸೋತಿದ್ದು ಇದೀಗ ಬಟ್ಲರ್ ನಾಯಕತ್ವ ತ್ಯಜಿಸುವಂತೆ ಮಾಡಿದೆ.

jos buttler resigns england captain icc champions trophy

ಇಂಗ್ಲೆಂಡ್ ಕೊನೆಯ 25 ಏಕದಿನ ಪಂದ್ಯಗಳಲ್ಲಿ 18 ಪಂದ್ಯಗಳನ್ನು ಸೋತಿದ್ದಾರೆ. ಕಳೆದ ಆರು ಏಕದಿನ ಪಂದ್ಯಗಳನ್ನು ಸತತವಾಗಿ ಸೋತು ಕೆಟ್ಟ ದಾಖಲೆ ಬರೆದಿದ್ದಾರೆ. ಶನಿವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೇ ಬಟ್ಲರ್ ನಾಯಕರಾಗಿ ಆಡುವ ಕೊನೆಯ ಪಂದ್ಯವಾಗಿರುತ್ತದೆ.

ಶುಕ್ರವಾರ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜೋಸ್ ಬಟ್ಲರ್, ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಇದು ನನಗೆ ಸರಿಯಾದ ನಿರ್ಧಾರ, ತಂಡದ ದೃಷ್ಟಿಯಿಂದಲೂ ಇದು ಸರಿಯಾದ ನಿರ್ಧಾರ ಎಂದು ಹೇಳಿದ್ದಾರೆ. ಟಿ20 ಮಾದರಿಯಲ್ಲಿ ನಾಯಕನಾಗಿ ಯಶಸ್ಸು ಕಂಡರೂ ಏಕದಿನ ಮಾದರಿಯಲ್ಲಿ ಅವರು ಅಂದುಕೊಂಡಷ್ಟು ಉತ್ತಮ ಪ್ರದರ್ಶನ ನೀಡಲಿಲ್ಲ.

2022ರ ಜೂನ್‌ನಲ್ಲಿ ಇಯಾನ್ ಮಾರ್ಗನ್ ನಾಯಕನ ಸ್ಥಾನ ತ್ಯಜಿಸಿದಾಗ ಜೋಸ್ ಬಟ್ಲರ್ ಸೀಮಿತ ಓವರ್ ಗಳ ಮಾದರಿಗೆ ನಾಯಕರಾಗಿ ಆಯ್ಕೆಯಾದರು. ಅದೇ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಅವರ ನಾಯಕತ್ವದಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿತ್ತು.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಇಂಗ್ಲೆಂಡ್ ಅದೇ ರೀತಿಯ ಉತ್ತಮ ಪ್ರದರ್ಶನವನ್ನು ಮುಂದುವರೆಸುವಲ್ಲಿ ವಿಫಲವಾಯಿತು. 2024ರ ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಹೊರಬಿದ್ದರೆ, ಅದಕ್ಕೂ ಮುನ್ನ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಲು ಕೂಡ ವಿಫಲವಾಗಿದ್ದರು.

ಏಕದಿನ ಮಾದರಿಯಲ್ಲಿ ಬಟ್ಲರ್ 44 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದು ಅದರಲ್ಲಿ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 25 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಟೈನಲ್ಲಿ ಅಂತ್ಯವಾಗಿದೆ. 51 ಟಿ20 ಪಂದ್ಯಗಳಲ್ಲಿ 26 ಗೆಲುವು ಕಂಡಿದ್ದು, 22 ಪಂದ್ಯಗಳಲ್ಲಿ ಸೋಲು ಕಂಡಿದ್ದು ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯವಾಗಿವೆ.

ಬಟ್ಲರ್ ಬಳಿಕ ತಂಡದ ನಾಯಕತ್ವ ಯಾರಿಗೆ ಸಿಗಲಿದೆ ಎನ್ನುವ ಕುತೂಹಲ ಎದುರಾಗಿದೆ. ಚಾಂಪಿಯನ್ಸ್ ಟ್ರೋಫಿ ಬಳಿಕ ನಾಯಕತ್ವದ ಜೊತೆಗೆ ಕೋಚ್ ಬ್ರೆಂಡನ್ ಮೆಕಲಮ್‌ ಅವರನ್ನು ಕೂಡ ಬದಲಾಯಿಸುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್‌ನಲ್ಲೂ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದು ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+