IPL 2023: ವೇಗವಾಗಿ 100 ವಿಕೆಟ್‌ ಪಡೆದು ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಕಗಿಸೊ ರಬಾಡ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಗಿಸೊ ರಬಾಡ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್‌ 2023ರ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ಬೌಲರ್ ಕಗಿಸೊ ರಬಾಡ ಈ ಮೈಲಿಗಲ್ಲು ಸ್ಥಾಪಿಸಿದರು. ಕೇವಲ 64 ಪಂದ್ಯಗಳಲ್ಲಿ 100 ವಿಕೆಟ್ ಪಡೆದು ಹೊಸ ದಾಖಲೆ ಬರೆದರು.

ಅಂಕಿಅಂಶಗಳ ಪ್ರಕಾರ, ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಈ ಟೂರ್ನಿಯಲ್ಲಿ ವೇಗವಾಗಿ 100 ವಿಕೆಟ್ ಪಡೆದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮಾಲಿಂಗ 70 ಪಂದ್ಯಗಳಲ್ಲಿ 100 ವಿಕೆಟ್ ಪಡೆದುಕೊಂಡಿದ್ದಾರೆ. ಆದರೆ ರಬಾಡ ಈ ಸಾಧನೆ ಮಾಡಲು ಕೇವಲ 64 ಪಂದ್ಯಗಳನ್ನು ಆಡಿದರು. ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೃದ್ಧಿಮಾನ್ ಸಾಹಾ ಅವರ ವಿಕೆಟ್ ಪಡೆಯುವ ಮೂಲಕ ಈ ದಾಖಲೆ ನಿರ್ಮಿಸಿದರು.

Kagiso Rabada

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಹರ್ಷಲ್ ಪಟೇಲ್ ಮತ್ತು ಸನ್‌ರೈಸರ್ಸ್ ಹೈದರಾಬಾದ್‌ನ ಭುವನೇಶ್ವರ್ ಕುಮಾರ್ 81 ಪಂದ್ಯಗಳಲ್ಲಿ 100 ವಿಕೆಟ್ ಪಡೆದು ಐಪಿಎಲ್‌ನಲ್ಲಿ ವೇಗವಾಗಿ 100 ವಿಕೆಟ್‌ ಗಳಿಸಿದ ಭಾರತೀಯ ಬೌಲರ್ ಗಳು ಎನಿಸಿಕೊಂಡಿದ್ದರು. ದಕ್ಷಿಣ ಆಫ್ರಿಕಾದ ಬೌಲರ್ ರಬಾಡ ಈ ಬಾರಿ ಐಪಿಎಲ್‌ನಲ್ಲಿ ಇದೇ ಮೊದಲ ಪಂದ್ಯವನ್ನಾಡುತ್ತಿದ್ದಾರೆ.

Kagiso Rabada

ಪಂಜಾಬ್ ಕಿಂಗ್ಸ್‌ನ ಪ್ರಮುಖ ಬೌಲರ್ ರಬಾಡ

ಕಗಿಸೊ ರಬಾಡ ಪಂಜಾಬ್ ಕಿಂಗ್ಸ್‌ನ ಪ್ರಮುಖ ಬೌಲರ್ ಆಗಿದ್ದಾರೆ. ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ಆಡುತ್ತಿದ್ದ ಅವರು ಸದ್ಯ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಪಂಜಾಬ್ ಪರವಾಗಿ ಉತ್ತಮ ಪ್ರದರ್ಶನ ನೀಡುವ ಅವರು ಸದ್ಯ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿದ್ದಾರೆ. ಗುರುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಗಳಲ್ಲಿ 36 ರನ್ ನೀಡಿ 1 ವಿಕೆಟ್ ಪಡೆದರು.

ಪಂಜಾಬ್ ಕಿಂಗ್ಸ್ ತಂಡ ಗುರುವಾರ ನಡೆದ ಪಂದ್ಯದಲ್ಲಿ ಸೋಲನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಮ್ಯಾಥ್ಯೂ ಶಾರ್ಟ್ 36 ರನ್, ಭಾನುಕಾ ರಾಜಪಕ್ಸ 20, ಜಿತೇಶ್ ಶರ್ಮಾ 25, ಸ್ಯಾಮ್ ಕರನ್ 22, ಶಾರುಖ್ ಖಾನ್ 22 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು.

ಗುಜರಾತ್ ಟೈಟಾನ್ಸ್ 154 ರನ್‌ಗಳ ಗುರಿಯನ್ನು ಬೆನ್ನತ್ತಿದ ಅವರು 19.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಚೇಸ್ ಮಾಡಿದರು. ಗುಜರಾತ್ ಟೈಟನ್ಸ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ 49 ಎಸೆತಗಳಲ್ಲಿ 67 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣವಾದರು. ವೃದ್ಧಿಮಾನ್ ಸಾಹ 19 ಎಸೆತಗಳಲ್ಲಿ 5 ಬೌಂಡರಿ ಸಹಿತ 30 ರನ್ ಗಳಿಸಿದರು.

ಐಪಿಎಲ್‌ 2023ರ ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಪಂಜಾಬ್ ಕಿಂಗ್ಸ್ ನಂತರ ಸತತವಾಗಿ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಸದ್ಯ 4 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಮೂರು ಪಂದ್ಯಗಳನ್ನು ಗೆದ್ದು 6 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಮೂರನೇ ಸ್ಥಾನದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+