KL Rahul: ಡೆಲ್ಲಿಯಲ್ಲಿ ಕನ್ನಡ ಮಣ್ಣಿನ ಮಗ ಕೆಎಲ್‌ ರಾಹುಲ್‌ ದರ್ಬಾರ್; ಐಪಿಎಲ್‌ನಲ್ಲಿ ಹೊಸ ದಾಖಲೆ

KL Rahul: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್‌ 25) ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ರೋಚಕ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕನ್ನಡಿಗ ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ಆಡಿ ಮಿಂಚಿದರು. ಅವರು ಅಜೇಯ 152 ರನ್‌ ಸಿಡಿಸಿ ತಂಡದ ಮೊತ್ತವನ್ನು 260ರ ಗಡಿ ದಾಟಿಸಿ ಗಮನ ಸೆಳೆದರು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 264 ರನ್‌ಗಳನ್ನು ಕಲೆಹಾಕಿತು. ಇದರಲ್ಲಿ ಬಹುತೇಕ ರನ್‌ಗಳ ಪಾಲು ಕನ್ನಡಿಗ ಕೆ.ಎಲ್‌. ರಾಹುಲ್‌ ಅವರದ್ದೇ ಆಗಿದೆ. ಈ ಮೂಲಕ ಅವರು ಅಪರೂಪದ ದಾಖಲೆಯೊಂದನ್ನು ಕೂಡ ಮಾಡಿದ್ದಾರೆ.

Kannadiga KL Rahul Smashes 152 Breaks IPL Record as Delhi capitals Post 264 vs Punjab Kings

ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್‌ ರಾಹುಲ್‌

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆ.ಎಲ್.ರಾಹುಲ್ ಕೇವಲ 67 ಎಸೆತಗಳಲ್ಲಿ ಅಜೇಯ 152 ರನ್ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇವರ ಈ ಅಮೋಘ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 9 ಭರ್ಜರಿ ಸಿಕ್ಸರ್‌ಗಳು ಸೇರಿವೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ರಾಹುಲ್ ಪಾತ್ರರಾಗಿದ್ದಾರೆ. ರಾಹುಲ್‌ ಅಭಿಷೇಕ್ ಶರ್ಮಾ ಅವರ 141 ರನ್‌ಗಳ ದಾಖಲೆಯನ್ನು ಮುರಿದಿದ್ದಾರೆ.

ಡೆಲ್ಲಿ ಪರ ರಾಹುಲ್‌, ನಿತೀಶ್ ರಾಣಾ ಅಬ್ಬರದ ಆಟ

ರಾಹುಲ್ ಅವರ ಈ ಸ್ಫೋಟಕ ಆಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಮತ್ತೊಂದೆಡೆ ನಿತೀಶ್ ರಾಣಾ ಕೂಡ ಅಬ್ಬರದ ಬ್ಯಾಟಿಂಗ್ ಮಾಡಿ ಕೇವಲ 44 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್ ಸಹಿತ 91 ರನ್ ಚಚ್ಚಿದರು. ಈ ಇಬ್ಬರು ಬ್ಯಾಟರ್‌ಗಳು ಎರಡನೇ ವಿಕೆಟ್‌ಗೆ ಕೇವಲ 95 ಎಸೆತಗಳಲ್ಲಿ 220 ರನ್‌ಗಳ ಭರ್ಜರಿ ಜೊತೆಯಾಟವಾಡಿ ಪಂಜಾಬ್ ಬೌಲರ್‌ಗಳನ್ನು ಬಗ್ಗುಬಡಿದರು. ಇನ್ನೂ ಐಪಿಎಲ್‌ನಲ್ಲಿ 150 ರನ್ ಗಡಿ ದಾಟಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕನ್ನಡಿಗ ಕೆ.ಎಲ್.ರಾಹುಲ್ ಅವರು ಪಾತ್ರರಾಗಿದ್ದಾರೆ. ಇನ್ನುಳಿದಂತೆ ಪಾತುಮ್ ನಿಸ್ಸಾಂಕ 11(7), ಡೇವಿಡ್‌ ಮಿಲ್ಲರ್ 3(3) ರನ್‌ ಗಳಿಸಿದರು ಅಷ್ಟೇ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+