Krishnappa Gowtham Retirement: ಕನ್ನಡಿಗ ಕೃಷ್ಣಪ್ಪ ಗೌತಮ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ
Krishnappa Gowtham Retirement: ಕನ್ನಡಿಗ ಕೃಷ್ಣಪ್ಪ ಗೌತಮ್ ಅವರು ತಮ್ಮ 37ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್ ಬಾಯ್ ಹೇಳಿದ್ದಾರೆ. ಇನ್ನೂ ಇವರು ದೇಶಿಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಮಾಡಿದ ಸಾಧನೆಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕನ್ನಡಿಗ ಕೃಷ್ಣಪ್ಪ ಗೌತಮ್ ಅವರು 14 ವರ್ಷಗಳ ಕ್ರಿಕೆಟ್ ವೃತ್ತಿಗೆ ಸೋಮವಾರ (ಡಿಸೆಂನರ್ 22) ನಿವೃತ್ತಿ ಘೋಷಿಸಿದರು. ಆಫ್ ಸ್ಪಿನ್ನರ್ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದ ಗೌತಮ್, ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಅಲ್ಲದೆ, ಟೀಂ ಇಂಡಿಯಾಗೆ ಭಾರತ ತಂಡದ ಪರ ಕೇವಲ ಒಂದು ಪಂದ್ಯವನ್ನಷ್ಟೇ ಆಡಿದ್ದಾರೆ.

ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ಮೂಲಕ ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದರು. 2021ರಲ್ಲಿ ಮೊದಲು ಟೀಮ್ ಇಂಡಿಯಾ ಪರ ನೆಟ್ ಬೌಲರ್ ಆಗಿದ್ದು, ಅದೇ ವರ್ಷದ ಕೊನೆಯಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಆಯ್ಕೆ ಆದರು. ಕೊಲಂಬೊದಲ್ಲಿ ಒಂದು ಟಿ-20 ಪಂದ್ಯವನ್ನು ಆಡಿ ಕೇವಲ ಒಂದು ವಿಕೆಟ್ ಕಬಳಿಸಿದರು. ಆದರೂ, ಈ ಸರಣಿ ನಂತರ ಅವರಿಗೆ ಭಾರತದ ಪರ ಅಂತಾರಾಷ್ಟ್ರೀಯ ಪಂದ್ಯ ಆಡುವ ಅವಕಾಶವೇ ಸಿಗದಂತಾಯಿತು. ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ಐಪಿಎಲ್ ತಂಡಗಳಲ್ಲಿ ಆಡಿದ್ದಾರೆ.
ಅವರು ಕರ್ನಾಟಕ ತಂಡಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಇವರಿಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದು, ಐಪಿಎಲ್‌ನಲ್ಲಿ ಮೂರು ಸ್ಟಾರ್ ತಂಡಗಳಲ್ಲಿ ಆಡಿದ್ದಾರೆ.
ಆಫ್ ಸ್ಪಿನ್ನರ್ ಹಾಗೂ ಕೆಳಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಇವರು ಹೆಸರುವಾಸಿ ಆಗಿದ್ದರು. ಅವರ ಕ್ರಿಕೆಟ್ ಪ್ರಯಾಣ 2012ರ ರಣಜಿ ಟ್ರೋಫಿಯೊಂದಿಗೆ ಪ್ರಾರಂಭ ಆಯಿತು. ಉತ್ತರ ಪ್ರದೇಶ ವಿರುದ್ಧ ಮೊದಲ ಪಂದ್ಯ ಆಡಿದ್ದರು. ಈ ವೇಳೆ ತಮ್ಮ ಸ್ಪಿನ್ ಬೌಲಿಂಗ್ ದಾಳಿ ಮೂಲಕ ಸ್ಟಾರ್ ಬ್ಯಾಟರ್‌ಗಳನ್ನೇ ಔಟ್ ಮಾಡಿ ಗಮನ ಸೆಳೆದರಿದ್ದರು.
2016-17ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಗೌತಮ್ ಆ ಆವೃತ್ತಿಯಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದರು. ಅದೇ ಆವೃತ್ತಿಯಲ್ಲಿ ಮೈಸೂರಿನಲ್ಲಿ ನಡೆದ ಅಸ್ಸಾಂ ವಿರುದ್ಧ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಪ್ರಥಮ ದರ್ಜೆ ಮತ್ತು ಲಿಸ್ಟ್ ಎ ಪಂದ್ಯಗಳನ್ನು ಸೇರಿದಂತೆ ಒಟ್ಟು 320ಕ್ಕೂ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿರುವ ಅವರು ಹಲವಾರು ಇನ್ನಿಂಗ್ಸ್‌ಗಲ್ಲಿ ಬ್ಯಾಟಿಂಗ್ನಲ್ಲೂ ಅಬ್ಬರಿಸಿದ್ಧಾರೆ.
2023ರ ವರೆಗೆ ಕರ್ನಾಟಕ ತಂಡದ ಪ್ರಮುಖ ಸದಸ್ಯರಾಗಿದ್ದ ಗೌತಮ್, 2021ರ ಶ್ರೀಲಂಕಾ ಪ್ರವಾಸದಲ್ಲಿ ಭಾರತದ ಪರ ಏಕೈಕ ಏಕದಿನ ಪಂದ್ಯವನ್ನಾಡಿ ಒಂದು ವಿಕೆಟ್ ಸಹ ಕಬಳಿಸಿದ್ದರು. ನಂತರ ಅವರು ಟೀಂ ಇಂಡಿಯಾ ಪರ ಎಂದಿಗೂ ಆಡಲು ಅವಕಾಶ ಸಿಗಲಿಲ್ಲ. ಇನ್ನೂ ಐಪಿಎಲ್‌ನಲ್ಲಿ ಅತ್ಯಂತ ದುಬಾರಿ ಅನ್‌ಕ್ಯಾಪ್ಡ್ ಆಟಗಾರ ಎನಿಸಿಕೊಂಡಿದ್ದರು. ಐಪಿಎಲ್ 2021ರ ಹರಾಜಿನಲ್ಲಿ, ಸಿಎಸ್‌ಕೆ 9.25 ಕೋಟಿ ನೀಡಿ ಖರೀದಿ ಮಾಡಿತ್ತು.
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಪ್ರತಿನಿಧಿಸಿದ್ದರು. ಇನ್ನು ಕರ್ನಾಟಕ ಪ್ರೀಮಿಯರ್ ಲೀಗ್‌ನ ಒಂದೇ ಪಂದ್ಯದಲ್ಲಿ 134 ರನ್ ಬಾರಿಸಿ 8 ವಿಕೆಟ್‌ಗಳನ್ನು ಪಡೆದುಕೊಳ್ಳುವ ಮೂಲಕ ಅದ್ಭುತ ದಾಖಲೆ ಮಾಡಿದ್ದಾರೆ. ಹೀಗೆ ಕೃಷ್ಣಪ್ಪ ಗೌತಮ್ ಅವರು ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರದರ್ಶನ ತೋರಿ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್ ಬಾಯ್ ಹೇಳಿದರು.












Click it and Unblock the Notifications