Karnataka Bulldozers: ಸಿಸಿಎಲ್ ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್
ಶುಕ್ರವಾರ ಕನ್ನಡಿಗರಿಗೆ ಡಬಲ್ ಖುಷಿ, ಒಂದು ಕಡೆ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿದೆ. ಮತ್ತೊಂದೆಡೆ ಸೆಲಿಬ್ರಿಟಿ ಕ್ರಿಕೆಟ್ ಲೀಗ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ತಲುಪಿದೆ.
ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಬೆಂಗಾಲ್ ಟೈಗರ್ಸ್ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಸಿಸಿಎಲ್ ಪಂದ್ಯಗಳನ್ನು 10 ಓವರ್ ಗಳ 4 ಇನ್ನಿಂಗ್ಸ್‌ಗಳಲ್ಲಿ ಆಡಲಾಗುತ್ತದೆ. ಪ್ರತಿ ತಂಡ ಎರಡು ಇನ್ನಿಂಗ್ಸ್ ಬ್ಯಾಟಿಂಗ್ ಮತ್ತು ಎರಡು ಇನ್ನಿಂಗ್ಸ್ ಬೌಲಿಂಗ್ ಮಾಡುತ್ತದೆ. ಟಾಸ್ ಗೆದ್ದ ಬೆಂಗಾಲ್ ಟೈಗರ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
ಮೊದಲ ಇನ್ನಿಂಗ್ಸ್‌ನಲ್ಲಿ ಬೆಂಗಾಲ್ ಟೈಗರ್ಸ್ 10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 86 ರನ್ ಗಳಿಸಿತು. ಜಾಮಿ 30 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ಬೆಂಗಾಲ್ ತಂಡಕ್ಕೆ ನೆರವಾದರು. ಜಯರಾಮ್ ಕಾರ್ತಿಕ್ 2 ಓವರ್ ಗಳಲ್ಲಿ 11 ರನ್ ನೀಡಿ 1 ವಿಕೆಟ್ ಪಡೆದರು.
ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 114 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಮೂಲಕ ಕರ್ನಾಟಕ ಬುಲ್ಡೋಜರ್ಸ್ 28 ರನ್‌ಗಳ ಮುನ್ನಡೆ ಸಾಧಿಸಿತು. ಜಯರಾಮ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು. ರಾಜೀವ್ 11 ಎಸೆತಗಳಲ್ಲಿ 23 ರನ್, ಪ್ರದೀಪ್ 17 ಎಸೆತಗಳಲ್ಲಿ 23 ರನ್ ಗಳಿಸಿದರು.
ಬೃಹತ್ ಮೊತ್ತ ಗಳಿಸಿದ ಬೆಂಗಾಲ್
28 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬೆಂಗಾಲ್ ಟೈಗರ್ಸ್ ಬೃಹತ್ ಮೊತ್ತ ಕಲೆಹಾಕಿತು. 10 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿತು. ಈ ಮೂಲಕ ಕರ್ನಾಟಕ ತಂಡಕ್ಕೆ 100 ರನ್‌ಗಳ ಗುರಿ ನೀಡಿತು.
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ಬುಲ್ಡೋಜರ್ಸ್ 8 ಓವರ್ ಗಳಲ್ಲಿ 100 ರನ್ ಗಳಿಸುವ ಮೂಲಕ ಇನ್ನು ಎರಡು ಓವರ್ ಬಾಕಿ ಇರುವಂತೆ ಪಂದ್ಯ ಗೆದ್ದು ಸಂಭ್ರಮಿಸಿತು. ರಾಜೀವ್ 14 ಎಸೆತಗಳಲ್ಲಿ ಅಜೇಯ 40 ರನ್ ಗಳಿಸಿದರು. ಕರಣ್ 12 ಎಸೆತಗಳಲ್ಲಿ 22 ರನ್ ಗಳಿಸಿದರೆ, ಜೆಕೆ 16 ಎಸೆತಗಳಲ್ಲಿ 20 ರನ್ ಗಳಿಸಿದರು.
-
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ











Click it and Unblock the Notifications