Get Updates
Get notified of breaking news, exclusive insights, and must-see stories!

Vijay Hazare Trophy: ಹರಿಯಾಣ ಮಣಿಸಿ ವಿಜಯ್ ಹಜಾರೆ ಟ್ರೋಫಿ ಫೈನಲ್‌ ತಲುಪಿದ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕದ ಗೆಲುವಿನ ಓಟ ಮುಂದುವರೆದಿದೆ. ಕ್ವಾರ್ಟರ್ ಫೈನಲ್‌ನಲ್ಲಿ ಬರೋಡಾ ವಿರುದ್ಧ 5 ರನ್‌ಗಳ ರೋಚಕ ಗೆಲುವು ಸಾಧಿಸಿ ಫೈನಲ್ ತಲುಪಿದ್ದ ಕರ್ನಾಟಕ ಸೆಮಿಫೈನಲ್‌ನಲ್ಲಿ ಹರಿಯಾಣ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಹಾಲಿ ಚಾಂಪಿಯನ್‌ ಹರಿಯಾಣ ಎರಡನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸಿಗೆ ಕರ್ನಾಟಕ ಅಡ್ಡಿಯಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

karnataka defeats haryana to reach vijay hazare trophy final

ಮೊದಲು ಬ್ಯಾಟಿಂಗ್ ಮಾಡಿದ ಹರಿಯಾಣ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 237 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ಅಭಿಲಾಶ್ ಶೆಟ್ಟಿ 10 ಓವರ್ ಗಳಲ್ಲಿ 34 ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆಯುವ ಮೂಲಕ ಹರಿಯಾಣಕ್ಕೆ ಕಡಿವಾಣ ಹಾಕಿದರು. ಪ್ರಸಿದ್ಧ್ ಕೃಷ್ಣ ಮತ್ತು ಶ್ರೇಯಸ್ ಗೋಪಾಲ್ ತಲಾ ಎರಡು ವಿಕೆಟ್ ಪಡೆದರು. ಹಾರ್ದಿಕ್ ರಾಜ್ ಒಂದು ವಿಕೆಟ್ ಪಡೆದುಕೊಂಡರು.

ಹರಿಯಾಣ ಪರವಾಗಿ ನಾಯಕ ಅಂಕಿತ್ ಕುಮಾರ್ 48 ರನ್ ಗಳಿಸಿದರೆ, ರಾಣಾ 44 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ಇನ್ಯಾವ ಆಟಗಾರರು ಹೆಚ್ಚಿನ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ.

ಪಡಿಕ್ಕಲ್, ಸ್ಮರಣ್ ಜವಾಬ್ದಾರಿಯುತ ಆಟ

238 ರನ್‌ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಪಂದ್ಯಾವಳಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದ ನಾಯಕ ಮಯಾಂಕ್ ಅಗರ್ವಾಲ್ ಯಾವುದೇ ರನ್ ಗಳಿಸದೆ ಔಟಾದರು. ಅನೀಶ್ ಕೆವಿ ಕೂಡ 22 ರನ್ ಗಳಿಸಿದರು. ದೇವದತ್ ಪಡಿಕ್ಕಲ್ ಮತ್ತು ಸ್ಮರಣ್ ರವಿಚಂದ್ರನ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು.

ದೇವದತ್ ಪಡಿಕ್ಕಲ್ 113 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್ ಸಹಿತ 86 ರನ್ ಗಳಿಸಿದರೆ, ಸ್ಮರಣ್ ರವಿಚಂದ್ರನ್ 94 ಎಸೆತಗಳಲ್ಲಿ 76 ರನ್ ಗಳಿಸಿದರು. ಈ ಜೋಡಿ 3 ನೇ ವಿಕೆಟ್‌ಗೆ 128 ರನ್ ಕಲೆಹಾಕಿದರು. ಶ್ರೇಯಸ್ ಗೋಪಾಲ್ 20 ಎಸೆತಗಳಲ್ಲಿ ಅಜೇಯ 23 ರನ್ ಗಳಿಸಿ ಗೆಲುವಿನ ದಡ ತಲುಪಿಸಿದರು.

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ ಫೈನಲ್ ತಲುಪಿದ್ದು ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. 2019-20ರ ಆವೃತ್ತಿಯಲ್ಲಿ ಕರ್ನಾಟಕ ಕೊನೆಯ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಗೆದ್ದಿತ್ತು, ಈವರೆಗೂ ಮೂರು ಬಾರಿ ಟ್ರೋಫಿ ಗೆದ್ದಿರುವ ಕರ್ನಾಟಕ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+