IND vs ENG Test: ಎರಡನೇ ಟೆಸ್ಟ್‌ಗೆ ಎಷ್ಟು ಕನ್ನಡಿಗರಿಗೆ ಸಿಗತ್ತೇ ಚಾನ್ಸ್?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಜುಲೈ 2 ರಿಂದ ಎಡ್ಜ್‌ಬಸ್ಟ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸುವ ಆಸೆಯನ್ನು ಟೀಮ್ ಇಂಡಿಯಾ ಹೊದಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡಗೆ ಸವಾಲಿನ ಮೊತ್ತವನ್ನು ನೀಡಿದರೂ, ಅದನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಈ ವೇಳೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಬದಲಾವಣೆ ಸಾಧ್ಯತೆ ದಟ್ಟವಾಗಿ ಕಾಣುತ್ತದೆ.
27 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮೂವರು ಕರ್ನಾಟಕದ ಆಟಗಾರರು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಈ ಮೂವರಲ್ಲಿ ಇಬ್ಬರು ತಮ್ಮ ಕ್ಷಮತೆಯನ್ನು ಸಾಬೀತು ಪಡಿಸುವಲ್ಲಿ ವಿಫಲರಾದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರರ ಬದಲಗೆ ಬೇರೆ ಆಟಗಾರರನ್ನು ಸೇರಿಸಿಕೊಳ್ಳಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಅಂದಹಾಗೆ ತಂಡದಿಂದ ಹೊರ ನಡೆಯುವ ಕನ್ನಡಿಗ ಯಾರು ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ಈ ವೇಳೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರನ್ನು ಟೀಮ್ ಮ್ಯಾನೇಜ್ಮೆಂಟ್ ತಂಡದಿಂದ ಹೊರಗಿಡುವ ಪ್ರಶ್ನೆ ಇಲ್ಲವೇ ಇಲ್ಲ. ಇವರು ಲೀಡ್ಸ್ ಅಂಗಳದಲ್ಲಿ ಮೊದಲ ಇನಿಂಗ್ಸ್‌ನಲ್ಲೇ ತಮ್ಮ ಕ್ಷಮತೆ ಸಾಬೀತು ಪಡಿಸಿದ್ದರು. ಆದರೆ ದೊಡ್ಡ ಇನಿಂಗ್ಸ್ ಕಟ್ಟಲು ಸಾಧ್ಯವೇ ಆಗಿರಲಿಲ್ಲ. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಹೀಗಾಗಿ ಟೀಮ್ ಮ್ಯಾನೇಜ್ಮೆಂಟ್ ಇವರನ್ನು ಬಿಡುವ ಪ್ರಶ್ನೇ ಇಲ್ಲವೇ ಇಲ್ಲ.
ಕರುಣ್ ನಾಯರ್
8 ವರ್ಷಗಳ ಬಳಿಕ ಟೀಮ್ ಇಂಡಿಯಾಕ್ಕೆ ಕಂಬ್ಯಾಕ್ ಮಾಡಿರುವ ಕರುಣ್ ನಾಯರ್, ದೇಶೀಯ ಟೂರ್ನಿಗಳಲ್ಲಿ ನಡೆಸಿದ ಆರ್ಭಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೀಡುವಲ್ಲಿ ವಿಫಲರಾದರು. ಇವರು ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ತಂಡಕ್ಕೆ ಅಗತ್ಯವಿದ್ದಾಗ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದ, ಇವರ ಸ್ಥಾನದ ಮೇಲೂ ಅಪಾಯದ ತೂಗುಗತ್ತಿ ನೇತಾಡುತ್ತಿದೆ. ಇಲ್ಲವೇ ಶುಭಮನ್ ಗಿಲ್ ಹಾಗೂ ಕೋಚ್ ಗೌತಮ್ ಗಂಭೀರ್ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಇದೆ.
ಪ್ರಸಿದ್ಧ್ ಕೃಷ್ಣಾ
ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗಕ್ಕೆ ಬಲ ತುಂಬಿದ ಆಟಗಾರ ಪ್ರಸಿದ್ಧ್ ಕೃಷ್ಣಾ. 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸೊಗಸಾದ ಪ್ರದರ್ಶನ ನೀಡಿ, ಪರ್ಪಲ್ ಕ್ಯಾಪ್ ತಮ್ಮ ಮುಡಿಗೆ ಏರಿಸಿಕೊಂಡಿದ್ದರು. ಆದರೆ ಇದೇ ಪ್ರದರ್ಶನವನ್ನು ಟೀಮ್ ಇಂಡಿಯಾ ಪರ ನೀಡುವಲ್ಲಿ ವಿಫಲರಾದರು. ಇವರು ನಿಶ್ಚಿತವಾಗಿ ಮೊದಲ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ ವಿಕೆಟ್‌ಗಳನ್ನು ಪಡೆದು ಸೈ ಎನಿಸಿಕೊಂಡಿದ್ದಾರೆ. ಆದರೆ ರನ್‌ಗಳನ್ನು ನೀಡಿ ಕೈ ಸುಟ್ಟುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20 ಮಾದಾರಿಯ ಎಕನಾಮಿ ಹೊಂದಿರುವ ಪ್ರಸಿದ್ಧ್ ಅವರ ಸ್ಥಾನವೂ ಸಹ ಅಲುಗಾಡುತ್ತಿದೆ.
ಪ್ರಸಿದ್ಧ್ ತಮ್ಮ ಎತ್ತರದ ಲಾಭವನ್ನು ಪಡೆದು ಎದುರಾಳಿಗಳಿಗೆ ಕಾಟ ನೀಡಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ವಿಕೆಟ್ ಪಡೆದರು ಪ್ರಸಿದ್ಧ ರನ್‌ಗಳಿಗೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ.












Click it and Unblock the Notifications