Ranji Trophy: ಸ್ಮರಣ್ ದ್ವಿಶತ; ರಾಜ್ಯಕ್ಕೆ 420 ರನ್‌ಗಳ ಮುನ್ನಡೆ ಸಾಧಿಸಿದ ಕರ್ನಾಟಕ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂಜಾಬ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಕರ್ನಾಟಕ ಪಂಜಾಬ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿತ್ತು, ಇದೀಗ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡುತ್ತಿರುವ ಕರ್ನಾಟಕ ಈಗಾಗಲೇ 420 ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಪಡೆದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್‌ನಲ್ಲಿ 55 ರನ್‌ಗಳಿಗೆ ಆಲೌಟ್ ಆಗಿತ್ತು. ನಾಯಕ ಶುಭಮನ್ ಗಿಲ್ ರಣಜಿಯಲ್ಲೂ ವೈಫಲ್ಯ ಮುಂದುವರೆಸಿದರು. ವಿ ಕೌಶಿಕ್ 4 ವಿಕೆಟ್ ಪಡೆದರೆ, ಅಭಿಲಾಶ್ ಶೆಟ್ಟಿ 3 ವಿಕೆಟ್ ಪಡೆದಿದ್ದರು. ಪ್ರಸಿದ್ಧ್ ಕೃಷ್ಣ 2 ವಿಕೆಟ್ ಮತ್ತು ಯಶೋವರ್ಧನ್ ಪರಂತಾಪ್ 1 ವಿಕೆಟ್ ಪಡೆದರು.

ಸ್ಮರಣ್ ರವಿಚಂದ್ರನ್ ದ್ವಿಶತಕ
ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 199 ರನ್ ಗಳಿಸುವ ಮೂಲಕ 144 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು. ಎರಡನೇ ದಿನದಾಟ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಈ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು ಗೆಲುವಿನ ವಿಶ್ವಾಸದಲ್ಲಿದೆ.
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಮಿಂಚಿದ್ದ ಸ್ಮರಣ್ ರವಿಚಂದ್ರನ್ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ರಣಜಿಯಲ್ಲೂ ಮುಂದುವರೆಸಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸುವ ಮೂಲಕ ಕರ್ನಾಟಕ ಬೃಹತ್ ಮುನ್ನಡೆ ಪಡೆಯುವಲ್ಲಿ ಸಹಾಯ ಮಾಡಿದ್ದಾರೆ.
277 ಎಸೆತಗಳಲ್ಲಿ 25 ಬೌಂಡರಿ 3 ಸಿಕ್ಸರ್ ಸಹಿತ 203 ರನ್ ಗಳಿಸಿ ಔಟಾದರು. ಸ್ಮರಣ್ ದ್ವಿಶತಕ ಗಳಿಸಿದರೆ, ಅಭಿನವ್ ಮನೋಹರ್ 34 ರನ್ ಗಳಿಸಿದ್ದೇ ಕರ್ನಾಟಕ ಪರವಾಗಿ ದಾಖಲಾದ ಎರಡನೇ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಅನೀಶ್ ಕೆವಿ 33 ರನ್, ಶ್ರೇಯಸ್ ಗೋಪಾಲ್ 31 ರನ್ ಗಳಿಸಿದರು.
ಪಂಜಾಬ್‌ಗೆ ಆರಂಭಿಕ ಆಘಾತ
ಅಂತಿಮವಾಗಿ ಕರ್ನಾಟಕ 475 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಕಿಂಗ್ಸ್ ಎರಡನೇ ದಿನದಾಟದ ಅಂತ್ಯಕ್ಕೆ 24 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿದೆ. ಪ್ರಭ್‌ಸಿಮ್ರನ್ ಸಿಂಗ್ ಕೇವಲ 1 ರನ್ ಗಳಿಸಿ ಔಟಾದರೆ, ಅನ್ಮೋಲ್‌ಪ್ರೀತ್ ಸಿಂಗ್ 14 ರನ್ ಗಳಿಸಿ ಔಟಾದರು. ಶುಭಮನ್ ಗಿಲ್ ಅಜೇಯ 7 ರನ್ ಗಳಿಸಿದ್ದು ಮೂರನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.












Click it and Unblock the Notifications