Karnataka Weather: ಕೈಕೊಟ್ಟ ಮುಂಗಾರು, ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಭಾರಿ ಮಳೆ ಮುನ್ಸೂಚನೆ

Karnataka Weather: ರಾಜ್ಯದಲ್ಲಿ ಇಷ್ಟೊತ್ತಿಗಾಗಲೇ ಮುಂಗಾರು ಶುರುವಾಗಬೇಕಿತ್ತು. ಆದರೆ ಈ ಬಾರಿ ಮನ್ಸೂನ್ ಮಾರುತಗಳು ದುರ್ಬಲಗೊಂಡಿದ್ದು, ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಮಳೆ ಮುಂದುವರೆದಿದೆ. ಇದೀಗ ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ವರುರ್ಣ ಆರ್ಭಟಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka Weather Update Heavy Rain Alert Issued For These Districts Yellow Alert Declared

ಎರಡು ದಿನ ಭಾರಿ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆದರೆ, ಜೂನ್ 21ರಿಂದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಸಮುದ್ರ ತೀರದಲ್ಲಿ ಗಾಳಿಯ ವೇಗ ಎಂದಿಗಿಂತ ಹೆಚ್ಚಿರಲಿದೆ. ಆದ್ದರಿಂದದ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ನಿರೀಕ್ಷೆಯಿದೆ. ಅದರಲ್ಲೂ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಂದು ಜೋರು ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತ್ರಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನಕ್ಕೆ ಸ್ವಲ್ಪ ಮಟ್ಟಿಗೆ ಅಡ್ಡಿಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಜೊತೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಒಣಹವೆ ಕಂಟಿನ್ಯೂ

ಉಳಿದಂತೆ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕೆಲವು ಕಡೆಗಳಲ್ಲಿ ಮಾತ್ರ ಹಗುರವಾದ ತುಂತುರು ಮಳೆ ಬೀಳಬಹುದು ಎಂದು ತಿಳಿಸಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು (ಜೂನ್ 20) ಮೋಡ ಕವಿದ ವಾತಾವರಣದಿಂದ ಇರಲಿದ್ದು, ನಗರದ ಕೆಲವು ಭಾಗಗಳಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನ ಹವಾಮಾನ ವರದಿ

ಮತ್ತೊಂದೆಡೆ ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನವು 29ಯಿಂದ 30 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಕನಿಷ್ಠ ತಾಪಮಾನವು 21ರಿಂದ 22 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ. ಹಗಲಿನ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಶೇಕಡ 40 ರಷ್ಟಿದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಇದು ಶೇಕಡ 65ಕ್ಕೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+