Vijay Hazare Trophy: 5ನೇ ಬಾರಿ ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ 36 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಪ್ರಶಸ್ತಿ ಗೆದ್ದುಕೊಂಡಿದೆ. 5ನೇ ಬಾರಿ ವಿಜಯ್ ಹಜಾರೆ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಶನಿವಾರ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರ್ನಾಟಕ ವಿದರ್ಭ ವಿರುದ್ಧ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.
ಟಾಸ್ ಗೆದ್ದ ವಿದರ್ಭ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 348 ರನ್ ಗಳಿಸಿತು. ಕರ್ನಾಟಕ ಉತ್ತಮ ಆರಂಭವನ್ನೇನೂ ಪಡೆಯಲಿಲ್ಲ. ದೇವದತ್ ಪಡಿಕ್ಕಲ್ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಉತ್ತಮ ಫಾರ್ಮ್‌ನಲ್ಲಿದ್ದ ಮಯಾಂಕ್ ಅಗರ್ವಾಲ್ 31 ರನ್ ಗಳಿಸಿ ಔಟಾದರು. ಅನೀಶ್ ಕೆವಿ 27 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

67 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿದ್ದ ಕರ್ನಾಟಕ ಹಿನ್ನಡೆ ಅನುಭವಿಸಿತ್ತು, ಈ ಹಂತದಲ್ಲಿ ಜೊತೆಯಾದ ಸ್ಮರಣ್ ರವಿಚಂದ್ರನ್ ಮತ್ತು ಕೃಷ್ಣನ್ ಶ್ರೀಜಿತ್ ಕರ್ನಾಟಕ ತಂಡಕ್ಕೆ ಆಸರೆಯಾದರು. ಈ ಜೋಡಿ ನಾಲ್ಕನೇ ವಿಕೆಟ್‌ಗೆ 150 ರನ್ ಕಲೆ ಹಾಕುವ ಮೂಲಕ ಕರ್ನಾಟಕ ಬೃಹತ್ ಮೊತ್ತ ಕಲೆಹಾಕಲು ಅಡಿಪಾಯ ಹಾಕಿದರು.
ಕೃಷ್ಣನ್ ಶ್ರೀಜಿತ್ 74 ಎಸೆತಗಳಲ್ಲಿ 78 ರನ್ ಗಳಿಸಿದರು, ಸ್ಮರಣ್ ರವಿಚಂದ್ರನ್ 92 ಎಸೆತಗಳಲ್ಲಿ 9 ಬೌಂಡರಿ 1 ಸಿಕ್ಸರ್ ಸಹಿತ 101 ರನ್ ಗಳಿಸಿದರು. ಅಭಿನವ್ ಮನೋಹರ್ 42 ಎಸೆತಗಳಲ್ಲಿ 10 ಬೌಂಡರಿ 4 ಸಿಕ್ಸರ್ ಸಹಿತ 79 ರನ್ ಗಳಿಸುವ ಮೂಲಕ ಕರ್ನಾಟಕ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು.
ವಿದರ್ಭ ರೋಚಕ ಹೋರಾಟ
349 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ವಿದರ್ಭ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು ಗೆಲುವಿನ ವಿಶ್ವಾಸದಲ್ಲಿತ್ತು. ಆದರೆ ಕರ್ನಾಟಕ ಉತ್ತಮ ಬೌಲಿಂಗ್ ಮಾಡುವ ಮೂಲಕ ವಿದರ್ಭ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಪಂದ್ಯಾವಳಿಯಲ್ಲಿ ಅತ್ಯಮೋಘ ಪ್ರದರ್ಶನ ನೀಡಿದ್ದ ಕರುಣ್ ನಾಯರ್ ಫೈನಲ್‌ನಲ್ಲಿ ಎಡವಿದರು. 27 ರನ್‌ಗಳಿಗೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು.
ಯಶ್ ರಾಥೋಡ್ 22 ರನ್ ಗಳಿಸಿ ಔಟಾದರು. ಯಶ್ ಕದಂ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಧ್ರುವ್ ಶೋರೆ ಏಕಾಂಗಿ ಹೋರಾಟ ನೀಡಿದರು. 111 ಎಸೆತಗಳಲ್ಲಿ 110 ರನ್ ಗಳಿಸುವ ಮೂಲಕ ವಿದರ್ಭ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರು. ಜಿತೇಶ್ ಶರ್ಮಾ 34 ರನ್ ಗಳಿಸಿದರು. ಶುಭಮ್ ದುಬೆ 8 ರನ್, ಅಪೂರ್ವ್ ವಾಂಖಡೆ 12 ರನ್ ಗಳಿಸಿ ಔಟಾದರು.
ಕೊನೆಯಲ್ಲಿ ಅಬ್ಬರಿಸಿದ ಹರ್ಷ್ ದುಬೆ 32 ಎಸೆತಗಳಲ್ಲಿ 68 ರನ್ ಗಳಿಸುವ ಮೂಲಕ ವಿದರ್ಭ ತಂಡಕ್ಕೆ ಮತ್ತೊಮ್ಮೆ ಭರವಸೆ ಮೂಡಿಸಿದರು. ಆದರೆ ಅಭಿಲಾಶ್ ಶೆಟ್ಟಿ ಅವರ ವಿಕೆಟ್ ಪಡೆಯುವ ಮೂಲಕ ಆಟಕ್ಕೆ ತೆರೆ ಎಳೆದರು. 48.2 ಓವರ್ ಗಳಲ್ಲಿ 312 ರನ್ ಗಳಿಸಿ ಆಲೌಟ್ ಆಗುವ ಮೂಲಕ ಮೊದಲ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ಕಳೆದುಕೊಂಡಿತು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications