Vijay Hazare Trophy: 45 ಎಸೆತಗಳಲ್ಲೇ ಮಯಾಂಕ್ ಶತಕ; ಅರುಣಾಚಲ ಪ್ರದೇಶ ವಿರುದ್ಧ ಗೆದ್ದು ಬೀಗಿದ ಕರ್ನಾಟಕ
ವಿಜಯ್ ಹಜಾರೆ ಟ್ರೋಫಿ ಸರಣಿಯಲ್ಲಿ ಕರ್ನಾಟಕ ಗೆಲುವಿನ ಓಟವನ್ನು ಮುಂದುವರೆಸಿದೆ. ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ಅಭಿನವ್ ಮನೋಹರ್ ಮತ್ತು ಮಯಾಂಕ್ ಅಗರ್ವಾಲ್ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದರು.
ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ಕರ್ನಾಟಕದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. 43.2 ಓವರ್ ಗಳಲ್ಲಿ 166 ರನ್ ಗಳಿಸುಷ್ಟರಲ್ಲಿ ಆಲೌಟ್ ಆಯಿತು. ಅಭಿನವ್ ಸಿಂಗ್ ಅಜೇಯ 71 ರನ್ ಸಿಡಿಸುವ ಮೂಲಕ ಅರುಣಾಚಲ ಪ್ರದೇಶ 150 ರನ್‌ಗಳ ಗಡಿ ದಾಟಲು ಕಾರಣವಾದರು. ರಾಜೇಂದರ್ ಸಿಂಗ್ 30 ರನ್, ಹಾರ್ದಿಕ್ ವರ್ಮಾ 38 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ರನ್ ಗಳಿಸಲಿಲ್ಲ.

ವಾಸುಕಿ ಕೌಶಿಕ್ 4 ವಿಕೆಟ್ ಪಡೆದರೆ, ಹಾರ್ದಿಕ್ ರಾಜ್ ಕೂಡ 4 ವಿಕೆಟ್ ಪಡೆಯುವ ಮೂಲಕ ಅರುಣಾಚಲ ಪ್ರದೇಶದ ಬ್ಯಾಟಿಂಗ್ ಪಡೆಯನ್ನು ಕಾಡಿದರು. ಶ್ರೇಯಸ್ ಗೋಪಾಲ್ ಮತ್ತು ಮಯಾಂಕ್ ಅಗರ್ವಾಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಅಭಿನವ್, ಮಯಾಂಕ್ ಅಬ್ಬರದ ಬ್ಯಾಟಿಂಗ್
167 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ಕೇವಲ ಓವರ್ ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಅಭಿನವ್ ಮನೋಹರ್ ಆರಂಭದಲ್ಲಿ ಅಬ್ಬರಿಸಿದರೆ, ಬಳಿಕ ಮಯಾಂಕ್ ಅಗರ್ವಾಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು.
ಅಭಿನವ್ ಮನೋಹರ್ 41 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 66 ರನ್ ಗಳಿಸಿದರೆ, ನಾಯಕ ಮಯಾಂಕ್ ಅಗರ್ವಾಲ್ 45 ಎಸೆತಗಳಲ್ಲಿ 7 ಬೌಂಡರಿ 7 ಸಿಕ್ಸರ್ ಸಹಿತ ಅಜೇಯ 100 ರನ್ ಗಳಿಸುವ ಮೂಲಕ ಸತತ ಎರಡನೇ ಶತಕ ಸಿಡಿಸಿ ಸಂಭ್ರಮಿಸಿದರು. ಪಂಜಾಬ್ ವಿರುದ್ಧ ಕೂಡ ಅಜೇಯ ಶತಕ ಸಿಡಿಸಿದ್ದ ಮಯಾಂಕ್ ಕರ್ನಾಟಕ 1 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಲು ಸಹಾಯ ಮಾಡಿದ್ದರು.












Click it and Unblock the Notifications