Karun Nair: 3009 ದಿನಗಳ ಬಳಿಕ ಟೀಮ್ ಇಂಡಿಯಾ ಕಂ ಬ್ಯಾಕ್ ಮಾಡಿದ ಕನ್ನಡಿಗ
ಕರ್ನಾಟಕದ ಸ್ಟಾರ್ ಆಟಗಾರನ 8 ವರ್ಷದ ತಪ್ಪಸ್ಸಿಗೆ ಫಲ ಸಿಕ್ಕಿದೆ. ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಇನ್ನು ಪ್ರವಾಸಿ ಭಾರತ ತಂಡ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶವನ್ನು ಪಡೆದಿದೆ. ಭಾರತ ತಂಡವನ್ನು ಪ್ರಕಟಿಸಿದಾಗ ಕರ್ನಾಟದ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಖುಷಿ ತಂದಿತ್ತು.
ಟೀಮ್ ಇಂಡಿಯಾವನ್ನು ಇಂಗ್ಲೆಂಡ್‌ನಲ್ಲಿ ಶುಭಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಇವರು ತಂಡವನ್ನು ಪ್ರಕಟಿಸಿದಾಗ ಕನ್ನಡಿಗರಲ್ಲಿ ಖುಷಿ. 27 ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಆರಂಭಿಕರಾಗಿ ಕೆಎಲ್ ರಾಹುಲ್, ವೇಗಿಯಾಗಿ ಪ್ರಸಿದ್ಧ್ ಕೃಷ್ಣ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ.

ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ರನ್ ಮಹಲ್ ಕಟ್ಟಿದ್ದ ಕರ್ನಾಟಕದ ಕರುಣ್ ನಾಯರ್ ಮತ್ತೆ ಟೀಮ್ ಇಂಡಿಯಾಕ್ಕೆ ಕಂಬ್ಯಾಕ್ ಮಾಡುವಲ್ಲಿ ಸಫಲರಾಗಿದ್ದಾರೆ. ಇವರು ದೇಶೀಯ ಟೂರ್ನಿಯಲ್ಲಿ ಅಬ್ಬರಿಸಿದ್ದರು. ವಿಜಯ್ ಹಜಾರೆ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಇನ್ನು ರಣಜಿ ಟ್ರೋಫಿಯಲ್ಲಿ ವಿದರ್ಭ ಟ್ರೋಫಿಯನ್ನು ಗೆಲ್ಲುವಲ್ಲಿ ಇವರ ಕೊಡುಗೆ ಅಪಾರ. ಇವರ ಪ್ರದರ್ಶನವನ್ನು ಕಂಡು ಅಭಿಮಾನಿಗಳು ಇವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಆರಂಭದಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಸಮ್ಮತಿ ನೀಡಿರಲಿಲ್ಲ. ಆದರೆ ಕೊನೆಗೆ ಹಿರಿಯರ ಅನುಪಸ್ಥಿತಿಯ ಬಳಿಕ ಕರುಣ್‌ಗೆ ಆಡುವ ಅವಕಾಶ ಲಭಿಸಿದೆ.
ಕರುಣ್ ನಾಯರ್ ಭಾರತದ ಪರ 2017 ಮಾರ್ಚ್ 25 ರಂದು ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಲ್ಲಿಂದ ಇವರಿಗೆ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಆದರೆ ಈ ಬಾರಿ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಪರಿಣಾಮ ಇವರಿಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಈ ಬಾರಿ ಕರುಣ್ ಇಂಗ್ಲೆಂಡ್ ತಂಡವನ್ನು ಕಾಡಲು ಸಿದ್ಧರಾಗಿದ್ದಾರೆ. ಇದಕ್ಕೂ ಮೊದಲು ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧವೇ ಚೆನ್ನೈನಲ್ಲಿ ತ್ರಿಶತಕ ಬಾರಿಸಿ ಮಿಂಚಿದ್ದರು. ಈಗ ಮತ್ತೆ ಟೀಮ್ ಇಂಡಿಯಾ ಜೆರ್ಸಿ ತೊಟ್ಟು ಅಂಗಳದಲ್ಲಿ ಅಬ್ಬರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಕರುಣ್ ನಾಯರ್ ಸಾಧನೆ
33 ವರ್ಷದ ಕರುಣ್ ನಾಯರ್ ಈಗಾಗಲೇ ಟೀಮ್ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪನೆ ಮಾಡಿ ಯಶಸ್ಸು ಕಂಡಿರುವ ಆಟಗಾರ. ಇವರು ಆಡಿದ 6 ಟೆಸ್ಟ್ ಪಂದ್ಯಗಳ 7 ಇನಿಂಗ್ಸ್‌ಗಳಲ್ಲಿ 374 ರನ್ ಸಿಡಿಸಿದ್ದಾರೆ. ಇದರಲ್ಲಿ ಅಜೇಯ 303 ರನ್‌ಗಳ ಅಮೋಘ ಇನಿಂಗ್ಸ್ ಸಹ ಸೇರಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications