ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಬೊಮ್ಮಾಯಿ ಎದುರು ಮಹತ್ವದ ಬೇಡಿಕೆ ಇಟ್ಟ ಸಚಿವ ಕೆ.ಸಿ. ನಾರಾಯಣಗೌಡ!

|
Google Oneindia Kannada News

ಬೆಂಗಳೂರು, ಸೆ. 18: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ದೇಶದ ಕ್ರೀಡಾಪಟುಗಳ ಸಾಧನೆ ಎಲ್ಲರ ಕಣ್ಣು ತೆರೆಸಿದೆ. ಕ್ರೀಡೆಗೆ ಸೂಕ್ತ ತರಬೇತಿ ಸಿಗಬೇಕು, ತರಬೇತಿ ಕೊಡಲು ಸೂಕ್ತ ವ್ಯವಸ್ಥೆ ಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅದರಲ್ಲಿಯೂ ರಾಜ್ಯ ಕ್ರೀಡಾ ಇಲಾಖೆ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಅವರು ಇಷ್ಟದಿಂದಲೇ ಕ್ರೀಡಾ ಇಲಾಖೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆಯನ್ನು ಗಮನಲ್ಲಿಟ್ಟುಕೊಂಡು ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಅತ್ಯುತ್ತಮ ಕ್ರೀಡಾ ಪಟುಗಳನ್ನು ಗುರುತಿಸಿ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಅನುಷ್ಠಾನ ಮಾಡುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಬೇಡಿಕೆಯನ್ನು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ಅವರು ಸರ್ಕಾರದ ಮುಂದಿದ್ದಾರೆ. ಅವರ ಬಹುದೊಡ್ಡ ಬೇಡಿಕೆಗೆ ಸರ್ಕಾರ ಹೇಗೆ ಸ್ಪಂದನೆ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈಗಲ್‍ಟನ್ ರೆಸಾರ್ಟ್ ಅತಿಕ್ರಮಣ

ಈಗಲ್‍ಟನ್ ರೆಸಾರ್ಟ್ ಅತಿಕ್ರಮಣ

ರಾಮನಗರ ಜಿಲ್ಲಾಡಳಿತ ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್‍ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಂಡಿದೆ. ಆ ಮೂಲಕ ದೊಡ್ಡ ಕಾರ್ಯಾಚರಣೆಯನ್ನು ರಾಮನಗರ ಜಿಲ್ಲಾಡಳಿತ ಮಾಡಿದೆ.

ಈಗಲ್ಟನ್‌ ರೆಸಾರ್ಟ್‌ ಅತಿಕ್ರಮಿಸಿಕೊಂಡಿದ್ದ ವಿಶಾಲವಾದ ಆ ಜಾಗೆ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ಕೊಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾರೆ.

ಬೃಹತ್ ಕ್ರೀಡಾ ಸಮುಚ್ಚಯ ನಿರ್ಮಿಸಲು ಜಾಗೆ ಕೊಡಿ!

ಬೃಹತ್ ಕ್ರೀಡಾ ಸಮುಚ್ಚಯ ನಿರ್ಮಿಸಲು ಜಾಗೆ ಕೊಡಿ!

ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ ಕ್ರೀಡಾಕೂಟ, ಏಷಿಯನ್‍ ಗೇಮ್ಸ್‍ ಸೇರಿದಂತೆ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ತರಬೇತಿ ನೀಡಲು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರೀಡಾ ಇಲಾಖೆ ಇದಕ್ಕಾಗಿ ವಿಶಾಲ ನಿವೇಶನವನ್ನೂ ಶೋಧಿಸುತ್ತಿದೆ. ಪ್ರಸ್ತುತ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಒತ್ತುವರಿ ತೆರವು ಮಾಡಿ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ. ಈ ಪ್ರದೇಶ ಕ್ರೀಡಾ ತರಬೇತಿಗೆ ಅತ್ಯಂತ ಯೋಗ್ಯವಾಗಿದೆ ಎಂದು ನಾರಾಯಣಗೌಡ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ!

ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ!

ಜೊತೆಗೆ ಗಾಲ್ಫ್‍ ಕೋರ್ಟ್‍ ಕೂಡ ಈ ಸ್ಥಳದಲ್ಲಿದೆ. ಸಮತಟ್ಟಾಗಿರುವ ಈ ವಿಶಾಲ ಪ್ರದೇಶ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಯೋಗ್ಯವಾಗಿದೆ. ಬೆಂಗಳೂರಿಗೂ ಈ ಪ್ರದೇಶ ಸಮೀಪದಲ್ಲಿದೆ. ಆದ್ದರಿಂದ 77 ಎಕರೆ 18 ಗುಂಟೆ ಈ ಪ್ರದೇಶವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಎಂದು ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಸ್ತುತ ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಆಧುನೀಕರಣ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಕ್ರೀಡಾಂಗಣ ಉನ್ನತೀಕರಿಸಲಾಗುತ್ತಿದೆ. ಆದರೆ ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಇಷ್ಟೊಂದು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸಿದರೆ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸರ್ಕಾರರಕ್ಕೆ ವಿವರಿಸಿದ್ದಾರೆ.

ಬಿಡದಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟ ಆಯೋಜನೆ!

ಬಿಡದಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟ ಆಯೋಜನೆ!

ಅದರೊಂದಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಸಮೀಪದಲ್ಲೇ ಇದೆ. ಬೆಂಗಳೂರು ಮೈಸೂರು ನಡುವೆ ವಿಶಾಲ ರಸ್ತೆಯೂ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಈ ಸ್ಥಳ ಪ್ರಶಸ್ತವಾಗಲಿದೆ. ಆದ್ದರಿಂದ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್‍ ರೆಸಾರ್ಟ್‍ ನಿಂದ ಒತ್ತುವರಿ ತೆರವು ಮಾಡಿರುವ ಸರ್ಕಾರಿ ಗೋಮಾಳವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಕ್ರೀಡೆಗೆ ಪ್ರೋತ್ಸಾಹಿಸಿ ಎಂದು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

English summary
Sports Minister KC Narayana Gowda has written to CM Bommai that the 77-acre 18-acre land at Eagleton Resort has been cleared by the court order and give it to construct a sports complex. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X